LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬಿಡದಿ ಟೌನ್‌ಶಿಪ್‌ ಜಟಾಪಟಿ – ಸರ್ವೆಗೆ ಬಂದ ಅಧಿಕಾರಿಗಳಿಗೆ ಪೊರಕೆ ಏಟು!

Advertisement
Advertisement

ರಾಮನಗರ: ಬಿಡದಿ ಟೌನ್​ಶಿಪ್​​  ವಿಚಾರದಲ್ಲಿ ಗದ್ದಲ – ಗಲಾಟೆ ದಿನದಿಂದ ದಿನಕ್ಕೆ ಜೋರಾಗುತ್ತಿದೆ. ಸರ್ಕಾರದ ನಿರ್ಧಾರಕ್ಕೆ ರೈತರು ವಿರೋಧ ವ್ಯಕ್ತಪಡಿಸುತ್ತಿದ್ದು, ಜಮೀನು ಒತ್ತುವರಿ ವಿರುದ್ಧ ತಿರುಗಿಬಿದ್ದಿದ್ದಾರೆ. ವಿರೋಧದ ನಡುವೆಯೂ ಬಿಡದಿ ತಾಲೂಕಿನ ಮಂಡಲಹಳ್ಳಿ ಗ್ರಾಮದಲ್ಲಿ ಜೆಎಂಸಿ ಸರ್ವೆಗೆ ಮುಂದಾದ ಜಿಬಿಡಿಎ ಅಧಿಕಾರಿಗಳ ವಿರುದ್ಧ ರೈತರು ಆಕ್ರೋಶ ಹೊರಹಾಕಿದ್ದಾರೆ.

ಯಾವುದೇ ಕಾರಣಕ್ಕೂ ಜೆಎಂಸಿ ಸರ್ವೇ ನಡೆಸದಂತೆ ಮಂಡಲಹಳ್ಳಿ ಗ್ರಾಮದ ರೈತರು ಒತ್ತಾಯಿಸಿದ್ದಾರೆ. ಬಲವಂತವಾಗಿ ಸರ್ವೇ ಕಾರ್ಯ ನಡೆಸಿದ್ರೆ ಅಧಿಕಾರಿಗಳಿಗೆ ಪೊರಕೆ ಏಟು ಕೊಡುವ ಎಚ್ಚರಿಕೆಯನ್ನೂ ನೀಡಿದ್ದಾರೆ. ಇದರ ಹೊರತಾಗಿಯೂ ಸರ್ವೆಗೆ ಮುಂದಾದ ಅಧಿಕಾರಿಗಳಿಗೆ ರೈತ ಮಹಿಳೆಯರು ಪೊರಕೆ ಏಟು ಕೊಟ್ಟಿದ್ದಾರೆ. 

ಸರ್ವೆಗೆ ಬಂದ ಅಧಿಕಾರಿಗಳಿಗೆ ಪೊರಕೆ ಏಟು
ಜೆಎಂಸಿ ಸರ್ವೇ ಮಾಡಲು ಅಧಿಕಾರಿಗಳು ಗ್ರಾಮಕ್ಕೆ ಬಂದಿದ್ದರು. ಆದರೆ ರೈತರು ಯಾವುದೇ ಕಾರಣಕ್ಕೂ ಸರ್ವೇ ಮಾಡಲು ಅನುಮತಿ ನೀಡಲಿಲ್ಲ. ಅಧಿಕಾರಿಗಳು ಎಷ್ಟೇ ಮನವಿ ಮಾಡಿದರೂ ರೈತರು ಕೇಳಲಿಲ್ಲ. ರೈತರು ಸರ್ವೆಗೆ ಬಂದ ಅಧಿಕಾರಿಗಳ ಕಾರನ್ನು ಸುತ್ತುವರಿದು, ಪೊರಕೆಯಿಂದ ಹೊಡೆದು ಆಕ್ರೋಶ ವ್ಯಕ್ತಪಡಿಸಿದರು. ರೈತ ಮಹಿಳೆಯರೂ ಈ ಹೋರಾಟದಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಾರೆ. ಸ್ಥಳದಲ್ಲಿ ಪೊಲೀಸರು ಇದ್ದರೂ ರೈತರ ಆಕ್ರೋಶ ತಡೆಯಲು ಸಾಧ್ಯವಾಗಲಿಲ್ಲ ಎಂದು ಹೇಳಲಾಗುತ್ತಿದೆ. ಪೊಲೀಸರನ್ನು ಲೆಕ್ಕಿಸದೇ ರೈತರು ಅಧಿಕಾರಿಗಳ ಕಾರಿಗೆ ಮುತ್ತಿಗೆ ಹಾಕಿ ಪೊರಕೆಯಲ್ಲಿ ಹೊಡೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಘಟನೆ ಬೆನ್ನಲ್ಲೇ ಇನ್ನೂ ಸ್ಥಳಕ್ಕೆ ಭೇಟಿ ನೀಡಿದ ಎಸ್ಪಿ ಶ್ರೀನಿವಾಸ ಗೌಡ ಅವರು ರೈತರ ಜೊತೆಗೆ ಮಾತುಕತೆ ನಡೆಸಿದ್ದಾರೆ. ಎಎಸ್ಪಿ ರಾಮಚಂದ್ರಯ್ಯ, ಡಿವೈಎಸ್ಪಿ ಗಿರೀಶ್, ಶ್ರೀನಿವಾಸ್ ರಿಂದ ಮಾಹಿತಿ ಪಡೆದು ಸ್ಥಳದಲ್ಲೇ ಬೀಡುಬಿಟ್ಟಿದ್ದಾರೆ.

ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿ ಮಾಡಬೇಡಿ, ಅಧಿಕಾರಿಗಳ ಮೇಲೆ ಹಲ್ಲೆ ಮಾಡಿದ್ರೆ ನಾವು ಸುಮ್ಮನೆ ನೋಡ್ತಾ ಕೂರಲ್ಲ. ಕಾನೂನು ಕೈಗೆತ್ತಿಕೊಳ್ಳುವ ಕೆಲಸ ಮಾಡಬೇಡಿ ಎಂದು ರೈತರಿಗೆ ಮನವಿ ಮಾಡಿದ್ದಾರೆ. 

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
KPSC ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅಮಾನತುಲೈಗಿಂಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ – ಹೆಚ್.ಡಿ ರೇವಣ್ಣಗೆ ಸುಪ್ರೀಂಕೋರ್ಟ್ ನೋಟಿಸ್ವಿದೇಶಾಂಗ ನೀತಿ ಟ್ರಂಪ್‌ಗೆ ಅಡವಿಟ್ಟ ಮೋದಿ: ಪ್ರಿಯಾಂಕ್‌ ಟೀಕೆಪೋಕ್ಸೋ ಪ್ರಕರಣ – ವಚನಾನಂದ ಸ್ವಾಮೀಜಿಗೆ ಜಾಮೀನು ಮಂಜೂರುಬಿಡದಿ ಟೌನ್‌ಶಿಪ್‌ ಜಟಾಪಟಿ – ಸರ್ವೆಗೆ ಬಂದ ಅಧಿಕಾರಿಗಳಿಗೆ ಪೊರಕೆ ಏಟು!ಶಿವಮೊಗ್ಗದ ಮುಪ್ಪಾನೆ – ಹಲ್ಕೆ ನಡುವಿನ ಲಾಂಚ್ ಸೇವೆ ಪುನಾರಂಭನೇಪಾಳದಲ್ಲಿ ಬೆಳಗಾವಿ ಯುವಕನ ಬರ್ಬರ ಹತ್ಯೆ – ರೂಮ್‌ಮೇಟ್‌ನಿಂದಲೇ ಕೃತ್ಯಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದನ್ನು ಕಂಡು ಪತಿಯೂ ನೇಣಿಗೆ ಶರಣು – ಪ್ರಾಣಬಿಟ್ಟ ನವದಂಪತಿರಾಮಮಂದಿರ ದೇಣಿಗೆ ಕಳ್ಳತನ ಪ್ರಕರಣ: ತನಿಖಾ ವರದಿ ಸಲ್ಲಿಸುವಂತೆ ಸುಪ್ರೀಂ ಆದೇಶಚಲಿಸುತ್ತಿದ್ದ ಟ್ರೈನ್‌ನಲ್ಲಿ ಪೂಜೆ – 3 ಲಕ್ಷಕ್ಕೂ ಹೆಚ್ಚಿನ ಬೆಲೆಗೆ ಖಾಸಗಿ ಕೋಚ್ ಬುಕ್ ಆಗಿತ್ತು: ರೈಲ್ವೇ ಇಲಾಖೆ ಸ್ಪಷ್ಟನೆ