LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

PSI ಎಂದು ನಂಬಿಸಿ ಕೋಟಿಗಟ್ಟಲೇ ಹಣ ವಂಚನೆ; ನಕಲಿ ಲೇಡಿ ಪೊಲೀಸ್‌ ಅಂದರ್‌

Advertisement

ಚಿಕ್ಕಮಗಳೂರು: ಪೊಲೀಸ್ ಸಬ್‌ಇನ್‌ಸ್ಪೆಕ್ಟರ್  ಎಂದು ನಂಬಿಸಿ ಸಾರ್ವಜನಿಕರಿಗೆ ಹಣ ಹಾಗೂ ಚಿನ್ನಾಭರಣ ವಂಚಿಸುತ್ತಿದ್ದ ಆರೋಪದ ಮೇಲೆ ನಕಲಿ ಲೇಡಿ ಪಿಎಸ್‌ಐಯೊಬ್ಬಳನ್ನು ಚಿಕ್ಕಮಗಳೂರು ಪೊಲೀಸರು ಬಂಧಿಸಿದ್ದಾರೆ.

ರಾಮನಗರ ಮೂಲದ ನಿವೇದಿತಾ ಗೌಡ ಬಂಧಿತ ಮಹಿಳೆ. ಚಿಕ್ಕಮಗಳೂರು ನಗರದಲ್ಲಿ ಕೆಫೆ ನಡೆಸುತ್ತಿದ್ದ ನಿವೇದಿತಾ, ಕೆಫೆಗೆ ಬರುತ್ತಿದ್ದ ಯುವಕರು ಹಾಗೂ ಮಹಿಳೆಯರನ್ನು ಗುರಿಯಾಗಿಸಿಕೊಂಡು ಪರಿಚಯ ಬೆಳೆಸುತ್ತಿದ್ದಳು. ತಾನು ಬೆಂಗಳೂರಿನ ರಾಜಗೋಪಾಲನಗರ ಪೊಲೀಸ್ ಠಾಣೆಯ ಪಿಎಸ್‌ಐ ಎಂದು ಪರಿಚಯಿಸಿಕೊಂಡು, ಸದ್ಯ ರಜೆಯ ಮೇಲೆ ಚಿಕ್ಕಮಗಳೂರಿಗೆ ಬಂದಿರುವುದಾಗಿ ಹೇಳುತ್ತಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸ್ ಅಧಿಕಾರಿಯೆಂದು ಜನರು ನಂಬುವಂತೆ ಮಾಡಲು ಪೊಲೀಸ್ ಅಧಿಕಾರಿಗಳ ರೀತಿಯ ಹೇರ್‌ಕಟ್ ಹಾಗೂ ಉಡುಪು ಧರಿಸುತ್ತಿದ್ದಳು ಎನ್ನಲಾಗಿದೆ. ಪರಿಚಯವಾದ ಬಳಿಕ ಓಡಾಟದ ನೆಪದಲ್ಲಿ ಐಷಾರಾಮಿ ಕಾರುಗಳನ್ನು ಪಡೆದುಕೊಂಡು, ಅವುಗಳನ್ನು ಬೇರೆಯವರಿಗೆ ಮಾರಾಟ ಮಾಡಿ ವಂಚಿಸುತ್ತಿದ್ದಳು ಎಂದು ಆರೋಪಿಸಲಾಗಿದೆ.

ಪೊಲೀಸರ ತನಿಖೆಯ ವೇಳೆ ನಿವೇದಿತಾ 25ಕ್ಕೂ ಹೆಚ್ಚು ಮಂದಿಗೆ ಕೋಟ್ಯಂತರ ರೂಪಾಯಿ ಹಣ ಹಾಗೂ ಚಿನ್ನಾಭರಣ ವಂಚಿಸಿರುವುದು ಬೆಳಕಿಗೆ ಬಂದಿದೆ. ಮೋಸ ಹೋದ 20ಕ್ಕೂ ಹೆಚ್ಚು ಮಂದಿ ನೀಡಿದ ದೂರಿನ ಆಧಾರದ ಮೇಲೆ ಬಸವನಹಳ್ಳಿ ಹಾಗೂ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದೆ.

ಈ ದೂರಿನ ಬೆನ್ನಲ್ಲೇ ಕಾರ್ಯಾಚರಣೆ ನಡೆಸಿದ ಚಿಕ್ಕಮಗಳೂರು ನಗರ ಠಾಣೆ ಪೊಲೀಸರು ನಿವೇದಿತಾಳನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ವಿಚಾರಣೆ ವೇಳೆ ಆಕೆಯ ಮೊಬೈಲ್‌ನಲ್ಲಿ ಬೇರೆ ಬೇರೆ ಹೆಸರುಗಳಿರುವ ನಕಲಿ ಆಧಾರ್ ಕಾರ್ಡ್‌ಗಳು ಪತ್ತೆಯಾಗಿವೆ.

ನಿವೇದಿತಾ ಕರ್ನಾಟಕದ ಹಲವು ಜಿಲ್ಲೆಗಳಲ್ಲೂ ಇದೇ ರೀತಿಯಲ್ಲಿ ಪೊಲೀಸ್ ಅಧಿಕಾರಿ ಎಂದು ಪರಿಚಯಿಸಿಕೊಂಡು ವಂಚನೆ ಮಾಡಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಈ ಕುರಿತು ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ವಂಚಿಸಿದ ಹಣ ಹಾಗೂ ಚಿನ್ನಾಭರಣವನ್ನು ತನ್ನ ಪ್ರಿಯಕರ ದೇವ್‌ಗೆ ನೀಡಿರುವುದಾಗಿ ನಿವೇದಿತಾ ಪೊಲೀಸರ ವಿಚಾರಣೆ ವೇಳೆ ಹೇಳಿದ್ದಾಳೆ. ಇದೀಗ ಆಕೆಯ ಪ್ರಿಯಕರನ ಬಂಧನಕ್ಕಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಸ್ ಟಿಕೆಟ್ ದರ ಏರಿಕೆ ಫಿಕ್ಸ್ – ಬೈರತಿ ಸುರೇಶ್ ಸುಳಿವುPSI ಎಂದು ನಂಬಿಸಿ ಕೋಟಿಗಟ್ಟಲೇ ಹಣ ವಂಚನೆ; ನಕಲಿ ಲೇಡಿ ಪೊಲೀಸ್‌ ಅಂದರ್‌ಗದಗ KRIDL AEE ಪರ್ವೇಜ್ ಭೋಪಾಲ್ ರೈಲ್ವೆ ನಿಲ್ದಾಣದ ಸಿಸಿಟಿವಿಯಲ್ಲಿ ಪತ್ತೆಬಸವನ ಬಾಗೇವಾಡಿಯಲ್ಲಿ 3.5 ತೀವ್ರತೆಯ ಭೂಕಂಪನಮಂಗಳೂರಿನ MRPLನಲ್ಲಿ ಭಾರಿ ಸ್ಫೋಟದ ಶಬ್ದಸೌಜನ್ಯ ಕೇಸ್: SITಯಿಂದ ನನ್ನ ಕೈಬಿಡಿ ಅಂತ ಎಎಸ್‌ಪಿ ಪತ್ರಸೌಜನ್ಯ ಕೇಸ್: SITಯಿಂದ ನನ್ನ ಕೈಬಿಡಿ ಅಂತ ಎಎಸ್‌ಪಿ ಪತ್ರಶಿಕಾರಿಪುರದಿಂದ ‘ಭಾರತ್ ಜೋಡೋ 2.0’ ಪಾದಯಾತ್ರೆಗೆ ಚಾಲನೆ; 84 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಸಂಘಟನೆಗೆ ಪ್ಲ್ಯಾನ್ಕೊಲೆಗೂ ಮುನ್ನ ಬೆಂಗಳೂರಿನಲ್ಲಿ ಕೇತನ್‌ ಕೈಕಾಲು ಮುರಿಸೋಕೆ ಪ್ಲ್ಯಾನ್ – ಚಾರ್ಜ್‌ಶೀಟ್‌ನಲ್ಲಿ ಸತ್ಯ ಬಯಲುಉದ್ಯೋಗ ಖಾತ್ರಿ ನಕಲಿ ಜಿಪಿಎಸ್ ಫೋಟೋ – ತನಿಖೆಗೆ ಈಶ್ವರ ಖಂಡ್ರೆ ಸೂಚನೆ