LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಶೀಘ್ರವೇ ಬಸ್‌ ಟಿಕೆಟ್ ದರ ಏರಿಕೆ – BMTC 44%, KSRTC 33% ರಷ್ಟು ಹೆಚ್ಚಳಕ್ಕೆ ಪ್ರಸ್ತಾಪ

Advertisement

ಬೆಂಗಳೂರು: ರಾಜ್ಯದ ಜನತೆಗೆ ಶೀಘ್ರದಲ್ಲೇ ಸಾರಿಗೆ ಸಂಸ್ಥೆಗಳು ದರ ಏರಿಕೆಯ ಬಿಸಿ ಮುಟ್ಟಿಸಲು ಸಜ್ಜಾಗಿವೆ. ತೀವ್ರ ಆರ್ಥಿಕ ನಷ್ಟ ಹಾಗೂ ಡೀಸೆಲ್‌ ದರ ಏರಿಕೆಯಿಂದ ತತ್ತರಿಸಿರುವ ಕೆಎಸ್‌ಆರ್‌ಟಿಸಿ  ಮತ್ತು ಬಿಎಂಟಿಸಿ  ಸೇರಿದಂತೆ ನಾಲ್ಕೂ ಸಾರಿಗೆ ನಿಗಮಗಳು ಬಸ್ ಟಿಕೆಟ್ ದರವನ್ನು ಭಾರಿ ಪ್ರಮಾಣದಲ್ಲಿ ಹೆಚ್ಚಿಸಲು ಮುಖ್ಯಮಂತ್ರಿ ಡಿಕೆ ಶಿವಕುಮಾರ್‌(ಅವರಿಗೆ ಅಧಿಕೃತ ಪ್ರಸ್ತಾವನೆ ಸಲ್ಲಿಸಿವೆ.

ನಾಲ್ಕೂ ಸಾರಿಗೆ ನಿಗಮಗಳು ಪ್ರತ್ಯೇಕವಾಗಿ ದರ ಪರಿಷ್ಕರಣೆಗೆ ಬೇಡಿಕೆ ಇಟ್ಟಿದೆ. ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಟಿಕೆಟ್ ದರದಲ್ಲಿ ಬರೋಬ್ಬರಿ 44% ರಷ್ಟು ಏರಿಕೆ ಮಾಡಲು ಪ್ರಸ್ತಾಪಿಸಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು (KSRTC) ಟಿಕೆಟ್ ದರವನ್ನು 33% ರಷ್ಟು ಹೆಚ್ಚಿಸಲು ಅನುಮತಿ ಕೋರಿದೆ. ಇದರೊಂದಿಗೆ ಕಲ್ಯಾಣ ಕರ್ನಾಟಕ (KKRTC) ಮತ್ತು ವಾಯುವ್ಯ ಕರ್ನಾಟಕ (NWKRTC) ಸಾರಿಗೆ ಸಂಸ್ಥೆಗಳೂ ಸಹ ದರ ಏರಿಕೆಗೆ ಒತ್ತಾಯಿಸಿವೆ.

ಕರ್ನಾಟಕ ಸರ್ಕಾರ ಈ ಹಿಂದೆ ಜನವರಿ 5, 2025 ರಿಂದ ಜಾರಿಗೆ ಬರುವಂತೆ ಸರ್ಕಾರಿ ಬಸ್‌ಗಳ ಟಿಕೆಟ್‌ ದರವನ್ನು 15% ರಷ್ಟು ಹೆಚ್ಚಳ ಮಾಡಿ ಆದೇಶ ಹೊರಡಿಸಿತ್ತು. ಈಗ ಸಾರಿಗೆ ಸಂಸ್ಥೆಗಳು ಮತ್ತೊಮ್ಮೆ ದರ ಪರಿಷ್ಕರಣೆಗಾಗಿ ಸರ್ಕಾರಕ್ಕೆ ಹೊಸ ಪ್ರಸ್ತಾವನೆಯನ್ನು ಸಲ್ಲಿಸಿವೆ. ಸಾರಿಗೆ ನಿಗಮಗಳು ದರ ಏರಿಕೆಯನ್ನು ಸಮರ್ಥಿಸಿಕೊಳ್ಳುತ್ತಿದ್ದು, ತಕ್ಷಣವೇ ಈ ಕ್ರಮ ಕೈಗೊಳ್ಳದಿದ್ದರೆ ಸಂಸ್ಥೆಗಳು ಸಂಪೂರ್ಣ ಆರ್ಥಿಕ ಸಂಕಷ್ಟಕ್ಕೆ ಸಿಲುಕಲಿವೆ ಎಂದು ಸಿಎಂಗೆ ಮನವರಿಕೆ ಮಾಡಿಕೊಟ್ಟಿವೆ.
ಮೇ 25 ರವರೆಗಿನ ಇಂಧನ ದರ ಏರಿಕೆಯು ನಿಗಮಗಳ ಸೊರಗುವಿಕೆಗೆ ಪ್ರಮುಖ ಕಾರಣವಾಗಿದೆ. ಕೇವಲ ಹತ್ತು ದಿನಗಳ ಅವಧಿಯಲ್ಲಿ ನಾಲ್ಕು ಬಾರಿ ಡೀಸೆಲ್ ದರ ಏರಿಕೆಯಾಗಿದೆ. ಇದರಿಂದಾಗಿ ಪ್ರತಿ ಲೀಟರ್ ಡೀಸೆಲ್ ಬೆಲೆಯಲ್ಲಿ ಬರೋಬ್ಬರಿ 7.81 ರೂ. ಏರಿಕೆ ಕಂಡಿತ್ತು. 

 
ಪ್ರತಿ ನಿತ್ಯ ನಾಲ್ಕೂ ನಿಗಮಗಳ ಬಸ್‌ಗಳಿಗೆ 13 ಲಕ್ಷ ಲೀಟರ್‌ಗೂ ಹೆಚ್ಚು ಡೀಸೆಲ್ ಬಳಕೆಯಾಗುತ್ತಿದೆ. ಈ ಇಂಧನ ದರ ಏರಿಕೆಯಿಂದಾಗಿ ಸಾರಿಗೆ ನಿಗಮಗಳಿಗೆ ತಿಂಗಳಿಗೆ 40 ಕೋಟಿ ರೂ. ಹಾಗೂ ವರ್ಷಕ್ಕೆ ಬರೋಬ್ಬರಿ 480 ಕೋಟಿ ರೂ.ಗಳ ಹೆಚ್ಚುವರಿ ಆರ್ಥಿಕ ಹೊರೆ ಬೀಳುತ್ತಿದೆ.

ಸರ್ಕಾರದ ಮಹತ್ವಾಕಾಂಕ್ಷಿ ‘ಶಕ್ತಿ’ ಉಚಿತ ಬಸ್ ಪ್ರಯಾಣ ಯೋಜನೆ, ಇನ್ನೊಂದೆಡೆ ದಿನೇ ದಿನೇ ಗಗನಕ್ಕೇರುತ್ತಿರುವ ಕಾರ್ಯಾಚರಣಾ ವೆಚ್ಚ ಹಾಗೂ ಸಾರಿಗೆ ನೌಕರರ ವೇತನ ಪರಿಷ್ಕರಣೆ ಈ ತ್ರಿವಳಿ ಸವಾಲುಗಳಿಂದಾಗಿ ಸಾರಿಗೆ ನಿಗಮಗಳ ಮೇಲಿನ ಆರ್ಥಿಕ ಹೊರೆ ಮತ್ತು ಆಡಳಿತಾತ್ಮಕ ಜವಾಬ್ದಾರಿ ಈಗ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ.

ಈಗಾಗಲೇ ನಷ್ಟದ ಸುಳಿಗೆ ಸಿಲುಕಿರುವ ಸಾರಿಗೆ ಸಂಸ್ಥೆಗಳನ್ನು ಉಳಿಸಿಕೊಳ್ಳಲು ಟಿಕೆಟ್ ದರ ಏರಿಕೆ ಅನಿವಾರ್ಯ ಎಂಬುದು ಅಧಿಕಾರಿಗಳ ವಾದವಾಗಿದೆ. ಸದ್ಯ ಪ್ರಸ್ತಾವನೆ ಮುಖ್ಯಮಂತ್ರಿಗಳ ಅಂಗಳದಲ್ಲಿದ್ದು, ಸರ್ಕಾರ ಎಷ್ಟು ಪ್ರಮಾಣದ ದರ ಏರಿಕೆಗೆ ಹಸಿರು ನಿಶಾನೆ ನೀಡಲಿದೆ ಎಂಬುದನ್ನು ಕಾದು ನೋಡಬೇಕಿದೆ.

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯ ಸರ್ಕಾರಿ ನೌಕರರಿಗೆ ಇಲ್ವಾ ಗ್ಯಾರಂಟಿ?ಜೈಲಿನಲ್ಲಿ ಪ್ರಾಣಾಯಾಮ, ಶವಾಸನ ಮಾಡಿದ ದರ್ಶನ್‌ಮೈಸೂರು ರೈಲು ನಿಲ್ದಾಣದಲ್ಲಿ 40ಕ್ಕೂ ಹೆಚ್ಚು ಶಂಕಿತ ಬಾಂಗ್ಲಾ ವಲಸಿಗರು ಪತ್ತೆ – ತೀವ್ರ ವಿಚಾರಣೆಅಡ್ಡ ಮತದಾನ ಮಾಡಿದ್ದು ಸಾಬೀತಾದರೆ ರಾಜೀನಾಮೆ ನೀಡಿ ರಾಜಕೀಯ ನಿವೃತ್ತಿ ಪಡೆಯುತ್ತೇನೆ: ಚಂದ್ರು ಲಮಾಣಿ51 ವರ್ಷಗಳಿಂದ ಹಿಡಕಲ್ ಜಲಾಶಯದಲ್ಲಿ ಮುಳುಗಡೆಯಾಗಿದ್ದ ದೇವಸ್ಥಾನ ಮತ್ತೆ ಗೋಚರ!ಮನೆಯ ಬೀಗ ಮುರಿದು ಕಳ್ಳತನ – 20 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನ, ಬೆಳ್ಳಿ ದೋಚಿ ಪರಾರಿಭೀಮಾತೀರದಲ್ಲಿ 6 ಜನರ ಹತ್ಯೆ ಪ್ರಕರಣ – ಆರೋಪಿ ಕಾಲಿಗೆ ಪೊಲೀಸರಿಂದ ಗುಂಡೇಟುಹೆಚ್‌ಸಿಜಿ ಕ್ಯಾನ್ಸರ್ ಆಸ್ಪತ್ರೆಗೆ ಬಿಗ್ ಶಾಕ್: ಕ್ಲಿನಿಕಲ್ ಟ್ರಯಲ್ ನಡೆಸದಂತೆ ಕೇಂದ್ರ ಸರ್ಕಾರದಿಂದ 2 ವರ್ಷ ನಿಷೇಧಶೀಘ್ರವೇ ಬಸ್‌ ಟಿಕೆಟ್ ದರ ಏರಿಕೆ – BMTC 44%, KSRTC 33% ರಷ್ಟು ಹೆಚ್ಚಳಕ್ಕೆ ಪ್ರಸ್ತಾಪಧೈರ್ಯವಿದ್ದರೆ ನನ್ನ ಜೊತೆ ಭೈರಮಂಗಲಕ್ಕೆ ಬನ್ನಿ, ರೈತರ ಜೊತೆ ಮಾತನಾಡೋಣ – ಡಿಕೆಶಿಗೆ ಹೆಚ್‌ಡಿಕೆ ಸವಾಲು