ಬೆಂಗಳೂರು: ಹೆದ್ದಾರಿಯಲ್ಲಿ ಕಾರೊಂದು ಧಗಧಗನೇ ಹೊತ್ತಿ ಉರಿದಿರುವ ಘಟನೆ ಬೆಂಗಳೂರು ಹೊರವಲಯ ಆನೇಕಲ್ ತಾಲೂಕಿನ ಹೊಸೂರುಮುಖ್ಯರಸ್ತೆ ನೆರಳೂರು ಗೇಟ್ ಬಳಿ ನಡೆದಿದೆ.
ಚಲಿಸುತ್ತಿದ್ದ ಕಾರಿನ ಎಂಜಿನ್‌ನಲ್ಲಿ ಹೊಗೆ ಕಾಣಿಸಿಕೊಂಡಿದೆ. ಕೂಡಲೇ ಕಾರು ರಸ್ತೆ ಬದಿ ನಿಲ್ಲಿಸಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಹೊಗೆ ಜೊತೆ ಬೆಂಕಿ ಕಿಡಿ ಕಾಣಿಸಿಕೊಂಡಿದೆ. ಈ ವೇಳೆ ಪೆಟ್ರೋಲ್ ಬಂಕ್ ಸಿಬ್ಬಂದಿ ಬೆಂಕಿ ನಂದಿಸಲು ಪರದಾಡಿದರು.
ನೋಡನೋಡುತ್ತಿದ್ದಂತೆ ಇಡೀ ಕಾರಿಗೆ ಬೆಂಕಿ ಆವರಿಸಿದ್ದು, ಕಾರು ಸಂಪೂರ್ಣ ಬೆಂಕಿಗಾಹುತಿಯಾಗಿದೆ. ಘಟನಾ ಸ್ಥಳಕ್ಕೆ ಅತ್ತಿಬೆಲೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.




