LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮಂಡ್ಯದಲ್ಲಿ ಭಿಕ್ಷುಕಿ ನಿಧನ – ಮೃತಳ ಮನೆಯಲ್ಲಿ ಮೂಟೆಗಟ್ಟಲೆ ಹಣ ಪತ್ತೆ

Advertisement
Advertisement
Advertisement

ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು  ಮೃತಪಟ್ಟಿದ್ದು, ಅವರ ಮನೆಯಲ್ಲಿ ಬರೋಬ್ಬರಿ 8 ಲಕ್ಷ ರೂಪಾಯಿಗೂ ಅಧಿಕ ನಗದು ಹಣ ಪತ್ತೆಯಾಗಿರುವ ಘಟನೆ ಮಂಡ್ಯ ನಗರದ  ಗುತ್ತಲು ಬಡಾವಣೆಯಲ್ಲಿ ನಡೆದಿದೆ.

ಮೃತ ವೃದ್ಧೆಯನ್ನು ನೂರ್ ಎಂದು ಗುರುತಿಸಲಾಗಿದೆ. ಕುಟುಂಬಸ್ಥರ ಆಸರೆ ಇಲ್ಲದೇ ಹಲವು ವರ್ಷಗಳಿಂದ ನಗರದ ವಿವಿಧೆಡೆ ಭಿಕ್ಷಾಟನೆ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ ಇವರು, ವಯೋಸಹಜ ಕಾಯಿಲೆಯಿಂದ ನಿನ್ನೆ ನಿಧನರಾಗಿದ್ದಾರೆ.

ವೃದ್ಧೆಯ ನಿಧನದ ಬಳಿಕ ಸಂಬಂಧಿಕರು ಹಾಗೂ ಸ್ಥಳೀಯರು ಸೇರಿ ಅಂತ್ಯಕ್ರಿಯೆ ನೆರವೇರಿಸಿದ್ದಾರೆ. ಅಂತ್ಯಸಂಸ್ಕಾರದ ನಂತರ ನೂರ್ ವಾಸವಿದ್ದ ಮನೆಗೆ ಹೋಗಿ ಪರಿಶೀಲಿಸಿದಾಗ ಮೂಟೆಗಟ್ಟಲೆ ನಾಣ್ಯಗಳು ಹಾಗೂ ಕರೆನ್ಸಿ ನೋಟುಗಳ ಕಂತೆಗಳು ಪತ್ತೆಯಾಗಿವೆ.

8 ಲಕ್ಷಕ್ಕೂ ಅಧಿಕ ಮೊತ್ತ
ಸ್ಥಳೀಯರು ಮತ್ತು ಸಂಬಂಧಿಕರು ಒಟ್ಟಾಗಿ ಹಣ ಎಣಿಕೆ ಮಾಡಿದ್ದು, ಬರೋಬ್ಬರಿ 8 ಲಕ್ಷಕ್ಕೂ ಅಧಿಕ ಹಣ ಸಂಗ್ರಹವಾಗಿರುವುದು ತಿಳಿದುಬಂದಿದೆ. ಬಳಿಕ ಸ್ಥಳೀಯ ಮುಖಂಡರು ಮಾತುಕತೆ ನಡೆಸಿ, ಆ ಹಣವನ್ನು ಮೃತರ ಸಂಬಂಧಿಕರಿಗೆ ಹಸ್ತಾಂತರಿಸಿದ್ದಾರೆ.

ವೃದ್ಧೆ ಜೀವಂತವಾಗಿದ್ದಾಗ ಯಾರೊಬ್ಬರೂ ಆಕೆಯನ್ನು ನೋಡಿಕೊಳ್ಳಲಿಲ್ಲ, ಊಟಕ್ಕೂ ಗತಿಯಿಲ್ಲದೆ ಭಿಕ್ಷೆ ಬೇಡಿ ಬದುಕಿದ್ದರು. ಆದರೆ ಸಾವಿನ ನಂತರ ಆಕೆ ಕೂಡಿಟ್ಟಿದ್ದ ಲಕ್ಷಾಂತರ ರೂಪಾಯಿ ಹಣವನ್ನು ಸಂಬಂಧಿಕರು ಹಂಚಿಕೊಂಡಿದ್ದಾರೆ ಎಂದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ಮತ್ತು ಅಸಮಾಧಾನ ವ್ಯಕ್ತವಾಗಿದೆ. ಈ ಘಟನೆ ಮಂಡ್ಯ ಪೂರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಂಡ್ಯದಲ್ಲಿ ಭಿಕ್ಷುಕಿ ನಿಧನ – ಮೃತಳ ಮನೆಯಲ್ಲಿ ಮೂಟೆಗಟ್ಟಲೆ ಹಣ ಪತ್ತೆಎಸ್‌ಐಆರ್‌ನಲ್ಲಿ ಮ್ಯಾಪಿಂಗ್ ಆಗದೇ ಇರುವವರಿಗೆ ಜಾರಿಯಾಗಲಿದೆ ನೋಟಿಸ್ಹಳೆಯಂಗಡಿಯಲ್ಲಿ ಪಾಳುಬಿದ್ದ ಬಸ್ ತಂಗುದಾಣಕ್ಕೆ ‘ಮೀಡಿಯಾ ಮನಸುಗಳು’ ತಂಡದಿಂದ ಕಾಯಕಲ್ಪಕಾಲು ಜಾರಿ ಹಳಿ ಮೇಲೆ ಬಿದ್ದ ವ್ಯಕ್ತಿ; ರೈಲು ಹರಿದು ಸ್ಥಳದಲ್ಲೇ ಸಾವುಪಾಗಲ್‌ ಪ್ರೇಮಿಯಿಂದ ಟಾರ್ಚರ್‌ – ಕೆರೆಗೆ ಹಾರಿ ಸಾಗರದ ಯುವತಿ ಆತ್ಮಹತ್ಯೆರಾಜ್ಯದಲ್ಲಿ ಹಂದಿ ಜ್ವರ ಪ್ರಕರಣಗಳ ಸಂಖ್ಯೆ ಹೆಚ್ಚಳ – 4,125 ಕೇಸ್ ದಾಖಲು; ಆರೋಗ್ಯ ಇಲಾಖೆ ಅಲರ್ಟ್ಪುತ್ತೂರಿನಲ್ಲಿ ಕಳೆದ ಕೆಲವು ತಿಂಗಳಿಂದ ತಾಲಿಬಾನ್‌ ಸಂಸ್ಕೃತಿ ಇದೆ: ನಳಿನ್ ಕುಮಾರ್ ಕಟೀಲ್ಹನುಮಾನ್ ದೇವಸ್ಥಾನದ ಪಾವಿತ್ರ್ಯತೆಗೆ ಧಕ್ಕೆ ತಂದವನ ವಿರುದ್ಧ ಪ್ರಕರಣ ದಾಖಲಿಸಿ, ಗಡಿಪಾರು ಮಾಡಬೇಕು: ಬೊಮ್ಮಾಯಿಕಾಂಗ್ರೆಸ್‌ನದ್ದು ಸೂಟ್‌ಕೇಸ್ ಬೃಂದಾವನ, ರಾಜ್ಯದ ಇತಿಹಾಸದಲ್ಲೇ ನೈಸ್ ಹಗರಣ ಬಹುದೊಡ್ಡ ಅಕ್ರಮ: ಹೆಚ್‌ಡಿಕೆಮಂಗಳೂರಲ್ಲಿ ಮೀನುಗಾರಿಕಾ ಬೋಟ್‌ ಮುಳುಗಡೆ – 6 ಮೀನುಗಾರರ ರಕ್ಷಣೆ