LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕೆಪಿಸಿಸಿ ನೂತನ ಅಧ್ಯಕ್ಷರಾಗಿ ಬಿ.ಕೆ.ಹರಿಪ್ರಸಾದ್ ಪದಗ್ರಹಣ

Advertisement

ಬೆಂಗಳೂರು: ಭಾನುವಾರ ಕೆಪಿಸಿಸಿ ನೂತನ ಅಧ್ಯಕ್ಷರಾಗಿ ಬಿ.ಕೆ.ಹರಿಪ್ರಸಾದ್  ಪದಗ್ರಹಣ ಮಾಡಲಿದ್ದಾರೆ.

ನಾಳೆ ಬೆಳಿಗ್ಗೆ 11 ಗಂಟೆಗೆ ಪ್ಯಾಲೆಸ್ ಗ್ರೌಂಡ್‌ನಲ್ಲಿ ಸಮಾರಂಭ ನಡೆಯಲಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲ ಸೇರಿದಂತೆ ಎಐಸಿಸಿ ನಾಯಕರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. 

ನಿರ್ಗಮಿತ ಅಧ್ಯಕ್ಷ ಹಾಗೂ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪಕ್ಷದ ಬಾವುಟ ಹಸ್ತಾಂತರ ಮಾಡುವ ಮೂಲಕ ಅಧಿಕೃತವಾಗಿ ಅಧಿಕಾರ ಹಸ್ತಾಂತರ ಮಾಡಲಿದ್ದಾರೆ. ಅಂದಾಜು 1 ಲಕ್ಷ ಜನ ಸೇರಬಹುದು ಎನ್ನಲಾಗಿದೆ. 300 ಜನ ಗಣ್ಯರಿಗೆ ವೇದಿಕೆ ಮೇಲೆ ಆಸನ ವ್ಯವಸ್ಥೆ ಮಾಡಲಾಗಿದ್ದು, 4000 ಬ್ಲಾಕ್ ಕಾಂಗ್ರೆಸ್‌ನ ಪ್ರತಿನಿಧಿಗಳಿಗೆ ಪ್ರತ್ಯೇಕ ಆಸನ ವ್ಯವಸ್ಥೆ ಮಾಡಲಾಗಿದೆ.

70 ಊಟದ ಕೌಂಟರ್‌ಗಳನ್ನು ಮಾಡಲಾಗಿದ್ದು, ನಾಯಕರಿಗೆ ಎರಡು ಪ್ರತ್ಯೇಕ ವೇದಿಕೆ ಸಹ ಮಾಡಲಾಗಿದೆ. ಕಾಂಗ್ರೆಸ್ ಕಾರ್ಯಕರ್ತರು ಜಮಾಯಿಸುವ ಕಾರಣ ನಾಳೆ ಬೆಳಗ್ಗೆ 7 ಗಂಟೆಯಿAದ ಸಂಜೆ 4 ಗಂಟೆವರೆಗೆ ಅರಮನೆ ಮೈದಾನದ ಸುತ್ತಮುತ್ತಲ ರಸ್ತೆಗಳಲ್ಲಿ ಭಾರಿ ಟ್ರಾಫಿಕ್ ಜಾಮ್ ಆಗಲಿದೆ. ಹಾಗಾಗಿ, ಸಂಚಾರಿ ಪೊಲೀಸರು ಮಾರ್ಗ ಬದಲಾವಣೆ ಮಾಡಿದ್ದಾರೆ.

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಚಿಕ್ಕೋಡಿಯ ಸಿಟಿಇ ಸಂಸ್ಥೆಯ ಡಿ.ಕೆ.ಶಹಾ ಪ್ರಾಥಮಿಕ ಶಾಲಾ ಮಕ್ಕಳಿಗೆ ಶುದ್ಧ ಕುಡಿಯುವ ನೀರಿನ ಯಂತ್ರ ಕೊಡುಗೆ; ಗಣ್ಯರಿಂದ ಸತ್ಕಾರಗ್ಯಾರಂಟಿ ಪರಿಷ್ಕರಣೆ ಅನಿವಾರ್ಯ, ಆದರೆ ನಿಲ್ಲಿಸಲ್ಲ: ಸಚಿವ ಸತೀಶ್ ಜಾರಕಿಹೊಳಿಧರ್ಮಸ್ಥಳದಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ: ಶಾಸಕರಿಂದ ಆಣೆ-ಪ್ರಮಾಣಕ್ಕೆ ನಿರ್ಧಾರಬೈಕ್ ಪಾರ್ಕಿಂಗ್ ವಿಚಾರಕ್ಕೆ ಜಗಳ – ಚಾಕು ಇರಿದು ಮಹಿಳೆ ಹತ್ಯೆ, ಪತಿಗೆ ಗಂಭೀರ ಗಾಯಬೆಂಗಳೂರಿನಲ್ಲಿ ಕಳಪೆ ರಸ್ತೆ ಕಾಮಗಾರಿ – ಕೃಷ್ಣ ಬೈರೇಗೌಡ ಕ್ಲಾಸ್‌ ಬೆನ್ನಲ್ಲೇ ಅಧಿಕಾರಿ ಅಮಾನತು, ಗುತ್ತಿಗೆದಾರನಿಗೆ ದಂಡ!ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಯೋಗ ಅಗತ್ಯ: ಯು.ಟಿ ಖಾದರ್ರಾಜ್ಯ ಬಿಜೆಪಿಯಲ್ಲಿ ಬದಲಾವಣೆ ತರಬೇಕು, ಯತ್ನಾಳ್‌ರನ್ನ ವಿಪಕ್ಷ ನಾಯಕನನ್ನಾಗಿ ಮಾಡಬೇಕು: ಕುಮಾರ್‌ ಬಂಗಾರಪ್ಪನಾನು ಅಡ್ಡ ಮತದಾನ ಮಾಡಿಲ್ಲ, ಮುಜುಗರ ಉಂಟು ಮಾಡಬೇಡಿ: ಚಂದ್ರು ಲಮಾಣಿ2 ಕೋಟಿ ವಿಮೆಗಾಗಿ ಗಂಡನನ್ನು ಕೊಂದ ಮಗಳು ಅರೆಸ್ಟ್ – ಊರಲ್ಲಿ ತಲೆ ಎತ್ತಲಾಗದೆ ತಾಯಿ ಆತ್ಮಹತ್ಯೆಸಂತೋಷದ ಬದುಕಿಗೆ ಯೋಗ ದಾರಿ : ವೀರಣ್ಣ ಚರಂತಿಮಠ