LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಡಿಸಿಪಿ ಮೇಲೆಯೇ ಯೂತ್ ಕಾಂಗ್ರೆಸ್ ಅಧ್ಯಕ್ಷನಿಂದ ಹಲ್ಲೆ- ಎಫ್‌ಐಆರ್ ದಾಖಲಿಸಲು ಪೊಲೀಸರ ಹಿಂದೇಟು

Advertisement
Advertisement
Advertisement

ಬೆಂಗಳೂರು: ಪ್ರತಿಭಟನೆ ವೇಳೆ ಕರ್ತವ್ಯದಲ್ಲಿದ್ದ ಡಿಸಿಪಿ ಮೇಲೆಯೇ ಯುವ ಕಾಂಗ್ರೆಸ್ ಮುಖಂಡ  ಗೂಂಡಾವರ್ತನೆ ತೋರಿ ಹಲ್ಲೆ ನಡೆಸಿದ್ದರೂ, ಪೊಲೀಸರು ಇನ್ನೂ ಎಫ್‌ಐಆರ್ ದಾಖಲಿಸದೆ ಇರುವುದು ತೀವ್ರ ಚರ್ಚೆಗೆ ಗ್ರಾಸವಾಗಿದೆ.

ಭಾನುವಾರ ಸಂಜೆ ನೀಟ್ ಪರೀಕ್ಷಾ ಅಕ್ರಮ ಖಂಡಿಸಿ ಮಲ್ಲೇಶ್ವರದಲ್ಲಿರುವ ಬಿಜೆಪಿ ಕಚೇರಿ ಮುತ್ತಿಗೆಗೆ ಯುವ ಕಾಂಗ್ರೆಸ್ ಕಾರ್ಯಕರ್ತರು ತೀವ್ರ ಯತ್ನ ನಡೆಸಿದ್ದರು. ಪರಿಸ್ಥಿತಿ ವಿಕೋಪಕ್ಕೆ ತಿರುಗುತ್ತಿದ್ದಂತೆ ಸ್ಥಳದಲ್ಲಿದ್ದ ಪೊಲೀಸರು ಪರಿಸ್ಥಿತಿ ನಿಯಂತ್ರಣಕ್ಕೆ ಲಾಠಿ ಚಾರ್ಜ್ ನಡೆಸಿದ್ದರು.

 

ಲಾಠಿ ಚಾರ್ಜ್ ಸಂದರ್ಭದಲ್ಲಿ ರಾಜ್ಯ ಯೂತ್ ಕಾಂಗ್ರೆಸ್ ಅಧ್ಯಕ್ಷ ಎಚ್‌.ಎಸ್‌. ಮಂಜುನಾಥ್‌ ಗೌಡ  ಹಾಗೂ ಕಾರ್ಯಕರ್ತರು ಕರ್ತವ್ಯ ನಿರತ ಪೊಲೀಸರ ಮೇಲೆಯೇ ಮುಗಿಬಿದ್ದಿದ್ದಾರೆ. ಉತ್ತರ ವಿಭಾಗದ ಡಿಸಿಪಿ ನೇಮೆಗೌಡ ಅವರನ್ನೇ ಹಿಡಿದು ತಳ್ಳಾಡಿ, ಅವರ ಮೇಲೆ ಹಲ್ಲೆ ಮಾಡಿರುವ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ಕರ್ತವ್ಯದಲ್ಲಿದ್ದ ಹಿರಿಯ ಐಪಿಎಸ್ ಅಧಿಕಾರಿಯ ಮೇಲೆಯೇ ಬಹಿರಂಗವಾಗಿ ದೌರ್ಜನ್ಯ ಎಸಗಿದ್ದರೂ, ಘಟನೆ ನಡೆದು ದಿನಗಳೇ ಕಳೆದರೂ ವೈಯಾಲಿಕಾವಲ್ ಠಾಣಾ ಪೊಲೀಸರು ಈವರೆಗೆ ಯಾವುದೇ ಎಫ್‌ಐಆರ್ ದಾಖಲಿಸದೆ ಮೀನಮೇಷ ಎಣಿಸುತ್ತಿದ್ದಾರೆ.

ಸರ್ಕಾರದ ಪ್ರಭಾವಕ್ಕೆ ಮಣಿದು ಪೊಲೀಸ್ ಇಲಾಖೆ ಮಂಡಿಯೂರಿ ಕೂತಿದೆಯೇ ಎಂಬ ಅನುಮಾನ ಸಾರ್ವಜನಿಕ ವಲಯದಲ್ಲಿ ಮೂಡಿದೆ.

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಿಮ್ಮನ್ನು ನೀವೇ ದೇವರೆಂದುಕೊಂಡಿದ್ದೀರಾ? – FDA ಅಧಿಕಾರಿ ತುಕಾರಾಮ್‌ಗೆ ಬಾಂಬೆ ಹೈಕೋರ್ಟ್‌ ತರಾಟೆಐಸ್‌ಕ್ರೀಮ್‌ ಮಾರುಕಟ್ಟೆಗೆ ರಿಲಯನ್ಸ್‌ ಎಂಟ್ರಿ – 10 ರೂ.ಗೆ ಬಾಂಬೆ ಕ್ರೀಮರಿಅಗತ್ಯ ಇದ್ದರಷ್ಟೇ ಚಿನ್ನ ಖರೀದಿಸಿ, ಮನರಂಜನೆಗೆ ವಿದೇಶ ಪ್ರವಾಸ ಬೇಡ: ಮೋದಿ ಮಿತವ್ಯಯ ಕರೆಮಮತಾ ಬ್ಯಾನರ್ಜಿ ಸೋದರ ಸಂಬಂಧಿ ಪುತ್ರಿ ಶವವಾಗಿ ಪತ್ತೆದರ್ಶನ್‌ಗೆ ಮತ್ತೆ ಢವ ಢವ – ಇಂದು ಪ್ರದೋಷ್ ಮಾಫಿ ಸಾಕ್ಷಿ ಹೇಳಿಕೆ ದಾಖಲಾಗುತ್ತಾ?ಕಲ್ಲಿಹಾಳ್‌ ಉಪ ತಹಶೀಲ್ದಾರ್‌ ಪುಷ್ಪಲತಾಗೆ 4 ವರ್ಷ ಜೈಲುಪರಪ್ಪನ ಅಗ್ರಹಾರ ಜೈಲಿಗೆ ವಿಜಯಲಕ್ಷ್ಮಿ ಭೇಟಿ – ಶಾಸಕ ದರ್ಶನ್ ಪುಟ್ಟಣ್ಣಯ್ಯ, ನಟ ಝೈದ್ ಖಾನ್ ಸಾಥ್ಸೆ.3, 4 ರಂದು ಚಿಕನ್‌ ಶಾಪ್‌ ಬಂದ್‌ಡಿಸಿಪಿ ಮೇಲೆಯೇ ಯೂತ್ ಕಾಂಗ್ರೆಸ್ ಅಧ್ಯಕ್ಷನಿಂದ ಹಲ್ಲೆ- ಎಫ್‌ಐಆರ್ ದಾಖಲಿಸಲು ಪೊಲೀಸರ ಹಿಂದೇಟುಕಾಂಗ್ರೆಸ್ ಸರ್ಕಾರ ಕಿತ್ತೊಗೆಯುವ ಶಕ್ತಿ ಬಿಜೆಪಿ ಪಾದಯಾತ್ರೆಗಿದೆ: ವಿಜಯೇಂದ್ರ