LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ದ್ವಿಚಕ್ರ ವಾಹನಕ್ಕೆ ಸಿಮೆಂಟ್ ಲಾರಿ ಡಿಕ್ಕಿ – ವಿದ್ಯಾರ್ಥಿನಿ ದಾರುಣ ಸಾವು

Advertisement

ಬೆಂಗಳೂರು: ದ್ವಿಚಕ್ರ ವಾಹನಕ್ಕೆ ಸಿಮೆಂಟ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿನಿ ದಾರುಣವಾಗಿ ಸಾವನ್ನಪ್ಪಿದ ಘಟನೆ ಬೆಂಗಳೂರು ಹೊರವಲಯ ಆನೇಕಲ್  ಪಟ್ಟಣದ ಹೊಸೂರು  ಮುಖ್ಯರಸ್ತೆಯಲ್ಲಿ ನಡೆದಿದೆ.

ಇಂಚರ (20) ಅಪಘಾತದಲ್ಲಿ ಸಾವಿಗೀಡಾದ ವಿದ್ಯಾರ್ಥಿನಿ. ಹೊಂಪಲಘಟ್ಟ ಗ್ರಾಮದ ನಿವಾಸಿ ಇಂಚರ ಬಿಸಿಎ ವ್ಯಾಸಂಗ ಮಾಡುತ್ತಿದ್ದಳು. ಇಂಚರ ಕಾಲೇಜಿಗೆ ದ್ವಿಚಕ್ರ ವಾಹನದಲ್ಲಿ ಬಂದು ಹೋಗುತ್ತಿದ್ದಳು. ಇಂದು ಕೂಡ ಎಂದಿನಂತೆ ಸ್ಕೂಟಿಯಲ್ಲಿ ಬಂದು ಕಾಲೇಜು ಮುಗಿಸಿಕೊಂಡು ಮನೆ ಕಡೆ ಹೋಗುವಾಗ ಅಪಘಾತ ಸಂಭವಿಸಿದೆ. 

ಹೊಸೂರು ರಸ್ತೆಯ ಸವೆರಾ ಟೀ ಸ್ಟಾಲ್ ಬಳಿ ಸ್ಕೂಟಿಗೆ ಹಿಂಬದಿಯಿಂದ ಲಾರಿ ಡಿಕ್ಕಿಯಾಗಿದೆ. ಲಾರಿ ಚಾಲಕನ ಅಜಾಗರೂಕತೆಯೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಆಸ್ಪತ್ರೆ ಬಳಿ ಕುಟುಂಬಸ್ಥರು ಮತ್ತು ಸ್ನೇಹಿತರ ಆಕ್ರಂದನ ಮುಗಿಲುಮುಟ್ಟಿದೆ. ಸದ್ಯ ಇಂಚರಾ ಮೃತದೇಹವನ್ನ ಆನೇಕಲ್ ಸರ್ಕಾರಿ ಆಸ್ಪತ್ರೆಯ ಶವಗಾರಕ್ಕೆ ರವಾನಿಸಲಾಗಿದೆ. ಆನೇಕಲ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. 

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸರ್ಕಾರಿ ಶಾಲೆಯಲ್ಲಿ ನಿಗೂಢ ಸ್ಫೋಟ – ಗೋಡೆ ಕುಸಿದು ಅಡುಗೆ ಸಿಬ್ಬಂದಿಗೆ ಗಾಯಡೀಸೆಲ್ ಬೆಲೆ ಏರಿಕೆಯಿಂದ ಸಾರಿಗೆ ನಿಗಮಗಳಿಗೆ 8 ಸಾವಿರ ಕೋಟಿ ನಷ್ಟ1 ಲಕ್ಷ ಲಂಚ ಪಡೆಯುತ್ತಿದ್ದಾಗ ರೆಡ್‌ಹ್ಯಾಂಡ್‌ ಆಗಿ ಸಿಕ್ಕಿಬಿದ್ದ ಅಗ್ನಿಶಾಮಕ ಅಧಿಕಾರಿರಾಜ್ಯದ 50 ಲಕ್ಷ ರೈತರಿಗೆ 2,500 ಇನ್‌ಪುಟ್ ಸಬ್ಸಿಡಿ: ಪರಮೇಶ್ವರ್ ಘೋಷಣೆಸಾವಿರಾರು ಮತದಾರರ ಹೆಸರು ತೆಗೆಯಲು ಅಭಯ್ ಪಾಟೀಲ್ ಪತ್ರ: ಬಂಧನಕ್ಕೆ ಹರಿಪ್ರಸಾದ್ ಆಗ್ರಹಲೋಕಾಯುಕ್ತರಿಂದ ಫೋನ್ ಪೇ ಪರಿಶೀಲನೆ, ಅಧಿಕಾರಿಗಳು ತಬ್ಬಿಬ್ಬುದ್ವಿಚಕ್ರ ವಾಹನಕ್ಕೆ ಸಿಮೆಂಟ್ ಲಾರಿ ಡಿಕ್ಕಿ – ವಿದ್ಯಾರ್ಥಿನಿ ದಾರುಣ ಸಾವುಪರಪ್ಪನ ಅಗ್ರಹಾರ ಜೈಲಿನ ವಾರ್ಡರ್‌ನಿಂದ ಹಲ್ಲೆ – ಡಾಬಾ ಮಾಲೀಕ ಸಾವುತಮಿಳುನಾಡಿಗೆ ಕಾವೇರಿ ನೀರು – ಸರ್ಕಾರದಿಂದ ನ್ಯಾಯಾಲಯದಲ್ಲಿ ಮೇಲ್ಮನವಿ: ಸಿಎಂ ಡಿಕೆಶಿಚೆನ್ನೈ – ಬೆಂಗಳೂರು ಎಕ್ಸ್‌ಪ್ರೆಸ್ ವೇಯಲ್ಲಿ ಡಿವೈಡರ್‌ಗೆ ಡಿಕ್ಕಿಯಾಗಿ ಕಾರು ಪಲ್ಟಿ; ಮೂವರು ದುರ್ಮರಣ