LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬೈಕ್‌ನಲ್ಲಿ ತೆರಳುತ್ತಿದ್ದಾಗ ಮರ ಬಿದ್ದು ಯುವಕ ಸಾವು

ರಾಮನಗರ: ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಯುವಕನ ಮೇಲೆ ಮರ ಬಿದ್ದ ಪರಿಣಾಮ ಯುವಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಮನಗರ  ತಾಲೂಕಿನ ಹುಣಸನಹಳ್ಳಿ ಗ್ರಾಮದ ಬಳಿ ನಡೆದಿದೆ.

ಪ್ರಶಾಂತ್ (19) ಮೃತ ದುರ್ದೈವಿ. ರಾಮನಗರ ತಾಲೂಕಿನ ನಾಗೋಹಳ್ಳಿ ಗ್ರಾಮದ ಯುವಕ ಪ್ರಶಾಂತ್ ಕೆಲಸಕ್ಕೆಂದು ಮುಂಜಾನೆ ಮನೆಯಿಂದ ರಾಮನಗರಕ್ಕೆ ಬೈಕ್‌ನಲ್ಲಿ ತೆರಳುತ್ತಿದ್ದ. ಈ ವೇಳೆ ರಾತ್ರಿ ಸುರಿದ ಮಳೆಗೆ ಬುಡ ಸಮೇತ ಬೃಹತ್ ಮರ ಬೈಕ್ ಮೇಲೆ ಏಕಾಏಕಿ ಬಿದ್ದಿದೆ. ಮರ ಬಿದ್ದ ರಭಸಕ್ಕೆ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಮಗನನ್ನು ಕಳೆದುಕೊಂಡು ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ. 

ಘಟನಾ ಸ್ಥಳಕ್ಕೆ ರಾಮನಗರ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಯುವಕನ ಮೃತದೇಹವನ್ನು ಜಿಲ್ಲಾಸ್ಪತ್ರೆಗೆ ರವಾನಿಸಲಲಾಗಿದೆ. ಘಟನೆ ಸಂಬಂಧ ರಾಮನಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Advertisement

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಒಸಿ-ಸಿಸಿ ಸಮಸ್ಯೆಗೆ ಮುಕ್ತಿ: 1.54 ಲಕ್ಷ ಮನೆಗಳಿಗೆ ಸಿಗಲಿದೆ ಶಾಶ್ವತ ವಿದ್ಯುತ್ ಸಂಪರ್ಕನೇಣು ಬಿಗಿದ ಸ್ಥಿತಿಯಲ್ಲಿ ಪುರಸಭೆ ಮಾಜಿ ಅಧ್ಯಕ್ಷೆ ಪುತ್ರಿಯ ಶವ ಪತ್ತೆಬೈಕ್‌ನಲ್ಲಿ ತೆರಳುತ್ತಿದ್ದಾಗ ಮರ ಬಿದ್ದು ಯುವಕ ಸಾವುಬೆಂಗಳೂರು ಏರ್‌ಪೋರ್ಟ್‌ನಲ್ಲಿ 5.87 ಕೋಟಿ ಮೌಲ್ಯದ ಮಾದಕ ವಸ್ತು ಜಪ್ತಿಮಾಜಿ ಸಿಎಂ ದೇವರಾಜ ಅರಸು ಮೊಮ್ಮಗ ಸೂರಜ್ ಹೆಗ್ಡೆ ನಿಧನಹಾಸನದಲ್ಲಿ ರೌಡಿಶೀಟರ್‌ನ ಬರ್ಬರ ಹತ್ಯೆ – ದುಷ್ಕರ್ಮಿಗಳು ಎಸ್ಕೇಪ್‌ರಾಜ್ಯದಲ್ಲಿ ಮುಂಗಾರು ಅಬ್ಬರ – ಬೆಂಗಳೂರು ಸೇರಿ 19 ಜಿಲ್ಲೆಗಳಿಗೆ ಭಾರೀ ಮಳೆ ಮುನ್ಸೂಚನೆಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ ಕಾಮುಕನಿಗೆ 3 ವರ್ಷ ಜೈಲು ಶಿಕ್ಷೆ,15 ಸಾವಿರ ದಂಡಸಿದ್ದಗಂಗಾ ಮಠಕ್ಕೆ ಡಿಸಿಎಂ ಪರಮೇಶ್ವರ್ ಭೇಟಿ – ಶಿವಕುಮಾರ ಶ್ರೀಗಳ ಗದ್ದುಗೆಗೆ ವಿಶೇಷ ಪೂಜೆಮೋದಿ ಸರ್ಕಾರ ಜನರು ಹಾಳಾಗಿ ಹೋಗ್ಲಿ ಅಂತಾ ಬೆಲೆ ಜಾಸ್ತಿ ಮಾಡಿದ್ದಾರೆ: ಕೇಂದ್ರದ ವಿರುದ್ಧ ಯತೀಂದ್ರ ಕಿಡಿ