LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬಂಡೆ ತಬ್ಬಿ ಬೆಂಗಳೂರಿಗರ ಪ್ರತಿಭಟನೆ – ಲಾಲ್‌ಬಾಗ್‌ ಉಳಿಸಲು ಬೃಹತ್‌ ಅಭಿಯಾನ

Advertisement
Advertisement
Advertisement

ಬೆಂಗಳೂರು: ಉದ್ಯಾನವನಗಳ ಶೇ.5ರಷ್ಟು ಜಾಗವನ್ನು ಅನ್ಯ ಉದ್ದೇಶಗಳಿಗೆ ಬಳಸಲು ಅವಕಾಶ ಕಲ್ಪಿಸುವ ಸರ್ಕಾರದ ಕಾಯ್ದೆ ತಿದ್ದುಪಡಿಗೆ ಬೆಂಗಳೂರಿನಲ್ಲಿ ಭಾರೀ ವಿರೋಧ ವ್ಯಕ್ತವಾಗಿದೆ. ಐತಿಹಾಸಿಕ ಲಾಲ್‌ಬಾಗ್‌  ಮೇಲೂ ಸರ್ಕಾರದ ಕಣ್ಣು ಬಿದ್ದಿದೆ ಎಂದು ಆರೋಪಿಸಿ ನಾಗರಿಕರು ಇಂದು ಪ್ರತಿಭಟನೆ ನಡೆಸುತ್ತಿದ್ದಾರೆ.

‘WALK IN LALBAGH, WALK FOR LALBAGH’ ಎಂಬ ಘೋಷಣೆಯೊಂದಿಗೆ ಇಂದು ಲಾಲ್‌ಬಾಗ್‌ನಲ್ಲಿ ಬೃಹತ್ ವಾಕಿಂಗ್‌ ಅಭಿಯಾನ ನಡೆಯುತ್ತಿದೆ. ಪರಿಸರವಾದಿ ಯಲ್ಲಪ್ಪ ರೆಡ್ಡಿ ಹಾಗೂ ಸಂಸದ ತೇಜಸ್ವಿ ಸೂರ್ಯ (Tejasvi Surya) ಅವರ ಮುಂದಾಳತ್ವದಲ್ಲಿ ನಡೆದ ಅಭಿಯಾನದಲ್ಲಿ ನೂರಾರು ಬೆಂಗಳೂರಿಗರು, ವಾಯುವಿಹಾರಿಗಳು, ವಿವಿಧ ಎನ್‌ಜಿಒಗಳು ಹಾಗೂ ನಾಗರಿಕರು ಭಾಗವಹಿಸಿದರು.

ಸರ್ಕಾರದ ನಿರ್ಧಾರವನ್ನು ವಿರೋಧಿಸಿದ ಪ್ರತಿಭಟನಾಕಾರರು ಲಾಲ್‌ಬಾಗ್‌ನ ಬಂಡೆಕಲ್ಲುಗಳನ್ನು ತಬ್ಬಿಕೊಂಡು ಮಾನವ ಸರಪಳಿ ರಚಿಸಿ ವಿಶಿಷ್ಟ ರೀತಿಯಲ್ಲಿ ಪ್ರತಿಭಟನೆ ನಡೆಸಿದರು. ಕೆಲವರು ಬಂಡೆಗಳ ಮೇಲೆ ಕುಳಿತು ಸರ್ಕಾರದ ಕಾಯ್ದೆ ತಿದ್ದುಪಡಿಯನ್ನು ಹಿಂಪಡೆಯುವಂತೆ ಒತ್ತಾಯಿಸಿದರು.

ಅಭಿಯಾನದಲ್ಲಿ ಚಲನಚಿತ್ರ ನಟಿ ಸುಧಾ ಬೆಳವಾಡಿ, ನಟಿ ಸಂಯುಕ್ತ, ಪ್ರಣೀತಾ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಸಂಸದರಾದ ಡಾ. ಮಂಜುನಾಥ್, ಪಿ.ಸಿ. ಮೋಹನ್, ತೇಜಸ್ವಿ ಸೂರ್ಯ ಸೇರಿದಂತೆ ಹಲವು ಗಣ್ಯರು ಭಾಗವಹಿಸಿದರು.

ಲಾಲ್‌ಬಾಗ್‌ನ ಪರಿಸರ ಮತ್ತು ಹಸಿರು ವಲಯವನ್ನು ಯಾವುದೇ ಕಾರಣಕ್ಕೂ ದುರ್ಬಳಕೆ ಮಾಡಬಾರದು. ಪಾರ್ಕ್‌ ಜಾಗದ ಶೇ.5ರಷ್ಟು ಬಳಕೆಗೆ ಅವಕಾಶ ನೀಡುವ ತಿದ್ದುಪಡಿ ಬೇಡ, ಲಾಲ್‌ಬಾಗ್‌ನಲ್ಲಿ ಯಾವುದೇ ಟನಲ್‌ ಯೋಜನೆಯೂ ಬೇಡ ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಲಾಲ್‌ಬಾಗ್‌ ಉಳಿಯಬೇಕು, ಬೆಂಗಳೂರಿನ ಹಸಿರು ಉಳಿಯಬೇಕು ಎಂಬ ಸಂದೇಶದೊಂದಿಗೆ ನಡೆದ ಅಭಿಯಾನ ಇದೀಗ ಸರ್ಕಾರದ ಕಾಯ್ದೆ ತಿದ್ದುಪಡಿ ವಿಚಾರದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ.

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಟೈರ್ ಬ್ಲಾಸ್ಟ್, ಕಾರಿನ ಮೇಲೆ ಟ್ರಕ್‌ ಪಲ್ಟಿ – ತಪ್ಪಿದ ಭಾರೀ ಅನಾಹುತಈಗ ಚುನಾವಣೆ ಎದುರಿಸಲು ಟನ್‌ಗಟ್ಟಲೆ ಹಣ ಬೇಕು: ಸಿದ್ದರಾಮಯ್ಯಕ್ರಿಕೆಟ್ ಅಕಾಡೆಮಿಯಲ್ಲಿ ಪಿಚ್ ರೋಲರ್ ಹರಿದು 8 ವರ್ಷದ ಬಾಲಕ ದುರ್ಮರಣಬಂಡೆ ತಬ್ಬಿ ಬೆಂಗಳೂರಿಗರ ಪ್ರತಿಭಟನೆ – ಲಾಲ್‌ಬಾಗ್‌ ಉಳಿಸಲು ಬೃಹತ್‌ ಅಭಿಯಾನKPSC ಬಗ್ಗೆ ಸಾರ್ವಜನಿಕರಿಗೆ ಅಸಹ್ಯಕರ ಭಾವನೆ ಮೂಡಿದೆ: ಹೆಚ್‌ಡಿಕೆಪ್ರಮೋಷನ್ ನೀಡುವುದಾಗಿ 50 ಸಾವಿರ ರೂ. ಲಂಚ – ಸೆಲ್ಫಿ ವೀಡಿಯೋ ಮಾಡಿಟ್ಟು ಬ್ಯಾಂಕ್ ಸಿಬ್ಬಂದಿ ಆತ್ಮಹತ್ಯೆಜೈಲಿನೊಳಗೆ ಕೈದಿಗಳ ನಡುವೆ ಮಾರಾಮಾರಿ; ಜಗಳ ಬಿಡಿಸಲು ಹೋದ ಸಿಬ್ಬಂದಿ ಮೇಲೆಯೇ ಹಲ್ಲೆಐಎಎಸ್ ಅಧಿಕಾರಿ ಗ್ಯಾನೇಂದ್ರ ಕುಮಾರ್‌ನನ್ನು ಕೆಪಿಎಸ್‌ಸಿಗೆ ನೇಮಕ ಮಾಡಿದ್ದು ಬಿಜೆಪಿ: ಬಿಕೆ ಹರಿಪ್ರಸಾದ್ಸರ್ವರ್ ಡೌನ್ – ಪಡಿತರ ಸಿಗದೆ ಬೆಳಗಾವಿ ಜಿಲ್ಲೆಯಾದ್ಯಂತ ಕಾರ್ಡುದಾರರ ಪರದಾಟಬೆಂಗಳೂರಲ್ಲಿ 7ನೇ ಮಹಡಿಯಿಂದ ಬಿದ್ದು ಟೆಕ್ಕಿ ಸಾವು, ಯುವಕನ ಸ್ಥಿತಿ ಗಂಭೀರ