LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಅಣ್ಣಾಮಲೈ ರಾಜೀನಾಮೆ ಅಂಗೀಕಾರ – 6 ವರ್ಷಗಳ ಬಿಜೆಪಿ ಸಂಬಂಧ ಕೊನೆಗೊಳಿಸಿದ ಮಾಜಿ ಐಪಿಎಸ್‌

ನವದೆಹಲಿ: ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಹಾಗೂ ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ಬಿಜೆಪಿಗೆ ಗುಡ್‌ಬೈ ಹೇಳಿದ್ದಾರೆ. ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಅವರ ರಾಜೀನಾಮೆ ಪತ್ರವನ್ನು ಅಂಗೀಕರಿಸಿದ್ದಾರೆ. ಈ ಮೂಲಕ ಬಿಜೆಪಿಯೊಂದಿಗಿನ  ತಮ್ಮ 6 ವರ್ಷಗಳ ಸುದೀರ್ಘ ಸಂಬಂಧವನ್ನು ಕೊನೆಗೊಳಿಸಿದ್ದಾರೆ.

ಜೂನ್‌ 2 ರಂದು ಅಣ್ಣಾಮಲೈ ನಿತಿನ್ ನಬಿನ್ ಅವರನ್ನು ಭೇಟಿಯಾಗಿ ರಾಜೀನಾಮೆ ಸಲ್ಲಿಸಿದ್ದರು. ರಾಜೀನಾಮೆ ಸಲ್ಲಿಕೆಯಾದ ಬಳಿಕ ಅವರು ಬೆಜೆಪಿಯಲ್ಲೇ ಇರುತ್ತಾರೆ. ರಾಜ್ಯಸಭೆಗೆ ಹೋಗುತ್ತಾರೆ ಎಂಬ ಮಾತುಗಳು ಕೇಳಿ ಬಂದಿದ್ದವು. ಆದರೆ ಈಗ ಈ ಎಲ್ಲಾ ಅಂತ ಕಂತೆ ಸುದ್ದಿಗಳಿಗೆ ವಿರಾಮ ಬಿದ್ದಿದೆ. ರಾಜೀನಾಮೆ ಅಂಗೀಕಾರಗೊಂಡ ಬೆನ್ನಲ್ಲೇ ಇಂದು ಮಧ್ಯಾಹ್ನ ಅಣ್ಣಾಮಲೈ ಸುದ್ದಿಗೋಷ್ಠಿ ನಡೆಸಿ ತಮ್ಮ ಮುಂದಿನ ನಡೆಯನ್ನು ತಿಳಿಸಲಿದ್ದಾರೆ.

ಎಐಎಡಿಎಂಕೆ  ಪಕ್ಷವನ್ನು ಮರಳಿ ಎನ್‌ಡಿಎ  ಒಕ್ಕೂಟಕ್ಕೆ ಸೇರಿಸಿಕೊಂಡ ನಂತರ, ಪಕ್ಷದ ಉನ್ನತ ನಾಯಕತ್ವವು ಅಣ್ಣಾಮಲೈ ಅವರನ್ನು ನಿರ್ಲಕ್ಷಿಸುತ್ತಿದೆ ಎಂಬ ಮಾತುಗಳು ಕೇಳಿಬಂದಿದ್ದವು. ಸ್ವಪಕ್ಷದ ಕೆಲ ನಿರ್ಧಾರಗಳ ಕುರಿತು ಅವರು ಅಸಮಾಧಾನ ಹೊಂದಿದ್ದರು ಎನ್ನಲಾಗಿದೆ. ಈ ಹಿಂದೆ ಅವರು ತಮಿಳುನಾಡು ವಿಧಾನಸಭಾ ಚುನಾವಣೆಯ ಉಸ್ತುವಾರಿ ಸ್ಥಾನ ಹಾಗೂ ತಮಿಳುನಾಡು ರಾಜ್ಯ ಬಿಜೆಪಿ ಅಧ್ಯಕ್ಷ ಸ್ಥಾನಗಳಿಗೂ ರಾಜೀನಾಮೆ ನೀಡಿದ್ದರು.

ಅಣ್ಣಾಮಲೈ ಅವರು ಬಿಜೆಪಿಯಿಂದ ಹೊರಬಂದು ತಮಿಳುನಾಡಿನಲ್ಲಿ ಸ್ವತಂತ್ರವಾಗಿ ‘ಮಕ್ಕಳ್ ಶಕ್ತಿ ಇಯಕ್ಕಂ’ (ಜನಶಕ್ತಿ ಆಂದೋಲನ) ಎಂಬ ಹೊಸ ಜನಪರ ಚಳವಳಿಯನ್ನು ಅಥವಾ ಸಂಘಟನೆಯನ್ನು ಆರಂಭಿಸಲು ನಿರ್ಧರಿಸಿದ್ದಾರೆ ಎಂದು ವರದಿಯಾಗಿದೆ. ಆದರೆ ಈ ಕುರಿತು ಅಣ್ಣಾಮಲೈ ಇನ್ನೂ ಅಧಿಕೃತವಾಗಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲ

ಇತ್ತೀಚೆಗೆ ಕೇಂದ್ರ ಸರ್ಕಾರದ ತ್ರಿಭಾಷಾ ನೀತಿಗೆ ಅಣ್ಣಾಮಲೈ ಬಹಿರಂಗವಾಗಿ ವಿರೋಧ ವ್ಯಕ್ತಪಡಿಸಿದ್ದರು. 9ನೇ ತರಗತಿ ವಿದ್ಯಾರ್ಥಿಗಳಿಗೆ ಮೂರು ಭಾಷೆಗಳನ್ನು ಕಡ್ಡಾಯಗೊಳಿಸುವ ನಿರ್ಧಾರಕ್ಕೆ ಅವರು ಆಕ್ಷೇಪ ವ್ಯಕ್ತಪಡಿಸಿದ್ದರು. ಈ ವಿಷಯದ ಬಳಿಕ ಬಿಜೆಪಿ ನಾಯಕತ್ವದೊಂದಿಗೆ ಅವರ ಭಿನ್ನಾಭಿಪ್ರಾಯಗಳ ಬಗ್ಗೆ ಚರ್ಚೆಗಳು ಹೆಚ್ಚಾಗಿವೆ.

ಇದರ ನಡುವೆ ಕೊಯಮತ್ತೂರಿನಲ್ಲಿ ಅಣ್ಣಾಮಲೈ ಅವರ ಭಾವಚಿತ್ರವಿರುವ ಪೋಸ್ಟರ್‌ಗಳು ಕಾಣಿಸಿಕೊಂಡಿವೆ. “ಭಯವಿಲ್ಲದ ಮನಸ್ಸಿಗೆ ಮಿತಿಗಳಿಲ್ಲ” ಎಂಬ ಸಂದೇಶವಿರುವ ಈ ಪೋಸ್ಟರ್‌ಗಳು ಅಣ್ಣಾಮಲೈ ಅವರ ಹೊಸ ರಾಜಕೀಯ ಹೆಜ್ಜೆಯ ಸುಳಿವು ನೀಡುತ್ತಿವೆ.

2021 ರಿಂದ 2025ರವರೆಗೆ ತಮಿಳುನಾಡು ಬಿಜೆಪಿ ಅಧ್ಯಕ್ಷರಾಗಿದ್ದ ಅಣ್ಣಾಮಲೈ, ರಾಜ್ಯದಲ್ಲಿ ಬಿಜೆಪಿಯ ಬೆಳವಣಿಗೆಗೆ ಪ್ರಮುಖ ಕಾರಣರಾಗಿದ್ದರು.

ವಿಧಾನಸಭೆ ಚುನಾವಣೆಗೆ ಬಿಜೆಪಿ ಮತ್ತು ಎಐಎಡಿಎಂಕೆ ಮೈತ್ರಿ ಮಾಡಿಕೊಂಡ ವಿಚಾರಕ್ಕೂ ಅಣ್ಣಾಮಲೈ ಅಸಮಾಧಾನಗೊಂಡಿದ್ದರು ಎನ್ನಲಾಗಿದೆ. ಚುನಾವಣಾ ಪ್ರಚಾರದಲ್ಲಿ ಅವರಿಗೆ ಸೂಕ್ತ ಸ್ಥಾನಮಾನ ಸಿಗಲಿಲ್ಲ ಎಂಬ ಮಾತುಗಳು ಕೇಳಿಬಂದಿವೆ. ಅಣ್ಣಾಮಲೈ ಸತತವಾಗಿ ಎರಡು ಬಿಜೆಪಿ ರಾಜ್ಯ ಕಾರ್ಯಕಾರಿ ಸಭೆಗಳಿಗೆ ಗೈರಾಗಿರುವುದು ಕೂಡ ಊಹಾಪೋಹಗಳಿಗೆ ಮತ್ತಷ್ಟು ಬಲ ನೀಡಿತ್ತು.

Advertisement

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕನಕಪುರದ ಕಂಚನಹಳ್ಳಿ ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ – ನಿಟ್ಟುಸಿರು ಬಿಟ್ಟ ಜನಬೆಂಗಳೂರು ನಗರವನ್ನು ಮತ್ತಷ್ಟು ಬಲಪಡಿಸುವ ಅಗತ್ಯವಿದೆ: ಪರೋಕ್ಷವಾಗಿ ಖಾತೆ ಬಿಟ್ಟುಕೊಡಲ್ಲ ಎಂದ ಕೃಷ್ಣಬೈರೇಗೌಡಡಿಕೆಶಿ ನೇತೃತ್ವದ ಸರ್ಕಾರ ಫಸ್ಟ್ ಬಾಲಿಗೆ ಸಿಕ್ಸ್ ಹೊಡೆದು ಹಿಟ್ ವಿಕೆಟ್ ಆಗಿದೆ: ಸಿ.ಟಿ ರವಿ ವ್ಯಂಗ್ಯರಾಮಲಿಂಗಾರೆಡ್ಡಿ ನನ್ನ ಆಪ್ತ ಸ್ನೇಹಿತರು, ಮಾತಾಡಿ ಸಮಸ್ಯೆ ಬಗೆಹರಿಸಿಕೊಳ್ಳುತ್ತೇವೆ: ಡಿಕೆಶಿಅಸಮಾಧಾನಗೊಂಡಿದ್ದೇನೆ, ಕೊಟ್ಟ ಮಾತು ತಪ್ಪಿದ್ದಕ್ಕೆ ಮಂತ್ರಿ ಸ್ಥಾನಕ್ಕೆ ರಾಜೀನಾಮೆ – ಡಿಕೆಶಿಗೆ ರಾಮಲಿಂಗಾರೆಡ್ಡಿ ಶಾಕ್‌ಖಾತೆ ಹಂಚಿಕೆಯಾದ ಒಂದೇ ಗಂಟೆಯಲ್ಲಿ ಖಾದರ್‌ ಸರ್ಪ್ರೈಸ್ ವಿಸಿಟ್ – ಆಸ್ಪತ್ರೆ ಸಿಬ್ಬಂದಿ ಮೇಲೆ ಗರಂವಿವಿ ಸಹಾಯಕ ಪ್ರಾಧ್ಯಾಪಕಿಯ ನಿಗೂಢ ಹತ್ಯೆಅಣ್ಣಾಮಲೈ ರಾಜೀನಾಮೆ ಅಂಗೀಕಾರ – 6 ವರ್ಷಗಳ ಬಿಜೆಪಿ ಸಂಬಂಧ ಕೊನೆಗೊಳಿಸಿದ ಮಾಜಿ ಐಪಿಎಸ್‌ಆಹಾರ ಸಾಕು, ಬೇರೆ ಖಾತೆ ಬೇಕು – ರಾಮಲಿಂಗಾರೆಡ್ಡಿ ಆಯ್ತು, ಈಗ ಮುನಿಯಪ್ಪ ಸರದಿಭಾರತಕ್ಕೆ Su-57 ಸ್ಟೆಲ್ತ್ ಫೈಟರ್ ಜೆಟ್ ಆಫರ್‌ ನೀಡಿದ ಪುಟಿನ್‌