LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ತಮಿಳುನಾಡಿಗೆ ಕಾವೇರಿ ನೀರು: ಸೋಮವಾರಕ್ಕೆ ಸುಪ್ರೀಂ ವಿಚಾರಣೆ ಮುಂದೂಡಿಕೆ

Advertisement
Advertisement
Advertisement

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ  ನಿರ್ದೇಶನ ನೀಡಬೇಕು ಎಂದು ಕೋರಿ ಸಲ್ಲಿಸಲಾಗಿರುವ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಮುಂದಿನ ಸೋಮವಾರಕ್ಕೆ ಮುಂದೂಡಿದೆ.

ಇಂದು ನ್ಯಾಯಮೂರ್ತಿ ವಿಕ್ರಮ್ ನಾಥ್ ನೇತೃತ್ವದ ದ್ವಿಸದಸ್ಯ ಪೀಠ ಅರ್ಜಿಯ ವಿಚಾರಣೆ ನಡೆಸಿತು. ತಮಿಳುನಾಡು ಪರ ಹಿರಿಯ ವಕೀಲ ಸಿ.ಎಸ್. ವೈದ್ಯನಾಥನ್ ವಾದ ಮಂಡಿಸಿ, ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಹಾಗೂ ಕಾವೇರಿ ನೀರು ನಿಯಂತ್ರಣ ಸಮಿತಿ ನೀಡಿರುವ ನಿರ್ದೇಶನಗಳನ್ನು ಕರ್ನಾಟಕ ಪಾಲಿಸುತ್ತಿಲ್ಲ ಎಂದು ಆರೋಪಿಸಿದರು. “ದುರದೃಷ್ಟವಶಾತ್, ಕರ್ನಾಟಕ ನಮಗೆ ಪ್ರಮಾಣಾನುಗುಣವಾಗಿ ನೀರು ಹರಿಸುತ್ತಿಲ್ಲ. ಅಲ್ಪ ಪ್ರಮಾಣದಲ್ಲಿ ನೀರು ಬಿಡಲಾಗುತ್ತಿದ್ದು, ತಮಿಳುನಾಡಿಗೆ ಬರಬೇಕಾದ ಪ್ರಮಾಣದ ನೀರು ಬರುತ್ತಿಲ್ಲ ಎಂದು ವಾದಿಸಿದರು.

ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸ್ಥಾಪನೆ, ಅದರ ಅಧಿಕಾರ, ಕಾರ್ಯಗಳು ಹಾಗೂ ಕರ್ತವ್ಯಗಳನ್ನು ಗಮನಿಸಬೇಕು. ಪ್ರಾಧಿಕಾರ ನೀಡಿರುವ ಆದೇಶಗಳನ್ನು ಕರ್ನಾಟಕ ಪಾಲಿಸಬೇಕಿದೆ. ಆದರೆ, ಕರ್ನಾಟಕ ತನ್ನ ರೈತರಿಗೆ ನೀರು ಹರಿಸುತ್ತಿದ್ದು, ತಮಿಳುನಾಡಿಗೆ ಮಾತ್ರ ನೀರಿನ ಕೊರತೆ ಇದೆ ಎಂದು ಹೇಳುತ್ತಿದೆ ಎಂದು ವೈದ್ಯನಾಥನ್ ನ್ಯಾಯಾಲಯದ ಗಮನಕ್ಕೆ ತಂದರು. 

ಈ ನಡುವೆ, ಕರ್ನಾಟಕ ಪರ ವಕೀಲರು ರಾಜ್ಯವು ಈಗಾಗಲೇ ತಮಿಳುನಾಡಿಗೆ ನೀರು ಹರಿಸುತ್ತಿದೆ ಎಂದು ತಿಳಿಸಿದರು. ನೀರು ಬಿಡುಗಡೆ ಮತ್ತು ಜಲಾಶಯಗಳ ಸ್ಥಿತಿಗತಿ ಸೇರಿದಂತೆ ಪ್ರಸ್ತುತ ಪರಿಸ್ಥಿತಿಯನ್ನು ವಿವರಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, “ಈಗ ಸಮಸ್ಯೆ ಏನಿದೆ? ಸಮಸ್ಯೆ ಇದ್ದರೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಮುಂದೆ ಹೋಗಿ” ಎಂದು ಸೂಚಿಸಿತು.

ಇದೇ ವೇಳೆ, ಕಾವೇರಿ ನೀರು ನಿಯಂತ್ರಣ ಸಮಿತಿ  ಹಾಗೂ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ  ಸಭೆಗಳು ನಡೆಯಲಿರುವುದನ್ನು ಪರಿಗಣಿಸಿದ ಪೀಠ, ಆ ಸಭೆಗಳಲ್ಲಿ ಹೊರಬರುವ ಹೊಸ ಆದೇಶಗಳು ಹಾಗೂ ಶಿಫಾರಸುಗಳನ್ನು ಗಮನಿಸಿದ ಬಳಿಕ ಪ್ರಕರಣದ ವಿಚಾರಣೆ ಮುಂದುವರಿಸುವುದು ಸೂಕ್ತ ಎಂದು ಅಭಿಪ್ರಾಯಪಟ್ಟಿತು.

ತಮಿಳುನಾಡು ಪರ ವಕೀಲರು ಮುಂದಿನ ಸೋಮವಾರವೇ ಅರ್ಜಿಯ ವಿಚಾರಣೆ ನಡೆಸುವಂತೆ ಮನವಿ ಮಾಡಿದರು. ಇದಕ್ಕೆ ಸಮ್ಮತಿಸಿದ ಸುಪ್ರೀಂಕೋರ್ಟ್, ವಿಚಾರಣೆಯನ್ನು ಮುಂದಿನ ಸೋಮವಾರಕ್ಕೆ ಮುಂದೂಡಿತು. ಅಲ್ಲದೆ, ಮುಂದಿನ ವಿಚಾರಣೆಯ ವೇಳೆ ಅಗತ್ಯ ಅಂಕಿ-ಅಂಶಗಳು ಹಾಗೂ ನೀರು ಬಿಡುಗಡೆಗೆ ಸಂಬಂಧಿಸಿದ ಸಮಗ್ರ ಮಾಹಿತಿಯೊಂದಿಗೆ ಬರುವಂತೆ ಎರಡೂ ರಾಜ್ಯಗಳಿಗೆ ಸೂಚನೆ ನೀಡಿತು.

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೆಡಿಕಲ್ ಶಾಪ್ ಮಾಲೀಕನ ಬರ್ಬರ ಹತ್ಯೆ ಕೇಸ್‌ – 6 ಮಂದಿ ಅರೆಸ್ಟ್‌ಈದ್ ಮಿಲಾದ್‌ಗೆ 40 ಅಡಿ‌ ಎತ್ತರದ ಟಿಪ್ಪು ಕಟೌಟ್, ಪಾಕ್ ಸೇನೆ ಹಾಡು ಬಳಸಿ ರೀಲ್ಸ್‌ – ಎಫ್‌ಐಆರ್‌ ದಾಖಲುತಮಿಳುನಾಡಿಗೆ ಕಾವೇರಿ ನೀರು: ಸೋಮವಾರಕ್ಕೆ ಸುಪ್ರೀಂ ವಿಚಾರಣೆ ಮುಂದೂಡಿಕೆ“ದಲಿತರ 187 ಕೋಟಿ ಹಣವನ್ನು ನುಂಗಿದ ನಾಗೇಂದ್ರ ರಾಜೀನಾಮೆ ನೀಡಲೇಬೇಕು” – ವಿಧಾನಸೌಧ ಮುತ್ತಿಗೆ, ಬಿಜೆಪಿ ನಾಯಕರು ವಶH1N1 ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ: ಆರೋಗ್ಯ ಇಲಾಖೆ ಹೈ ಅಲರ್ಟ್, ಆಸ್ಪತ್ರೆಗಳು ಸಂಪೂರ್ಣ ಸನ್ನದ್ಧSIR ಮೊದಲ ಮತದಾರರ ಕರಡು ಪಟ್ಟಿ ರಿಲೀಸ್‌; 1,07,96,339 ಮತದಾರರ ಹೆಸರು ಡಿಲೀಟ್‌ಕರ್ನಾಟಕಕ್ಕೆ ಮತ್ತೆ ‘ಕಾವೇರಿ’ ಶಾಕ್‌ – ತಮಿಳುನಾಡಿಗೆ 9 ಸಾವಿರ ಕ್ಯೂಸೆಕ್‌ ನೀರು ಹರಿಸಲು ಸೂಚನೆಸಮುದ್ರಕ್ಕೆ ಉರುಳಿದ ಕಾರು – ಅಮೆರಿಕದಲ್ಲಿ ಭಾರತೀಯ ಮೂಲದ ಯುವತಿ ಸಾವುಮಂತ್ರಾಲಯದಲ್ಲಿ ಆ.27ರಿಂದ ರಾಯರ 355ನೇ ಆರಾಧನಾ ಮಹೋತ್ಸವಆತಂಕರಿ ಗಿಡ ಮರಗಳು ಹಾಗೂ ರಂಬೆ ಕಾಂಬೆ ಕತ್ತರಿಸಲು ಯಂತ್ರ ಖರೀದಿ ಮಾಡಿದ ಬೆಳಗಾವಿ ಮಹಾನಗರ ಪಾಲಿಕೆ