ಇಂದು ಭಾರತೀಯ ಜನತಾ ಪಕ್ಷ ಬೆಳಗಾವಿ ಮಹಾನಗರ ಹಾಗೂ ಉತ್ತರ ಮಂಡಲದ ವತಿಯಿಂದ ಭಾರತದ 80ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಆಯೋಜಿಸಿದ್ದ ಭವ್ಯ ತಿರಂಗಾ ರ್ಯಾಲಿ ದೇಶಭಕ್ತಿಯ ಸಂಭ್ರಮದೊಂದಿಗೆ ಯಶಸ್ವಿಯಾಗಿ ನೆರವೇರಿತು. 🇮🇳
ಧರ್ಮವೀರ ಸಂಭಾಜಿ ವೃತ್ತದಿಂದ ಕಾವೇರಿ ಕೋಲ್ಡ್ ಡ್ರಿಂಕ್ ವರೆಗೆ ಸಾಗಿದ ರ್ಯಾಲಿಯಲ್ಲಿ ನೂರಾರು ದೇಶಭಕ್ತರು ತ್ರಿವರ್ಣ ಧ್ವಜವನ್ನು ಹಿಡಿದು ಉತ್ಸಾಹದಿಂದ ಹೆಜ್ಜೆ ಹಾಕಿದರು. “ಭಾರತ್ ಮಾತಾ ಕಿ ಜೈ” ಹಾಗೂ “ವಂದೇ ಮಾತರಂ” ಘೋಷಣೆಗಳು ಇಡೀ ಪರಿಸರದಲ್ಲಿ ದೇಶಭಕ್ತಿಯ ಕಿಚ್ಚು ಹೊತ್ತಿಸಿದವು.
ರ್ಯಾಲಿಯಲ್ಲಿ ಭಾಗವಹಿಸಿ ಕಾರ್ಯಕ್ರಮಕ್ಕೆ ಶಕ್ತಿ ತುಂಬಿದ ಸೈನಿಕರು, ವಿದ್ಯಾರ್ಥಿಗಳು, ಪಕ್ಷದ ಮುಖಂಡರು, ಪದಾಧಿಕಾರಿಗಳು, ಕಾರ್ಯಕರ್ತರು, ಯುವಕರು, ಮಹಿಳೆಯರು, ಹಿರಿಯರು ಹಾಗೂ ಸಮಸ್ತ ನಾಗರಿಕರಿಗೆ ಹೃತ್ಪೂರ್ವಕ ಧನ್ಯವಾದಗಳು.

