ಬೆಂಗಳೂರು: ಹೆಚ್‌ಎಎಲ್ ಪೊಲೀಸ್ ಠಾಣೆಯ ಸಮೀಪ GBA ಕಾಮಗಾರಿ ವೇಳೆ ಗ್ಯಾಸ್ ಪೈಪ್‌ಗೆ ಹಾನಿಯಾಗಿ ಗ್ಯಾಸ್ ಸೋರಿಯಾಗುತ್ತಿದೆ.
ಜಿಬಿಎ ಕಾಮಗಾರಿ ವೇಳೆ ಮನೆಗಳಿಗೆ ಸಂಪರ್ಕ ನೀಡುವ ಭೂಗತ ಗೇಲ್ ಗ್ಯಾಸ್ ಪೈಪ್‌ಗೆ ಡ್ಯಾಮೆಜ್ ಉಂಟಾಗಿದೆ. ಇದರಿಂದ 8 ಅಡಿಯಷ್ಟು ಎತ್ತರಕ್ಕೆ ಗ್ಯಾಸ್ ಚಿಮ್ಮುತ್ತಿದೆ. ಗ್ಯಾಸ್ ನಿಯಂತ್ರಿಸಲು ಅಗ್ನಿಶಾಮಕ ಸಿಬ್ಬಂದಿ ಹರಸಾಹಸಪಡುತ್ತಿದ್ದಾರೆ.
ಸ್ಥಳದಲ್ಲಿ ಆತಂಕದ ವಾತವರಣ ನಿರ್ಮಾಣವಾಗಿದೆ. ಗ್ಯಾಸ್ ಸೋರಿಕೆಯ ಜಾಗದಲ್ಲಿ ಬ್ಯಾರಿಕೇಡ್ ಅಳವಡಿಕೆ ಮಾಡಲಾಗಿದೆ. ದೂರದಲ್ಲಿಯೇ ವಾಹನಗಳು ಸಂಚರಿಸುತ್ತಿವೆ.




