LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬೀದರ್, ಕಲಬುರ್ಗಿ ಕುಡಿಯುವ ನೀರು ಯೋಜನೆ: ಜಲಶಕ್ತಿ ಸಚಿವರಿಗೆ ಖಂಡ್ರೆ ಮನವಿ

Advertisement

ಬೆಂಗಳೂರು: ಕಲ್ಯಾಣ ಕರ್ನಾಟಕದ ಬೀದರ್ ಮತ್ತು ಕಲಬುರಗಿ ಜಿಲ್ಲೆಗಳಿಗೆ ಸುಸ್ಥಿರ ಕುಡಿಯುವ ನೀರು ಖಾತ್ರಿಪಡಿಸುವ ಯೋಜನೆ ಕುರಿತಂತೆ ಕೇಂದ್ರ ಜಲಶಕ್ತಿ ಸಚಿವ ಸಿ.ಆರ್. ಪಾಟೀಲ್ ಅವರೊಂದಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಖಂಡ್ರೆ ಚರ್ಚಿಸಿದ್ದಾರೆ.

ಕರ್ನಾಟಕದ ಉತ್ತರ ತುದಿಯ ಈ ಎರಡು ಜಿಲ್ಲೆಗಳು ಕುಡಿಯುವ ನೀರಿನ ಕೊರತೆ ಎದುರಿಸುತ್ತಿದ್ದು, ಅಂತರ್ಜಲ ಮಟ್ಟವೂ ಕುಸಿದಿದೆ. ಹೀಗಾಗಿ ಮುಂದಿನ 30 ವರ್ಷಗಳವರೆಗೆ ಶಾಶ್ವತ, ಸುಸ್ಥಿರ ಮತ್ತು ಮೇಲ್ಮೈ ನೀರು ಆಧಾರಿತ ಕುಡಿಯುವ ನೀರಿನ ಪರಿಹಾರ ಒದಗಿಸಲು ರಾಜ್ಯ ಸರ್ಕಾರವು ಈ ಸಮಗ್ರ ಬಹುಗ್ರಾಮ ಕುಡಿಯುವ ನೀರು ಸರಬರಾಜು ಯೋಜನೆ ಜಾರಿಗೊಳಿಸಲು ಪ್ರಾಥಮಿಕ ಯೋಜನಾ ವರದಿಯನ್ನು ಅಂತಿಮಗೊಳಿಸಿದೆ ಎಂದು ಕೇಂದ್ರ ಸಚಿವರಿಗೆ ತಿಳಿಸಿ ಮನವಿ ಪತ್ರ ಸಲ್ಲಿಸಿದರು.

ಕೃಷ್ಣಾ ನದಿಗೆ ಅಡ್ಡಲಾಗಿ ನಿರ್ಮಿಸಿರುವ ನಾರಾಯಣಪುರ ಜಲಾಶಯದ ಸುಸ್ಥಿರ ಮತ್ತು ದೀರ್ಘಕಾಲಿಕ ಸಂಗ್ರಹಣೆಯಿಂದ ನೀರನ್ನು ಎತ್ತುವಳಿ ಮಾಡುವ ಉದ್ದೇಶ ಹೊಂದಿದ್ದು, ಇದರ ಒಟ್ಟು ಅಂದಾಜು ವೆಚ್ಚ 7,200 ಕೋಟಿ ರೂ. ಆಗುತ್ತದೆ. ಬೀದರ್ ಮತ್ತು ಕಲಬುರಗಿ ಜಿಲ್ಲೆಗಳ ಒಟ್ಟು 28.09 ಲಕ್ಷ ಜನರಿಗೆ ಕುಡಿಯುವ ನೀರು ಪೂರೈಸಲು ಈ ಯೋಜನೆ ಸಹಕಾರಿಯಾಗಲಿದೆ ಎಂದು ಪತ್ರದಲ್ಲಿ ವಿವರಿಸಿದ್ದಾರೆ.

18 ತಾಲ್ಲೂಕುಗಳು ಮತ್ತು 943 ಗ್ರಾಮಗಳನ್ನು ಒಳಗೊಂಡ ಈ ಉಪಕ್ರಮವು ಸುಮಾರು 200 ಎಂಎಲ್‌ಡಿ ನೀರಿನ ಅಗತ್ಯವನ್ನು ಪೂರೈಸುವ ಗುರಿಯನ್ನು ಹೊಂದಿದೆ. ಒಟ್ಟು ಫಲಾನುಭವಿಗಳ ಜನಸಂಖ್ಯಾ ವಿಭಜನೆಯಲ್ಲಿ ಪರಿಶಿಷ್ಟ ಜಾತಿ (ಎಸ್‌ಸಿ) 6.76 ಲಕ್ಷ ಮತ್ತು ಪರಿಶಿಷ್ಟ ಪಂಗಡದ (ಎಸ್‌ಟಿ) 1.84 ಲಕ್ಷ ಸೇರಿವೆ ಎಂಬ ವಿವರವನ್ನು ಮನವಿ ಪತ್ರದಲ್ಲಿ ತಿಳಿಸಲಾಗಿದೆ. 

ನೀರು ಜೀವಜಲವಾಗಿದ್ದು, ಗ್ರಾಮೀಣ ಜನರ ಕುಡಿಯುವ ನೀರು ಪೂರೈಕೆಯ ಹಿತದೃಷ್ಟಿಯಿಂದ ಈ ಯೋಜನೆಯನ್ನು ಅನುಮೋದಿಸಲು ಕೇಂದ್ರ ಜಲಶಕ್ತಿ ಸಚಿವರನ್ನು ಕೋರಲಾಗಿದೆ ಎಂದು ಈಶ್ವರ ಖಂಡ್ರೆ ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಕೇಂದ್ರ ಜಲಶಕ್ತಿ ಮತ್ತು ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಹಾಗೂ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಉಚಿತ ಕಣ್ಣಿನ ತಪಾಸಣೆ ಮತ್ತು ಯಲಬು ಕೀಳು, BP, ಶುಗರ ತಪಾಸಣೆ,  ಶಿಬಿರಹೋಂಸ್ಟೇನಲ್ಲಿ ಯುವತಿ ಸಾವು; ಸಂಜೀತ್ ಅಲಿ ಸಹವಾಸ ಮಾಡಿ ತಪ್ಪು ಮಾಡಿಬಿಟ್ಟೆ ಹೊಸ ಬದುಕು ಕಟ್ಟಿಕೊಳ್ತೀನಿ ಎಂದಿದ್ದ ಸುರಭಿಹಾವೇರಿಯ ನರೇಗಲ್ ಘಟನೆ ಕೋಮು ಸೌಹಾರ್ದತೆ ಕದಡುವ ಹೇಯ ಕೃತ್ಯ: ಬೊಮ್ಮಾಯಿರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ15 ದಿನಗಳಲ್ಲಿ ರಾಜ್ಯ ಸಚಿವ ಸಂಪುಟ ವಿಸ್ತರಣೆ: ಎಂಬಿ ಪಾಟೀಲ್ಸಿದ್ದರಾಮಯ್ಯ ಎದುರು ಕಣ್ಣೀರಿಟ್ಟ ಶಾಸಕ ಪ್ರದೀಪ್ ಈಶ್ವರ್ಮುಂದಿನ ಮೂರು ವರ್ಷಗಳಲ್ಲಿ 100% ಎಬಿಸಿ ಗುರಿ ಸಾಧಿಸಲು ಕಾರ್ಯಸೂಚಿ ಸಿದ್ಧಪಡಿಸಿ: ಕೃಷ್ಣ ಬೈರೇಗೌಡಎತ್ತಿನಹೊಳೆಗೆ ಜೆಜೆಎಂನಲ್ಲಿ 4,708 ಕೋಟಿ ರೂ. ವೆಚ್ಚ ಭರಿಸಲು ಕೇಂದ್ರಕ್ಕೆ ಈಶ್ವರ ಖಂಡ್ರೆ ಮನವಿಬೀದರ್, ಕಲಬುರ್ಗಿ ಕುಡಿಯುವ ನೀರು ಯೋಜನೆ: ಜಲಶಕ್ತಿ ಸಚಿವರಿಗೆ ಖಂಡ್ರೆ ಮನವಿಕೇತನ್ ಹತ್ಯೆ ಬಳಿಕ ಲೋಹಗಡ ಕೋಟೆಗೆ ಮುಗಿಬಿದ್ದ ಜನ – ಕೊಲೆ ನಡೆದ ಸ್ಥಳಕ್ಕೆ ‘ಸಿಯಾ ಪಾಯಿಂಟ್’ ಹೆಸರು