ಮಂಡ್ಯ: ಮನೆಯ ಮುಂದಿನ ನೀರಿನ ಸಂಪ್‌ಗೆ ಬಿದ್ದ ಮಗು ಸಾವನ್ನಪ್ಪಿದ ಘಟನೆ ಪಾಂಡವಪುರ ತಾಲೂಕಿನ ಲಕ್ಷ್ಮೀಸಾಗರ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಹರೀಶ್ ಮತ್ತು ಸುಷ್ಮಾ ದಂಪತಿ ಪುತ್ರ ವಿನು (2) ಮೃತ ಬಾಲಕ. ಮನೆಯ ಮುಂದೆ ಆಟವಾಡುತ್ತಿದ್ದ ವೇಳೆ ಮಗು ಸಂಪ್‌ಗೆ ಬಿದ್ದು ಮೃತಪಟ್ಟಿದೆ. ಮಗುವನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.
ಪಾಂಡವಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.




