LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

80ನೇ ಸ್ವಾತಂತ್ರ‍್ಯ ದಿನಾಚರಣೆ – ಮಾಣೆಕ್ ಷಾ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದ ಸಿಎಂ ಡಿಕೆಶಿ

Advertisement
Advertisement
Advertisement

ಬೆಂಗಳೂರು: ಇಂದು ದೇಶದೆಲ್ಲೆಡೆ 80ನೇ ಸ್ವಾತಂತ್ರ‍್ಯ ದಿನಾಚರಣೆಯ ಸಂಭ್ರಮ. ಇದರ ಅಂಗವಾಗಿ ಬೆಂಗಳೂರಿನ ಮಾಣೆಕ್ ಷಾ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅವರು ಧ್ವಜಾರೋಹಣ ನೆರವೇರಿಸಿದರು.

ಮುಖ್ಯಮಂತ್ರಿಗಳಾಗಿ ಡಿಕೆ ಶಿವಕುಮಾರ್‌ ಮೊದಲ ಬಾರಿಗೆ ಸಾರ್ವಜನಿಕ ಕಾರ್ಯಕ್ರಮದಲ್ಲಿ ನೆರವೇರಿಸಿದ ಧ್ವಜಾರೋಹಣ ಇದಾಗಿದೆ. ಸಿಎಂ ಧ್ವಜಾರೋಹಣ ನೆರವೇರಿಸುತ್ತಿದ್ದಂತೆ ವಂದೇ ಮಾತರಂ ಗೀತೆ ಹಾಗೂ ಪೊಲೀಸ್ ಬ್ಯಾಂಡ್ ನಿಂದ ರಾಷ್ಟ್ರಗೀತೆ ಪ್ರಸ್ತುತಿ ಪಡಿಸಲಾಯಿತು.

ಬೆಳಿಗ್ಗೆ 9 ಗಂಟೆಗೆ ಸರಿಯಾಗಿ ಧ್ವಜಾರೋಹಣ ನೆರವೇರಿಸಿದ ಬಳಿಕ ಸಿಎಂ ಡಿಕೆ ಶಿವಕುಮಾರ್ ತೆರೆದ ಜೀಪಿನಲ್ಲಿ ಗೌರವ ವಂದನೆ ಸ್ವೀಕರಿಸಿದರು.‌ ಸ್ವಾತಂತ್ರ‍್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಸಾರ್ವಜನಿಕರಿಗೆ ಅವಕಾಶ ಮಾಡಿಕೊಡಲಾಗಿದೆ.

 

ಇನ್ನೂ ಸಿಎಂ ಭಾಷಣದ ಬಳಿಕ ಮಾಣೆಕ್ ಷಾ ಮೈದಾನದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಈಗಾಗಲೇ ನವದೆಹಲಿಯ ಕೆಂಪುಕೋಟೆಯಲ್ಲಿ ಪ್ರಧಾನಿ ಮೋದಿ 13ನೇ ಭಾರಿ ಧ್ವಜಾರೋಹಣ ನೆರವೇರಿಸಿ, ದೇಶವನ್ನುದ್ದೇಶಿಸಿ ಮಾತನಾಡಿದ್ದಾರೆ.

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿಕಸಿತ ಭಾರತಕ್ಕಾಗಿ ಶ್ರಮಿಸೋಣ: ಮೂಗನೂರಮಠನೈಜಿರಿಯಾದ ಕತ್ತಲಲ್ಲಿ ಕಾರಿನ ಬಾಗಿಲು ಬಡಿದ ಮಕ್ಕಳು ಇಂದು ವೈದ್ಯರು: ಸದ್ಗುರು ಶ್ರೀ ಮಧುಸೂದನ ಸಾಯಿಅಂಡಮಾನ್‌ ಸಮುದ್ರದಲ್ಲಿ ಅತಿ ದೊಡ್ಡ ತ್ರಿವರ್ಣ ಧ್ವಜ ಅನಾವರಣ – ಆರ್‌.ಅಶೋಕ್‌ ಪುತ್ರ ಶರತ್‌ಗೆ ಸನ್ಮಾನತಿರಂಗ ಯಾತ್ರೆಯಲ್ಲಿ ಗಮನ ಸೆಳೆದ ಈಸೂರು ದಂಗೆಯ ಸ್ತಬ್ಧಚಿತ್ರ80ನೇ ಸ್ವಾತಂತ್ರ‍್ಯ ದಿನಾಚರಣೆ – ಮಾಣೆಕ್ ಷಾ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದ ಸಿಎಂ ಡಿಕೆಶಿಬೆಂಗಳೂರಲ್ಲಿ ಶಂಕಿತ ಉಗ್ರನ ಬಂಧನ80ನೇ ಸ್ವಾತಂತ್ರ್ಯೋತ್ಸವದ ಮುನ್ನಾದಿನ ದೇಶವನ್ನುದ್ದೇಶಿಸಿ ರಾಷ್ಟ್ರಪತಿ ಮಾಡಿದ ಭಾಷಣದ ಪೂರ್ಣ ಪಾಠ..ಕೆಂಪುಕೋಟೆಯಲ್ಲಿ ಪ್ರಧಾನಿ ಮೋದಿಗೆ ಗೌರವ ವಂದನೆ – ರಾಷ್ಟ್ರಗೀತೆಗೂ ಮುನ್ನ ಮೊಳಗಿದ ವಂದೇ ಮಾತರಂ ಗೀತೆಕೆಆರ್‌ಎಸ್ ಡ್ಯಾಂನಿಂದ ತಮಿಳುನಾಡಿಗೆ ಹರಿದ ಕಾವೇರಿ ನೀರುಮುಖ್ಯಮಂತ್ರಿಯಾಗಿ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದ ಡಿಕೆಶಿ