LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬೆಂಗಳೂರು-ಮಂಗಳೂರು ವಂದೇಭಾರತ್‌| ಸಕಲೇಶಪುರ ಘಾಟ್ ಮಾರ್ಗದಲ್ಲಿ ಆ.11ರಿಂದ ಪ್ರಾಯೋಗಿಕ ಸಂಚಾರ

Advertisement
Advertisement

ಬೆಂಗಳೂರು: ಕರಾವಳಿಯ ರೈಲು ಪ್ರಯಾಣಿಕರಿಗೆ ಸಿಹಿ ಸುದ್ದಿ. ನೈಋತ್ಯ ರೈಲ್ವೆಯ ಮೈಸೂರು ವಿಭಾಗವು ಆಗಸ್ಟ್ 11 ರಿಂದ ಬೆಂಗಳೂರು-ಮಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಪ್ರಾಯೋಗಿಕ ಸಂಚಾರವನ್ನು (Trial Run) ನಡೆಸಲು ಸಿದ್ಧತೆ ಮಾಡಿಕೊಂಡಿದೆ.

ರೈಲ್ವೆ ರಾಜ್ಯ ಸಚಿವ ವಿ. ಸೋಮಣ್ಣ(Somanna) ಅವರು ಜೂನ್ ತಿಂಗಳೊಳಗಾಗಿ ಈ ಮಾರ್ಗದಲ್ಲಿ ವಂದೇ ಭಾರತ್ ರೈಲು ಸೇವೆಯನ್ನು ಆರಂಭಿಸುವುದಾಗಿ ಈ ಹಿಂದೆ ತಿಳಿಸಿದ್ದರು. ಆದರೆ ಸಕಲೇಶಪುರ-ಸುಬ್ರಹ್ಮಣ್ಯ ಮಾರ್ಗದ ಕ್ಲಿಷ್ಟಕರ ಘಾಟ್ ಪ್ರದೇಶದಲ್ಲಿ ಸಂಚರಿಸಲು ಅತ್ಯಗತ್ಯವಾದ ಆಟೋಮ್ಯಾಟಿಕ್ ಎಮರ್ಜೆನ್ಸಿ ಬ್ರೇಕಿಂಗ್ (AEB) ವ್ಯವಸ್ಥೆ ಹೊಂದಿರುವ ರೇಕ್ ಲಭ್ಯವಿಲ್ಲದ ಕಾರಣ ಪ್ರಕ್ರಿಯೆ ತಡವಾಗಿತ್ತು.

ಚೆನ್ನೈನ ಇಂಟೆಗ್ರಲ್ ಕೋಚ್ ಫ್ಯಾಕ್ಟರಿ  ಯಿಂದ AEB ತಂತ್ರಜ್ಞಾನ ಹೊಂದಿರುವ 20 ಕೋಚ್‌ಗಳ ವಂದೇ ಭಾರತ್ ರೇಕ್ ಮೈಸೂರು ವಿಭಾಗಕ್ಕೆ ತಲುಪಿದೆ. ಪ್ರಸ್ತುತ ಈ ರೈಲನ್ನು ಮಂಡ್ಯ ಜಿಲ್ಲೆಯ ಪಾಂಡವಪುರ ರೈಲು ನಿಲ್ದಾಣದಲ್ಲಿ ನಿಲ್ಲಿಸಲಾಗಿದೆ.

ಆಗಸ್ಟ್ 11ರಿಂದ ಆರಂಭವಾಗಲಿರುವ ಪ್ರಾಯೋಗಿಕ ಸಂಚಾರವು ಆಗಸ್ಟ್ 20ರವರೆಗೆ ನಡೆಯಲಿದೆ. ಭಾರತೀಯ ರೈಲ್ವೆಯ ಸಂಶೋಧನೆ, ವಿನ್ಯಾಸ ಮತ್ತು ಮಾನಕ ಸಂಸ್ಥೆಯ (RDSO) ತಂಡವು ಶೀಘ್ರದಲ್ಲೇ ಆಗಮಿಸಿ ಈ ಪರೀಕ್ಷಾರ್ಥ ಸಂಚಾರದ ಉಸ್ತುವಾರಿ ವಹಿಸಲಿದೆ ಎಂದು ಮೈಸೂರು ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಮುದಿತ್ ಮಿತ್ತಲ್ ತಿಳಿಸಿದ್ದಾರೆ.

ಘಾಟ್ ಮಾರ್ಗಕ್ಕೆ AEB ತಂತ್ರಜ್ಞಾನ ಕಡ್ಡಾಯ ಯಾಕೆ?
ವಂದೇ ಭಾರತ್ ರೈಲು ಸಾಮಾನ್ಯವಾಗಿ ಅತ್ಯಾಧುನಿಕ ಎಲೆಕ್ಟ್ರೋ-ನ್ಯೂಮ್ಯಾಟಿಕ್ (EP) ಡಿಸ್ಕ್ ಬ್ರೇಕ್ ಹಾಗೂ Regenerative Braking ವ್ಯವಸ್ಥೆಯನ್ನು ಹೊಂದಿರುತ್ತದೆ. ಆದರೆ ಸಕಲೇಶಪುರ-ಸುಬ್ರಹ್ಮಣ್ಯ ರೋಡ್ ನಡುವಿನ ಘಾಟ್ ಮಾರ್ಗವು ಅತ್ಯಂತ ಕಡಿದಾದ ಇಳಿಜಾರು ಹೊಂದಿದೆ.

ಈಗ ಈ ಮಾರ್ಗದಲ್ಲಿ ಚಲಿಸುವ ರೈಲುಗಳ ಸುರಕ್ಷತೆಗಾಗಿ ಬ್ಯಾಂಕರ್ ಇಂಜಿನ್‌ಗಳನ್ನು (ಹೆಚ್ಚುವರಿ ಇಂಜಿನ್) ಜೋಡಿಸಲಾಗುತ್ತದೆ. ಇವುಗಳನ್ನು ಜೋಡಿಸಲು ಮತ್ತು ಕಳಚಲು ಸುಮಾರು 15 ನಿಮಿಷ ಬೇಕಾಗುತ್ತದೆ.

ವಂದೇ ಭಾರತ್ ರೈಲಿಗೆ ಈ ರೀತಿ ಹೊರಗಿನಿಂದ ಬ್ಯಾಂಕರ್ ಎಂಜಿನ್ ಜೋಡಿಸಬೇಕಾದರೆ ರೈಲಿನ ಮುಂಭಾಗದ ನೋಸ್ (Nose) ಭಾಗವನ್ನು ಕಳಚಬೇಕಾಗುತ್ತದೆ. ಇದು ಹೆಚ್ಚು ಸಮಯವನ್ನು ತೆಗೆದುಕೊಳ್ಳುತ್ತದೆ. ಜೊತೆಗೆ ರೈಲಿನ ಅತಿವೇಗದ ಉದ್ದೇಶವನ್ನೇ ವ್ಯರ್ಥಗೊಳಿಸುತ್ತದೆ.

ಈ ಕಾರಣಕ್ಕೆ ರೈಲಿನಲ್ಲೇ ಸ್ವಯಂಚಾಲಿತವಾಗಿ ಗರಿಷ್ಠ 30 ಕಿ.ಮೀ ವೇಗವನ್ನು ನಿಯಂತ್ರಿಸುವ ಆಟೋಮ್ಯಾಟಿಕ್ ಎಮರ್ಜೆನ್ಸಿ ಬ್ರೇಕಿಂಗ್ ವ್ಯವಸ್ಥೆ ಹೊಂದಿರುವ ವಿಶೇಷ ರೇಕ್‌ಗಾಗಿ ರೈಲ್ವೇ ಕಾಯುತ್ತಿತ್ತು. ಈಗ ಎಇಬಿ ವ್ಯವಸ್ಥೆ ಹೊಂದಿರುವ ರೇಕ್ ಬಂದಿರುವುದರಿಂದ ಪ್ರಾಯೋಗಿಕ ಸಂಚಾರ ಯಶಸ್ವಿಯಾದ ತಕ್ಷಣವೇ ವಾಣಿಜ್ಯ ಸಂಚಾರಕ್ಕೆ ರೈಲ್ವೆ ಮಂಡಳಿಯಿಂದ ಅಧಿಕೃತ ಅನುಮೋದನೆ ಸಿಗಲಿದೆ.

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೆಲಮಂಗಲ ಚಿನ್ನದಂಗಡಿ ಮಾಲೀಕನ ಮೇಲೆ ಗುಂಡಿನ ದಾಳಿ – ಗ್ರಾಹಕರ ಸೋಗಿನಲ್ಲಿ ಬಂದು ದರೋಡೆಗೆ ಯತ್ನತಿಮ್ಮಾಪುರ್-ನಂಜಯ್ಯಮಠ ಆಡಿಯೋ ಬಗ್ಗೆ ಛಲವಾದಿ ದೂರು ಕೊಡಲಿ: ಪ್ರಿಯಾಂಕ್ ಖರ್ಗೆಕಾಂಗ್ರೆಸ್ ಯುವಕರ ರಕ್ತ ಹೀರಿ ಬದುಕುತ್ತಿದೆ: ಛಲವಾದಿ ನಾರಾಯಣಸ್ವಾಮಿʻಕೆಲಸ ಮಾಡದಿದ್ರೆ, ಸಂಬಳ ಇಲ್ಲʼ – ಮುಷ್ಕರ ಹಿಂಪಡೆಯುವಂತೆ ವೈದ್ಯರಿಗೆ ಬಾಂಬೆ ಹೈಕೋರ್ಟ್‌ ಖಡಕ್ ಸೂಚನೆಪಿಓಪಿ ಗಣೇಶ ಸ್ಥಾಪನೆಗಿಲ್ಲ ಅವಕಾಶ: ಈಶ್ವರ ಖಂಡ್ರೆ ಸೂಚನೆಮುಳ್ಳಯ್ಯನಗಿರಿ ಬಳಿ ಚಲಿಸುತ್ತಿದ್ದ ಬೈಕ್‌ ಮೇಲೆ ಬಿದ್ದ ಮರ – ಕೂದಲೆಳೆ ಅಂತರದಲ್ಲಿ ಪ್ರವಾಸಿಗ ಬಚಾವ್‌ನಾನು ಡಿಕೆಶಿ ಮನೆಮಗ, ನಾನೇ ಸಿಎಂ ಇದ್ದಂತೆ: ಶಿವಗಂಗಾ ಬಸವರಾಜ್ಕಾಂಗ್ರೆಸ್‌ನಿಂದ ಸಾಂವಿಧಾನಿಕ ಹುದ್ದೆ ಹೈಜಾಕ್‌- ಆ.14ಕ್ಕೆ ಸಭಾಪತಿ ಸ್ಥಾನಕ್ಕೆ ರಾಜೀನಾಮೆ: ಬಸವರಾಜ ಹೊರಟ್ಟಿಉಪಮುಖ್ಯಮಂತ್ರಿಗಳಾದಡಾ. ಜಿ. ಪರಮೇಶ್ವರ್ ಅವರ ಜನ್ಮದಿನದ ಅಂಗವಾಗಿ   ಸರ್ಕಾರಿ ವಸತಿ ಶಾಲೆಗಳಿಗೆ ಗೌತಮ ಬುದ್ಧ ಪ್ರತಿಮೆಗಳ ವಿತರಣೆಆರೋಪಿ ದರ್ಶನ್‌ಗೆ ಅತಿದೊಡ್ಡ ಸಂಕಷ್ಟ; ಪ್ರಕರಣದ ಎ-14 ಪ್ರದೋಷ್‌ನಿಂದ ಮಾಫಿ ಸಾಕ್ಷಿಗೆ ಅರ್ಜಿ