LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕಾಂಗ್ರೆಸ್ ದೇಶದಲ್ಲಿ ಅರಾಜಕತೆ ಸೃಷ್ಟಿಸಲು ಮುಂದಾಗಿದೆ: ಯದುವೀರ್ ಒಡೆಯರ್

Advertisement
Advertisement

ಮೈಸೂರು: ಕಾಂಗ್ರೆಸ್  ದೇಶದಲ್ಲಿ ಅರಾಜಕತೆ ಸೃಷ್ಟಿಸಲು ಮುಂದಾಗಿದೆ ಎಂದು ಸಂಸದ ಯದುವೀರ್ ಒಡೆಯರ್ ಹೇಳಿದ್ದಾರೆ.

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ  ಸಂಬಂಧ ಪ್ರತಿಭಟನೆ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನೀಟ್ ಪ್ರಶ್ನೆ ಪತ್ರಿಕೆ ಬಹಿರಂಗ ಪ್ರಕರಣವನ್ನು ಕೇಂದ್ರ ಗಂಭೀರವಾಗಿ ಪರಿಗಣಿಸಿದೆ. ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿದೆ. ಮರುಪರೀಕ್ಷೆ ನಡೆದು ಫಲಿತಾಂಶವೂ ಪ್ರಕಟವಾಗಿದೆ. ಆದರೂ ಇದೇ ವಿಚಾರ ಮುಂದಿಟ್ಟುಕೊಂಡು ಕಾಂಗ್ರೆಸ್ ಅರಾಜಕತೆ ಸೃಷ್ಟಿಸಲು ಹೊರಟಿದೆ. ಪ್ರತಿಭಟನೆ ಮೂಲಕ ದಿಕ್ಕು ತಪ್ಪಿಸುವ ಕೆಲಸವಾಗಿದೆ. ಇದು ಕಾಂಗ್ರೆಸ್‌ನ ವ್ಯವಸ್ಥಿತ ಷಡ್ಯಂತ್ರವಾಗಿದೆ ಎಂದು ಕಿಡಿಕಾರಿದರು. 

 

ನೆರೆಯ ಶ್ರೀಲಂಕಾ, ಬಾಂಗ್ಲಾದೇಶ, ನೇಪಾಳದಲ್ಲಿ ಆದಂತೆ ಇಲ್ಲಿಯೂ ಮಾಡಲು ಹೊರಟಿದ್ದಾರೆ. ಆದರೆ ದೇಶದ ಜನತೆ ಇದಕ್ಕೆ ಮಣಿಯುವುದಿಲ್ಲ. ನಮ್ಮ ಪ್ರಜಾಪ್ರಭುತ್ವ ವ್ಯವಸ್ಥೆ ಗಟ್ಟಿಯಾಗಿದೆ. ಜನರು ಏನೇ ಮಾಡಬೇಕಾದರೂ ಮತದಾನದ ಮೂಲಕ ಉತ್ತರ ಕೊಡುತ್ತಾರೆ. ಬೇರೆ ದೇಶದಲ್ಲಿ ಅರಾಜಕತೆ ಉಂಟು ಮಾಡಿದಂತೆ ನಮ್ಮ ದೇಶದಲ್ಲಿ ಮಾಡಲು ಸಾಧ್ಯವಿಲ್ಲ ಎಂದು ವಾಗ್ದಾಳಿ ನಡೆಸಿದರು. 

 

ಮೈಸೂರಿನ ಎನ್‌ಆರ್ ಕ್ಷೇತ್ರದಲ್ಲಿ ಎಸ್‌ಐಆರ್ ಪ್ರಕ್ರಿಯೆ ಪ್ರಾಮಾಣಿಕವಾಗಿ ನಡೆಯುವ ಬಗ್ಗೆ ಅನುಮಾನವಿದೆ. ಕಳೆದ ಮೂರು ದಶಕಗಳಿಂದ ಅಲ್ಲಿ ಏನಾಗ್ತಿದೆ ಎಂಬುದು ಎಲ್ಲರಿಗೂ ಗೊತ್ತಿದೆ. ನೆರೆಯ ಕೇರಳ ಸೇರಿದಂತೆ ಬೇರೆ ರಾಜ್ಯಗಳ ಜನರನ್ನು ಎನ್‌ಆರ್ ಕ್ಷೇತ್ರದ ಮತದಾರರ ಪಟ್ಟಿಗೆ ಸೇರಿಸುತ್ತಾ ಬಂದಿದ್ದಾರೆ. ಅದು ಈಗಲೂ ಮುಂದುವರಿಯುವ ಸಾಧ್ಯತೆ ಇದೆ. ಎನ್‌ಆರ್ ಕ್ಷೇತ್ರದಲ್ಲಿ ಎಸ್‌ಐಆರ್ ಪ್ರಕ್ರಿಯೆ ಪ್ರಾಮಾಣಿಕವಾಗಿ ನಡೆಯುವ ಸಾಧ್ಯತೆ ಕಡಿಮೆ ಎಂದರು.

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ – ಯುವಸಮೂಹಕ್ಕೆ ಅತಿದೊಡ್ಡ ಗೆಲುವು, ಮಂಡಿಯೂರಿದ ಕೇಂದ್ರ ನೀರಿಗಾಗಿ ಹಾಹಾಕಾರ ಕಾಂಗ್ರೆಸ್ ಜಿಲ್ಲಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ಪ್ರಾರಂಭಬರ ಸಂಕಷ್ಟದಲ್ಲಿ ರೈತರಿಗೆ ಸಾಲಮನ್ನಾ ಸೇರಿ ತುರ್ತು ಪರಿಹಾರ ಘೋಷಿಸಲಿ: ಡಾ. ವೀರಣ್ಣ ಚರಂತಿಮಠಉದ್ಯೋಗ ಖಾತ್ರಿಯಲ್ಲಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಫಲವೃಕ್ಷೋದ್ಯಾನ: ಈಶ್ವರ ಖಂಡ್ರೆ3 ಲಕ್ಷದವರೆಗೆ ಆದಾಯ ಮಿತಿ ಹೆಚ್ಚಳ – ಸಿಎಂ ಜೊತೆ ಚರ್ಚಿಸಿ ತೀರ್ಮಾನ ಎಂದ ಸಚಿವ ಮುನಿಯಪ್ಪʻನೀಟ್ ಪರೀಕ್ಷೆಗೂ ಮುಲ್ಲಾಗಳಿಗೂ ಏನ್ ಸಂಬಂಧ?ʼ ಎಂದಿದ್ದ ಸಿ.ಟಿ.ರವಿ ವಿರುದ್ಧ FIRಕಾಂಗ್ರೆಸ್ ದೇಶದಲ್ಲಿ ಅರಾಜಕತೆ ಸೃಷ್ಟಿಸಲು ಮುಂದಾಗಿದೆ: ಯದುವೀರ್ ಒಡೆಯರ್ಬೆಂಗಳೂರು ಸ್ವಚ್ಛತೆಗೆ ಹೊಸ ಹೆಜ್ಜೆ; 100 ಬ್ಲಾಕ್‌ ಸ್ಪಾಟ್‌ಗಳ ಸ್ವಚ್ಛತಾ ಅಭಿಯಾನ ಪೂರ್ಣಹಾರಂಗಿ ಡ್ಯಾಮ್‌ನಿಂದ 5,000 ಕ್ಯೂಸೆಕ್ ನೀರು ಬಿಡುಗಡೆ ಸಾಧ್ಯತೆ – ಕಾವೇರಿ ನದಿಗೆ ಇಳಿಯದಂತೆ ಎಚ್ಚರಿಕೆ