LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ದೇವರಮನೆ ಬೆಟ್ಟದಲ್ಲಿ ಬೆಂಗಳೂರಿನ ಪ್ರವಾಸಿಗ ಹೃದಯಾಘಾತಕ್ಕೆ ಬಲಿ

Advertisement
Advertisement
Advertisement

ಚಿಕ್ಕಮಗಳೂರು: ಮೂಡಿಗೆರೆಯ ದೇವರಮನೆ ಬೆಟ್ಟಕ್ಕೆ ಬಂದಿದ್ದ ಬೆಂಗಳೂರು ಮೂಲದ ಯುವಕನೊಬ್ಬ ಹೃದಯಾಘಾತದಿಂದಸಾವನ್ನಪ್ಪಿದ್ದಾನೆ.

ನರೇಶ್ (26) ಮೃತ ಯುವಕ. ನರೇಶ್ ಮೂಲತಃ ಕಲಬುರುಗಿ ಜಿಲ್ಲೆಯವನು. ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡಿಕೊಂಡಿದ್ದ. ವೀಕ್ ಎಂಡ್ ಆಗಿದ್ದರಿಂದ ಸ್ನೇಹಿತರ ಜೊತೆ ಬೆಂಗಳೂರಿನಿಂದ ಮೂಡಿಗೆರೆ ತಾಲೂಕಿನ ದೇವರಮನೆ ಗುಡ್ಡ ತಾಣಕ್ಕೆ ಬಂದಿದ್ದ. 

ದೇವರಮನೆ ಬೆಟ್ಟದ ಸೌಂದರ್ಯ ಸವಿದು ಹಿಂದಿರುಗುವಾಗ ರಸ್ತೆ ಮಧ್ಯೆ ತುಂತುರು ಮಳೆಯಲ್ಲಿ ಕೋಟ್ ಹಾಕಿಕೊಳ್ಳಲು ನರೇಶ್ ಬೈಕ್ ನಿಲ್ಲಿಸಿದ್ದ. ಈ ವೇಳೆ ಕೋಟ್ ಹಾಕಿಕೊಳ್ಳುವಾಗ ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದಾನೆ. ನರೇಶ್‌ನನ್ನ ಸ್ಥಳಿಯರು ಹಾಗೂ ಜೊತೆಗಿದ್ದ ಸ್ನೇಹಿತರು ಸೇರಿ ಸಮಾಜ ಸೇವಕ ಆರೀಫ್ ಅವರ ಆಂಬುಲೆನ್ಸ್‌ನಲ್ಲಿ ಕೂಡಲೇ ಮೂಡಿಗೆರೆ ತಾಲೂಕಿನ ಬಣಕಲ್ ಗ್ರಾಮದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನರೇಶ್ ಸಾವನ್ನಪ್ಪಿದ್ದಾನೆ.

ಜೊತೆಗೆ ಬಂದ ಸ್ನೇಹಿತನ ಸಾವು‌ ಕಂಡು ನರೇಶ್ ಸ್ನೇಹಿತರು ಕಣ್ಣೀರಿಟ್ಟಿದ್ದಾರೆ. ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸರ್ದಾರ್ ಪ್ರೌಢಶಾಲೆ ಆವರಣದಲ್ಲಿ ನೂತನ ‘ಚೆಸ್ ಪಾರ್ಕ್’ ಉದ್ಘಾಟಿಸಿದ ಸಚಿವ ಸತೀಶ್ ಜಾರಕಿಹೊಳಿಮಲಪ್ರಭಾ ಸಕ್ಕರೆ ಕಾರ್ಖಾನೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆಜನರ ಆರೋಗ್ಯ ಕಾಪಾಡುವ ಸರಕಾರದ ಸಂಕಲ್ಪಕ್ಕೆ ಕೈಜೋಡಿಸಿ: ಲಕ್ಷ್ಮೀ ಹೆಬ್ಬಾಳಕರ್ಬೆಳಗಾವಿಯಲ್ಲಿ 80ನೇ ಸ್ವಾತಂತ್ರ್ಯೋತ್ಸವದ ಸಂಭ್ರಮವಂದೇ ಮಾತರಂ ಹಾಡುವುದನ್ನು ತಡೆಯಲು ಸೋನಿಯಾ ಗಾಂಧಿ ಯತ್ನ: ಬಿಜೆಪಿ ಆರೋಪಕರ್ನಾಟಕದ ವಾಹನಗಳ ಮಾಲಿನ್ಯ ಪರೀಕ್ಷಾ ಶುಲ್ಕ ಹೆಚ್ಚಳ – ದ್ವಿಚಕ್ರ ವಾಹನಗಳಿಗೆ 80 ರೂ. ದರಹರ್ ಘರ್ ತಿರಂಗಾ – ಹರ್ ಮನ್ ತಿರಂಗಾಕ್ಕೆ ಪ್ರೇರಣೆಯಾದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಧಾರವಾಡ | ಫಸಲ್ ಬಿಮಾ ಯೋಜನೆಯಲ್ಲಿ ಭಾರೀ ಗೋಲ್ಮಾಲ್‌ – 9 ಕೋಟಿಗೂ ಹೆಚ್ಚು ಹಣ ವಂಚನೆದೇವರಮನೆ ಬೆಟ್ಟದಲ್ಲಿ ಬೆಂಗಳೂರಿನ ಪ್ರವಾಸಿಗ ಹೃದಯಾಘಾತಕ್ಕೆ ಬಲಿ15 ಸಾವಿರ ಹೊಸ ಬಸ್ ಖರೀದಿಗೆ ಚಾಲನೆ: ಬೈರತಿ ಸುರೇಶ್