LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಶಿವಂ ಅಸೋಸಿಯೇಟ್ಸ್, ಅಂಗ ಸಂಸ್ಥೆಗಳಿಂದ ಸುಮಾರು 2110 ಕೋಟಿ ವಂಚನೆ: ಇಡಿ

Advertisement
Advertisement

ಬೆಳಗಾವಿ: ಶಿವಂ ಅಸೋಸಿಯೇಟ್ಸ್ (ವಿರುದ್ಧದ ವಂಚನೆ ಪ್ರಕರಣಕ್ಕೆ ಇದೀಗ ಜಾರಿ  ನಿರ್ದೇಶನಾಲಯ (ED) ಎಂಟ್ರಿಯಾಗಿದೆ. ದಾಳಿ ಬಳಿಕ ಇಡಿ ಬಿಡುಗಡೆ ಮಾಡಿರುವ ಪ್ರಕಟಣೆಯಲ್ಲಿ ಕಂಪನಿ ಮೂಲಕ ನಡೆದಿದೆ ಎನ್ನಲಾದ ಹಣಕಾಸು ವಂಚನೆಯ ಹಲವು ವಿವರಗಳು ಬಹಿರಂಗವಾಗಿವೆ.

ಬೆಳಗಾವಿಯ ಶಿವಂ ಅಸೋಸಿಯೇಟ್ಸ್ ವಿರುದ್ಧ ಜಿಲ್ಲಾಡಳಿತ ಸಾರಿದ್ದ ಸಮರದ ಬಳಿಕ ಇದೀಗ ಪ್ರಕರಣವನ್ನು ಜಾರಿ ನಿರ್ದೇಶನಾಲಯ  ಕೈಗೆತ್ತಿಕೊಂಡಿತ್ತು. ದಾಳಿ ನಡೆಸಿದ ಬಳಿಕ ಇಡಿ ತನ್ನ ಪತ್ರಿಕಾ ಪ್ರಕಟಣೆಯನ್ನು ಹೊರಡಿಸಿದ್ದು, ಶಿವಾನಂದ ನೀಲಣ್ಣವರ್ ಒಡೆತನದ ‘ಶಿವಂ ಅಸೋಸಿಯೇಟ್ಸ್’ ಕಂಪನಿಯ ಮೂಲಕ ನಡೆದಿದೆ ಎನ್ನಲಾದ ವಂಚನೆಯ ವಿವರಗಳನ್ನು ಬಿಚ್ಚಿಟ್ಟಿದೆ.

ಶಿವಂ ಅಸೋಸಿಯೇಟ್ಸ್ ಹಾಗೂ ಅದರ ಅಂಗ ಸಂಸ್ಥೆಗಳಿಂದ ಸುಮಾರು 2,110 ಕೋಟಿ ರೂ. ವಂಚನೆಯಾಗಿದೆ ಎಂದು ಇಡಿ ಮಾಹಿತಿ ನೀಡಿದೆ. ಬೆಳಗಾವಿಯ ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ದಾಖಲಾದ ದೂರಿನ ನಂತರ ಇಡಿ ಅಧಿಕಾರಿಗಳು ಶಿವಾನಂದ ನೀಲಣ್ಣವರ್ ಮನೆ ಹಾಗೂ ಕಚೇರಿ ಮೇಲೆ ದಾಳಿ ನಡೆಸಿದ್ದರು.

ಇಡಿ ದಾಳಿಯಲ್ಲಿ 2,110 ಕೋಟಿ ರೂ. ವಂಚನೆಯಾಗಿರುವುದು ಬೆಳಕಿಗೆ ಬಂದಿದ್ದು, ಈ ಪೈಕಿ ಹೂಡಿಕೆದಾರರಿಗೆ ಕೇವಲ 333.89 ಕೋಟಿ ರೂ. ಮಾತ್ರ ವಾಪಸ್ ಆಗಿರುವುದು ಕಂಡುಬಂದಿದೆ.

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವೇತನ ಹೆಚ್ಚಳಕ್ಕೆ ಆಗ್ರಹಿಸಿ ಚಾಲಕರ ಸ್ಟ್ರೈಕ್‌ – ಬಿಎಂಟಿಸಿ ಎಲೆಕ್ಟ್ರಿಕ್ ಬಸ್ ಸಂಚಾರ ಸ್ಥಗಿತ?ಪ್ರಜ್ವಲ್ ರೇವಣ್ಣ ಸೆಲ್‌ನಲ್ಲಿ ಮೊಬೈಲ್ ಪತ್ತೆ – ಜೈಲಾಧಿಕಾರಿ ಸಸ್ಪೆಂಡ್, SPಗೆ ಶೋಕಾಸ್ ನೋಟಿಸ್ಶಿವಗಂಗೆ ಟೆಕ್ಕಿ ಮಿಸ್ಸಿಂಗ್ ಕೇಸ್‌: ಪ್ಲ್ಯಾನ್ ಮಾಡಿಯೇ ಅದ್ವೈತ್ ನಾಪತ್ತೆ ?ತಮಿಳುನಾಡಿಗೆ ನೀರು ಬಿಟ್ರೆ ನಾನೇ ಹೋರಾಟ ಮಾಡ್ತೀನಿ: ಗಣಿಗ ರವಿಕುಮಾರ್ಜೈಲಲ್ಲಿ ಮೊಬೈಲ್ ಪತ್ತೆ | ಪ್ರಜ್ವಲ್ ರೇವಣ್ಣ ವಿರುದ್ಧ FIR – ಸಿಸಿಬಿ ಇನ್ಸ್‌ಪೆಕ್ಟರ್‌ ನೀಡಿದ ದೂರಿನಲ್ಲೇನಿದೆ?ಶಿವಂ ಅಸೋಸಿಯೇಟ್ಸ್, ಅಂಗ ಸಂಸ್ಥೆಗಳಿಂದ ಸುಮಾರು 2110 ಕೋಟಿ ವಂಚನೆ: ಇಡಿಡಿಕೆಶಿ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ – ಯಾರಿಗೆ ಯಾವ ಖಾತೆ?ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್. ಚಂದ್ರಶೇಖರನ್ ದಿಢೀರ್‌ ರಾಜೀನಾಮೆಯತೀಂದ್ರಗೆ ಆರೋಗ್ಯ ಇಲಾಖೆ? – ವಕ್ಫ್ ಖಾತೆಗೆ ಖಾದರ್‌ ಬೇಡಿಕೆವಾಟಾಳ್ ಕರೆ ನೀಡಿದ ‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ