ಬೆಂಗಳೂರು: ಇಲ್ಲಿನ ಗೊರಗುಂಟೆಪಾಳ್ಯದ ಟಿಎಂಟಿ ಜಂಕ್ಷನ್ ಬಳಿ ನಡೆದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ದ್ವಿಚಕ್ರ ವಾಹನಕ್ಕೆ ಗ್ಯಾಸ್ ಸಿಲಿಂಡರ್ ತುಂಬಿದ್ದ ಗೂಡ್ಸ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ. ಬೈಕ್ ನಲ್ಲಿದ್ದ ಓರ್ವ ಮಹಿಳೆ, ಪುರುಷ ಸಾವನ್ನಪ್ಪಿದ್ದಾರೆ.
ಸದ್ಯ ಸ್ಥಳಕ್ಕೆ ಯಶವಂತಪುರ ಸಂಚಾರ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದ್ದಾರೆ.



