LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ರಾಜ್ಯಕ್ಕೆ ಹೆಚ್ಚುವರಿ 1,122 ಸರ್ಕಾರಿ ಮೆಡಿಕಲ್ ಸೀಟ್ ಲಭ್ಯ: ಡಾ. ಶರಣಪ್ರಕಾಶ ಪಾಟೀಲ್

ಬೆಂಗಳೂರು: ರಾಜ್ಯದಲ್ಲಿ ಮೆಡಿಕಲ್ ಸೀಟು ಲಭ್ಯತೆ ಹೆಚ್ಚಾಗಿದ್ದು, ವೈದ್ಯಕೀಯ ಕ್ಷೇತ್ರದಲ್ಲಿ ಸಾಧನೆ ಮಾಡಲು ಬಯಸುವವರಿಗೆ ಸುವರ್ಣ ಅವಕಾಶ ಲಭಿಸಲಿದೆ. ರಾಜ್ಯಕ್ಕೆ ಹೆಚ್ಚುವರಿ 1,122 ಸೀಟುಗಳು ದೊರೆಯಲಿವೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣಪ್ರಕಾಶ ಆರ್. ಪಾಟೀಲ್  ತಿಳಿಸಿದ್ದಾರೆ.

ಶನಿವಾರ ವಿಕಾಸಸೌಧದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಸಚಿವರು, ನಮ್ಮ ರಾಜ್ಯ ವೈದ್ಯಕೀಯ ಕ್ಷೇತ್ರದಲ್ಲಿ ದೇಶದಲ್ಲೇ ಮುಂಚೂಣಿಯಲ್ಲಿದೆ ಎಂದರು.

ರಾಜ್ಯಕ್ಕೆ ದೊರೆತಿರುವ ಹೆಚ್ಚುವರಿ ಸೀಟುಗಳು ಕೊಪ್ಪಳ, ಗದಗ, ಚಾಮರಾಜನಗರ, ಕಾರವಾರ, ಹಾವೇರಿ ಸೇರಿ ಇತರೆ ಜಿಲ್ಲೆಗಳಿಗೆ ದೊರೆಯಲಿದೆ ಎಂದು ತಿಳಿಸಿದರು.

ಪದವಿಪೂರ್ವ ಸೀಟುಗಳಿಗೆ ಕೇಂದ್ರ ಸರ್ಕಾರದಿಂದ 495 ಕೋಟಿ ರೂ. ಅನುದಾನ ಸಿಗಲಿದೆ. ಅದೇ ರೀತಿ ಸ್ನಾತಕೋತ್ತರ ವೈದ್ಯಕೀಯ ಸೀಟುಗಳಿಗೆ 541 ಕೋಟಿ ರೂಪಾಯಿ ಅನುದಾನ ಸಿಗಲಿದೆ ಎಂದು ಡಾ. ಪಾಟೀಲ್ ವಿವರಿಸಿದರು.

ಕೇಂದ್ರ ಮತ್ತು ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆಯು ಮೇ 15ರಂದು ಅಂತಿಮ ಮುದ್ರೆ ಹಾಕಿದೆ. ಒಟ್ಟಾರೆಯಾಗಿ ರಾಜ್ಯಕ್ಕೆ 1,090 ಕೋಟಿ ರೂ. ದೊರೆಯಲಿದೆ ಎಂದು ಹೇಳಿದರು.

ಒಂದು ಸಾವಿರ ಮೆಡಿಕಲ್ ಸೀಟ್ ಒಂದು ರಾಜ್ಯಕ್ಕೆ ಸಿಕ್ಕಿರುವುದು ದಾಖಲೆಯಾಗಿದೆ. ಕರ್ನಾಟಕದ ಸಾಧನೆಗೆ ಇದು ಪೂರಕವಾದ ಸಾಕ್ಷಿಯಾಗಿದೆ ಎಂದು ಸಂತಸ ವ್ಯಕ್ತಪಡಿಸಿದರು.

ವೈದ್ಯ ಕ್ಷೇತ್ರದಲ್ಲಿ ಸಾಧನೆ ಮಾಡುವವರಿಗೆ ಅತಿ ಹೆಚ್ಚು ಸಾಧನೆ ಮಾಡಲು ಕರ್ನಾಟಕದಲ್ಲಿ ಈಗ ವಿಫುಲ ಅವಕಾಶಗಳು ದೊರೆತಂತಾಗುತ್ತದೆ. ಇದನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
Advertisement

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪಾಲಿಕೆ ಬಿಜೆಪಿ ಸದಸ್ಯರ ವಿರುದ್ಧ ವಿಜಯೇಂದ್ರಗೆ ವಿವಿಧ ಕನ್ನಡ ಸಂಘಟನೆಗಳ ದೂರುಪಾಲಿಕೆ ವಿರುದ್ಧ ಹೋರಾಟ ಮುಂದುವರಿಸಲು ವಿವಿಧ ಕನ್ನಡ ಸಂಘಟನೆಗಳ ನಿರ್ಧಾರಬೆಳಗಾವಿ ನಗರದ ‘ಸ್ವಚ್ಛ ಶನಿವಾರ’ ಅಭಿಯಾನಕ್ಕೆ ಜಿಪಂ ಆವರಣದಲ್ಲಿ ಚಾಲನೆವಸ್ತುಗಳನ್ನು ಸಾಗಿಸುತ್ತಿದ್ದಾಗ ಏಕಾಏಕಿ ಕುಸಿದ ಲಿಫ್ಟ್‌ – ಇನ್‌ಸ್ಟಾ ಮಾರ್ಟ್‌ ಉದ್ಯೋಗಿ ಸಾವುಕರ್ನಾಟಕ ಹೈಕೋರ್ಟ್‌ನಲ್ಲಿ ಬೃಹತ್ ನೇಮಕಾತಿ: SSLC ಪಾಸಾದವರಿಗೆ ಸುವರ್ಣಾವಕಾಶ!ಪೊಲೀಸ್ ಠಾಣೆಯಲ್ಲೇ ಪ್ರೇಮಿಗಳ ಕುಟುಂಬದ ಮಧ್ಯೆ ಗಲಾಟೆ, ಗರ್ಭಿಣಿ ಮೇಲೂ ಹಲ್ಲೆ!ರಾಜ್ಯದಲ್ಲಿ ವರುಣನ ರೌದ್ರಾವತಾರಕ್ಕೆ ಇಬ್ಬರು ಬಲಿ: ಮೈಸೂರಲ್ಲಿ ರೈತ ಮಹಿಳೆ, ಬಳ್ಳಾರಿಯಲ್ಲಿ ಯುವಕ ಸಿಡಿಲಿಗೆ ಸಾವು!ಬೆಂಗ್ಳೂರು – ಮೈಸೂರು ಹೆದ್ದಾರಿಯಲ್ಲಿ ಕಾರು ಅಡ್ಡಗಟ್ಟಿ 26 ಲಕ್ಷ ದೋಚಿದ ಖದೀಮರುಚನ್ನಗಿರಿಯಲ್ಲಿ ಗ್ರಾಮ ಪಂಚಾಯ್ತಿ ಮಾಜಿ ಅಧ್ಯಕ್ಷನ ಬರ್ಬರ ಹತ್ಯೆಡಿಕೆಶಿ ಮುಂದಿನ ಸಿಎಂ ಬ್ಯಾನರ್, ಕಾರ್ಯಕರ್ತರ ಅಭಿಮಾನ ತಡಿಯೋಕೆ ಸಾಧ್ಯವಿಲ್ಲ: ಲಕ್ಷ್ಮೀ ಹೆಬ್ಬಾಳ್ಕರ್