LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸಾಲ ಮನ್ನಾಕ್ಕೆ ನೆರವು ಕೋರಿ ದೆಹಲಿಗೆ ಸರ್ವಪಕ್ಷ ನಿಯೋಗ: ಡಿಕೆಶಿ

Advertisement
Advertisement
Advertisement

ಬೆಂಗಳೂರು: “ಸಾಲ ಮನ್ನಾಕ್ಕೆ ನೆರವು ಕೋರಿ ದೆಹಲಿಗೆಸರ್ವಪಕ್ಷ ನಿಯೋಗ ಕರೆದೊಯ್ಯಲಾಗುವುದು” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು.

ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಬರಗಾಲ ಎಂದು ಪ್ರಧಾನಮಂತ್ರಿಗಳೇ ಹೇಳಿದ್ದು, ಕೇಂದ್ರ ಸರ್ಕಾರ ಸಾಲಮನ್ನಾ ಮಾಡಿಸುವ ಜವಾಬ್ದಾರಿ ಹೊರಬೇಕು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಪಕ್ಷ ನಾಯಕ ಆರ್. ಅಶೋಕ್ ಹಾಗೂ ಇತರೆ ನಾಯಕರು ತಮ್ಮೊಂದಿಗೆ ದೆಹಲಿಗೆ ಬಂದು ಕೇಂದ್ರ ಸರ್ಕಾರದಿಂದ ಅನುದಾನ ಹಾಗೂ ರೈತರ ಸಾಲ ಮನ್ನಾಕ್ಕೆ ಆಗ್ರಹಿಸಬೇಕು. ಬರಗಾಲಕ್ಕೆ ಕೇಂದ್ರ ಸರ್ಕಾರ ಪರಿಹಾರ ಬಿಡುಗಡೆ ಮಾಡಬೇಕು” ಎಂದು ಆಗ್ರಹಿಸಿದರು.

ವಿಪಕ್ಷಗಳಿಂದ ರಾಜಕಾರಣ
“ಬರ ಪರಿಸ್ಥಿತಿ ಕುರಿತಂತೆ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲಾಗಿದೆ. ವಿಪಕ್ಷಗಳಿಗೆ ರೈತರು ಹಾಗೂ ಬರ ಪರಿಸ್ಥಿತಿಯ ಬಗ್ಗೆ ಅಧ್ಯಯನ ಮಾಡಲು, ಚರ್ಚಿಸಲು ಕಿಂಚಿತ್ತೂ ಆಸಕ್ತಿ ಇಲ್ಲ. ಬರ ಪರಿಸ್ಥಿತಿ ಚರ್ಚೆ ಬಗ್ಗೆ ಜನತಾ ದಳ ಮತ್ತು ಬಿಜೆಪಿ ಶಾಸಕರೇ ನನ್ನ ಬಳಿ ಬಂದು ಬೇಸರ ತೋಡಿಕೊಂಡಿದ್ದಾರೆ. ಅದಕ್ಕಾಗಿಯೇ ಪ್ರತ್ಯೇಕವಾಗಿ ವಿಶೇಷ ಅಧಿವೇಶನ ನಡೆಸಲಿದ್ದೇವೆ. ಆಯಾ ಕ್ಷೇತ್ರಗಳ ಭಾವನೆ, ಪರಿಸ್ಥಿತಿ ಅರ್ಥಮಾಡಿಕೊಂಡು ನಾನು ಅವರಿಗೆ ಸಹಾಯ ಮಾಡಬೇಕು. ನೈಜ ಪರಿಸ್ಥಿತಿಯನ್ನು ಅಧ್ಯಯನ ಮಾಡುವ ಬದಲು ವಿಪಕ್ಷಗಳು ರಾಜಕಾರಣ ಮಾಡುತ್ತಿವೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು. ವಿಶೇಷ ಅಧಿವೇಶನ
“ರೈತರ ಸಮಸ್ಯೆಗಳ ಕುರಿತು ಸುದೀರ್ಘ ಚರ್ಚೆ ನಡೆಸಲು ರಾಜ್ಯ ಸರ್ಕಾರವು ಮೂರು ದಿನಗಳ ವಿಶೇಷ ಅಧಿವೇಶನ ಕರೆದಿದೆ. ಈ ಅಧಿವೇಶನದಲ್ಲಿ ಸಂಪೂರ್ಣವಾಗಿ ರಾಜ್ಯದ ಬರ ಪರಿಸ್ಥಿತಿ, ರೈತರ ತೊಂದರೆಗಳು ಮತ್ತು ಪಶ್ಚಿಮ ಘಟ್ಟಗಳ ಕುರಿತಾದ ಕಸ್ತೂರಿರಂಗನ್ ವರದಿಗೆ ರಾಜ್ಯ ಸಲ್ಲಿಸಬೇಕಾದ ಆಕ್ಷೇಪಣೆಗಳ ಬಗ್ಗೆ ಮಾತ್ರ ಚರ್ಚಿಸಲಾಗುವುದು” ಎಂದು ಸ್ಪಷ್ಟಪಡಿಸಿದರು.

ಅಧಿವೇಶನವನ್ನು 7 ದಿನಗಳಿಗೆ ವಿಸ್ತರಿಸಬೇಕೆಂಬ ವಿಪಕ್ಷಗಳ ಬೇಡಿಕೆಯ ಬಗ್ಗೆ ಕೇಳಿದಾಗ, “ಎಲ್ಲರ ಅಭಿಪ್ರಾಯವನ್ನು ನಾವು ಕೇಳುತ್ತೇವೆ. ಕೆಲವು ನಾಯಕರು ಮಾತ್ರ ತಕರಾರು ಮಾಡುತ್ತಾರೆ ಎಂದರೆ ಉಳಿದ ಶಾಸಕರು ಏನು ಮಾಡಬೇಕು. ಎಲ್ಲರೂ ಜನ ಪ್ರತಿನಿಧಿಗಳೇ, ಚರ್ಚೆಗಳಾಗಲಿ” ಎಂದರು.

ನೀತಿ ಆಯೋಗದ ಜತೆಗಿನ ಸಭೆಯಲ್ಲಿ ರಾಜ್ಯಕ್ಕೆ ಅನುದಾನ ಹಂಚಿಕೆ ಸರಿಯಾಗಿ ಆಗಬೇಕು ಎಂದು ಆಗ್ರಹಿಸಿದ್ದೀರಿ ಎಂದು ಕೇಳಿದಾಗ, “ಹೊಸ ಬೆಂಗಳೂರು ನಿರ್ಮಾಣ ಮಾಡಬೇಕೆಂದು ನೀತಿ ಆಯೋಗದ ಉಪಾಧ್ಯಕ್ಷರ ಬಳಿ ಚರ್ಚಿಸಲಾಗಿದೆ. ಅದಕ್ಕೆ ಅಗತ್ಯವಿರುವ ನೆರವನ್ನು ಸರ್ಕಾರ ನೀಡಲಿದೆ ಎಂದರು. ಕರ್ನಾಟಕ , ಬೆಂಗಳೂರು ಬಹಳ ಮುಖ್ಯ ಎಂದೂ ಅವರು ಹೇಳಿದ್ದಾರೆ” ಎಂದು ತಿಳಿಸಿದರು.

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಾಲ ಮನ್ನಾಕ್ಕೆ ನೆರವು ಕೋರಿ ದೆಹಲಿಗೆ ಸರ್ವಪಕ್ಷ ನಿಯೋಗ: ಡಿಕೆಶಿನಾನೇಕೆ U-Turn ತಗೋಬೇಕು? ನಾಲಿಗೆ ಮೇಲೆ ಹಿಡಿತ ಇರಲಿ, ಬೆಂಗಳೂರಿಗೆ ಬಿಜೆಪಿಯದ್ದೇ ಶಾಪ: ಡಿಕೆಶಿ ಕಿಡಿನಿಂತಿದ್ದ ಲಾರಿಗೆ ಕಾರು ಡಿಕ್ಕಿ – ಎಂಟು ಮಂದಿ ಎಂಜಿನಿಯರಿಂಗ್ ವಿದ್ಯಾರ್ಥಿಗಳು ದುರ್ಮರಣಸವದತ್ತಿಯಲ್ಲಿ ಕೂಲಿ ಕಾರ್ಮಿಕರಿಗೆ ಸಿಕ್ತು ಚಿನ್ನದ ನಿಧಿ!ರಿಯಲ್ ಎಸ್ಟೇಟ್ ಗುಂಗಿನಿಂದ ಹೊರಬಂದು ಪ್ರಜಾಸೇವೆ ನೆನಪಿಸಿಕೊಂಡ ಸಿಎಂಗೆ ಧನ್ಯವಾದ – ನಿಖಿಲ್‌ ಲೇವಡಿಬೆಳಗಾವಿಯಲ್ಲಿ ಭೀಕರ ರಸ್ತೆ ಅಪಘಾತ: ಇಬ್ಬರು ಯುವಕರ ದುರ್ಮರಣಬೈಕ್ ಕಳ್ಳನನ್ನು ಬಂಧಿಸಿದ ಬೆಳಗಾವಿ ಪೊಲೀಸರುಜನರ ಸಮಸ್ಯೆಗಳಿಗೆ ಸ್ಪಂದಿಸಿದ ಎಂಎಲ್‌ಸಿ ಚನ್ನರಾಜ ಹಟ್ಟಿಹೊಳಿಜನರ ಸಮಸ್ಯೆಗಳಿಗೆ ಸ್ಪಂದಿಸಿದ ಎಂಎಲ್‌ಸಿ ಚನ್ನರಾಜ ಹಟ್ಟಿಹೊಳಿಬೃಹತ್ ರಕ್ತದಾನ ಶಿಬಿರ: ಜಿಲ್ಲೆಯಲ್ಲಿ ಮೂರನೇ ಅತಿ ಹೆಚ್ಚು ರಕ್ತ ಸಂಗ್ರಹಿಸಿದ ಕೀರ್ತಿ ಖಾನಾಪೂರಕ್ಕೆ