LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬಾರ್ ಮೇಲೆಯೇ ಬಿಸಿಎಂ ಹಾಸ್ಟೆಲ್‌ – ಬೆಂಗಳೂರಲ್ಲಿ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟ

Advertisement
Advertisement

ಬೆಂಗಳೂರು: ವಿದ್ಯಾರ್ಥಿಗಳು ನೆಮ್ಮದಿಯಿಂದ ಓದಿ ಉತ್ತಮ ಭವಿಷ್ಯ ಕಟ್ಟಿಕೊಳ್ಳಬೇಕಾದ ಹಾಸ್ಟೆಲ್‌ನ ಕೆಳ ಮಹಡಿಯಲ್ಲೇ ಬಾರ್ ಅಂಡ್ ರೆಸ್ಟೋರೆಂಟ್ ಕಾರ್ಯನಿರ್ವಹಿಸುತ್ತಿರುವ ಘಟನೆ ಬೆಂಗಳೂರಿನ ಕೆ.ಆರ್ ಪುರಂ ನಲ್ಲಿ ಬೆಳಕಿಗೆ ಬಂದಿದೆ.

ಕೆ.ಆರ್ ಪುರಂನ ಅವಲಹಳ್ಳಿಯಲ್ಲಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯ ಖಾಸಗಿ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದೆ. ಇದೇ ಕಟ್ಟಡದ ನೆಲ ಮಹಡಿಯಲ್ಲಿ ಬಾರ್ ಅಂಡ್ ರೆಸ್ಟೋರೆಂಟ್ ಇದ್ದರೆ, ಮೇಲಿನ ಮಹಡಿಯಲ್ಲಿ ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳು ವಾಸವಾಗಿದ್ದಾರೆ.

ಹಾಸ್ಟೆಲ್ ಕಳೆದ ಎರಡು ವರ್ಷಗಳಿಂದ ಇದೇ ಕಟ್ಟಡದಲ್ಲಿದೆ. ಮೂರು ತಿಂಗಳ ಹಿಂದೆ ನೆಲ ಮಹಡಿಯಲ್ಲಿ ಬಾರ್ ಆರಂಭವಾಗಿದೆ. ಅಂದಿನಿಂದ ವಿದ್ಯಾರ್ಥಿಗಳು ಸಾಕಷ್ಟು ಸಮಸ್ಯೆ ಎದುರಿಸುತ್ತಿದ್ದಾರೆ ಎನ್ನಲಾಗಿದೆ.

ಹಗಲು-ರಾತ್ರಿ ಬಾರ್‌ಗೆ ಬರುವ ಜನರ ಗದ್ದಲ, ಗಲಾಟೆಯಿಂದ ವಿದ್ಯಾರ್ಥಿಗಳ ಓದು ಮತ್ತು ನಿದ್ರೆಗೆ ತೊಂದರೆಯಾಗುತ್ತಿದೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ. ಓದಲು ಸೂಕ್ತ ವಾತಾವರಣ ಇಲ್ಲದ ಕಾರಣ ಹಾಸ್ಟೆಲ್‌ನ್ನು ಬೇರೆ ಕಟ್ಟಡಕ್ಕೆ ಸ್ಥಳಾಂತರಿಸಬೇಕು ಎಂಬ ಬೇಡಿಕೆಯನ್ನೂ ವಿದ್ಯಾರ್ಥಿಗಳು ಮುಂದಿಟ್ಟಿದ್ದಾರೆ.

ಈ ಬಗ್ಗೆ ಹಾಸ್ಟೆಲ್ ವಾರ್ಡನ್ ಅಥವಾ ಸಂಬಂಧಪಟ್ಟ ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ ಎನ್ನುವ ಆರೋಪವೂ ಕೇಳಿಬಂದಿದೆ. ವಿದ್ಯಾರ್ಥಿಗಳ ಹಿತಾಸಕ್ತಿ ಮತ್ತು ಶಿಕ್ಷಣದ ವಿಚಾರದಲ್ಲಿ ನಿರ್ಲಕ್ಷ್ಯ ತೋರಲಾಗಿದೆ ಎಂದು ವಿದ್ಯಾರ್ಥಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಒಟ್ಟಾರೆ, ವಿದ್ಯಾರ್ಥಿಗಳ ಭವಿಷ್ಯ ರೂಪಿಸಬೇಕಾದ ಹಾಸ್ಟೆಲ್, ಬಾರ್ ಅಂಡ್ ರೆಸ್ಟೋರೆಂಟ್‌ನ ಮೇಲೆಯೇ ನಡೆಯುತ್ತಿರುವುದು ಹಲವು ಪ್ರಶ್ನೆಗಳಿಗೆ ಕಾರಣವಾಗಿದೆ.

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
KPTCLನಲ್ಲಿ ದೇಶದಲ್ಲೇ ಮೊದಲ ಬಾರಿಗೆ ಜಾಗತಿಕ ‘ಝೀರೋ ಟ್ರಸ್ಟ್’ ಸೈಬರ್ ಭದ್ರತಾ ವ್ಯವಸ್ಥೆ ಅಳವಡಿಕೆಕೇಂದ್ರ ಸಚಿವ ಹೆಚ್‌ಡಿಕೆ ಭೇಟಿಯಾದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರಬಡ್ಡಿ ದಂಧೆಕೋರರ ಕಿರುಕುಳಕ್ಕೆ ವ್ಯಕ್ತಿ ಆತ್ಮಹತ್ಯೆ; ಸೆಲ್ಫಿ ವಿಡಿಯೋ, ಡೆತ್‌ನೋಟ್ ಪತ್ತೆಪತಿಗೆ ಬೇರೊಬ್ಬಳ ಜೊತೆ ಅನೈತಿಕ ಸಂಬಂಧ ಆರೋಪ – ಬೇಸತ್ತು ಆತ್ಮಹತ್ಯೆಗೆ ಶರಣಾದ ಪತ್ನಿಮಗು ಬೇಡವೆಂದು 8 ತಿಂಗಳ ಗರ್ಭಿಣಿ ಪತ್ನಿಯ ಕುತ್ತಿಗೆ ಬಿಗಿದು ಕೊಲೆಗೆ ಯತ್ನ; ಪತಿ ಅಂದರ್‌ಬಾರ್ ಮೇಲೆಯೇ ಬಿಸಿಎಂ ಹಾಸ್ಟೆಲ್‌ – ಬೆಂಗಳೂರಲ್ಲಿ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟಅಂಗಡಿ ದೋಚಿ ಮಾಲೀಕರಿಗೆ ವಿದ್ಯುತ್‌ ಶಾಕ್‌ ಹೊಡೆಸುವ ವಿಚಿತ್ರ ಕಳ್ಳ!ಮಣಿಪಾಲ್‌ ಬಳಿ ಕಂದಕಕ್ಕೆ ಉರುಳಿದ ಶಾಲಾ ಬಸ್ – ವಿದ್ಯಾರ್ಥಿ ತಲೆಗೆ ಗಂಭೀರ ಗಾಯರಾಮ ಮಂದಿರದ ಕಠಿಣ ನಿಯಮಕ್ಕೆ ಬೇಸತ್ತು ದೇಣಿಗೆ ಎಣಿಕೆ ಸಿಬ್ಬಂದಿಯ ಸಾಮೂಹಿಕ ರಾಜೀನಾಮೆಜೋಕಾಲಿಯಲ್ಲಿ ಆಟವಾಡುತ್ತಿದ್ದಾಗ ದುರಂತ – 14 ವರ್ಷದ ವಿದ್ಯಾರ್ಥಿನಿ ಸಾವು