LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬಸ್ ಸೌಲಭ್ಯಕ್ಕೆ ಆಗ್ರಹ| ಹುಬ್ಬಳ್ಳಿ-ವಿಜಯಪುರ ಹೆದ್ದಾರಿ ತಡೆದು ಯಡಹಳ್ಳಿ ವಿದ್ಯಾರ್ಥಿಗಳ ಆಕ್ರೋಶ

Advertisement
Advertisement

ಬಾಗಲಕೋಟೆ: ತಮ್ಮ ಗ್ರಾಮಕ್ಕೆ ಸಮರ್ಪಕ ಸಾರಿಗೆ ಬಸ್ (Bus) ವ್ಯವಸ್ಥೆ ಕಲ್ಪಿಸುತ್ತಿಲ್ಲ ಎಂದು ಆರೋಪಿಸಿ ಯಡಹಳ್ಳಿ(Yadahalli) ಗ್ರಾಮದ ವಿದ್ಯಾರ್ಥಿಗಳುಹಾಗೂ ಸ್ಥಳೀಯರು ಹುಬ್ಬಳ್ಳಿ-ವಿಜಯಪುರ ರಾಷ್ಟ್ರೀಯ ಹೆದ್ದಾರಿ ತಡೆದು ಉಗ್ರ ಪ್ರತಿಭಟನೆ (Student) ನಡೆಸಿದರು.

ಯಡಹಳ್ಳಿ ಗ್ರಾಮದಿಂದ ಪ್ರತಿನಿತ್ಯ ಶಾಲೆ ಹಾಗೂ ಕಾಲೇಜುಗಳಿಗೆ ತೆರಳುವ ನೂರಾರು ವಿದ್ಯಾರ್ಥಿಗಳಿಗೆ ಸೂಕ್ತ ಸಮಯಕ್ಕೆ ಬಸ್‌ಗಳ ವ್ಯವಸ್ಥೆ ಇಲ್ಲದೆ ತೀವ್ರ ತೊಂದರೆಯಾಗುತ್ತಿದೆ. ಸಾರಿಗೆ ಬಸ್‌ಗಳ ಅಭಾವದಿಂದಾಗಿ ಸಮಯಕ್ಕೆ ಸರಿಯಾಗಿ ತರಗತಿಗಳಿಗೆ ಹಾಜರಾಗಲು ಸಾಧ್ಯವಾಗುತ್ತಿಲ್ಲ ಎಂದು ವಿದ್ಯಾರ್ಥಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಗ್ರಾಮಕ್ಕೆ ಹೆಚ್ಚುವರಿ ಬಸ್‌ಗಳನ್ನು ಓಡಿಸುವಂತೆ ಮತ್ತು ನಿಗದಿತ ಸಮಯಕ್ಕೆ ಸಾರಿಗೆ ವ್ಯವಸ್ಥೆ ಕಲ್ಪಿಸುವಂತೆ ಸಂಬಂಧಪಟ್ಟ ಸಾರಿಗೆ ಇಲಾಖೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳಿಗೆ ಹಲವು ಬಾರಿ ಮನವಿ ಸಲ್ಲಿಸಲಾಗಿತ್ತು. ಆದರೆ ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ರೋಸಿಹೋದ ಗ್ರಾಮಸ್ಥರು ಹಾಗೂ ವಿದ್ಯಾರ್ಥಿಗಳು ಅಂತಿಮವಾಗಿ ರಸ್ತೆ ತಡೆ ಚಳವಳಿಗೆ ಮುಂದಾಗಿದ್ದಾರೆ. 

ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ದಿಢೀರನೆ ಹೆದ್ದಾರಿಗೆ ಇಳಿದು ವಾಹನ ಸಂಚಾರ ತಡೆದಿದ್ದರಿಂದ ಹುಬ್ಬಳ್ಳಿ-ವಿಜಯಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾರಿಗೆ ಸಂಪೂರ್ಣ ಸ್ತಬ್ಧಗೊಂಡಿತು. ಸಾಲು ಸಾಲಾಗಿ ನಿಂತ ವಾಹನಗಳಿಂದಾಗಿ ಕಿಲೋಮೀಟರ್‌ಗಟ್ಟಲೆ ಟ್ರಾಫಿಕ್ ಜಾಮ್ ಉಂಟಾಗಿ, ಬಿಸಿಲಿನಲ್ಲಿ ವಾಹನ ಸವಾರರು ಹಾಗೂ ಪ್ರಯಾಣಿಕರು ಪರದಾಡುವಂತಾಯಿತು.

ಸ್ಥಳಕ್ಕೆ ಸಾರಿಗೆ ಇಲಾಖೆಯ ಹಿರಿಯ ಅಧಿಕಾರಿಗಳು ಹಾಗೂ ಪೊಲೀಸರು ಭೇಟಿ ನೀಡಿ, ತಕ್ಷಣವೇ ಗ್ರಾಮಕ್ಕೆ ಸಮರ್ಪಕ ಬಸ್ ವ್ಯವಸ್ಥೆ ಮಾಡಲಾಗುವುದು ಎಂದು ಭರವಸೆ ನೀಡಿದ ಬಳಿಕ ಪ್ರತಿಭಟನೆಯನ್ನು ಹಿಂಪಡೆಯಲಾಯಿತು.

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪಾಕಿಸ್ತಾನಿಯರೆಲ್ಲರೂ ಶತ್ರುಗಳಲ್ಲ; ಮೋಹನ್ ಭಾಗವತ್ ಹೇಳಿಕೆಗೆ RSS-ಪಾಕ್ ಲಿಂಕ್ ಬಗ್ಗೆ ತನಿಖೆಯಾಗಲಿ ಎಂದ ಹರಿಪ್ರಸಾದ್ಆಹಾರ ಸರಬರಾಜು ನಿಗಮದ ಗೋದಾಮಿನಲ್ಲೇ ವಂಚನೆ; ಅಧಿಕಾರಿ-ಸಿಬ್ಬಂದಿಯಿಂದ 86 ಲಕ್ಷ ಮೌಲ್ಯದ ಅಕ್ಕಿ, ಗೋಧಿ, ರಾಗಿ ಲೂಟಿರೈತರ ಹೊಟ್ಟೆ ಮೇಲೆ ಹೊಡೆದು ಟೌನ್‌ಶಿಪ್ ಮಾಡಬೇಡಿ – ಸರ್ಕಾರದ ವಿರುದ್ಧ ಹೆಚ್‌ಡಿಡಿ ವಾಗ್ದಾಳಿರಾಮ ಮಂದಿರದಲ್ಲಿ ಲೂಟಿ ಹೊಡೆದವರು ನಾಗೇಂದ್ರ ಬಗ್ಗೆ ಮಾತಾಡ್ತಾರೆ: ಸಂತೋಷ್ ಲಾಡ್ ಕಿಡಿಮಾಜಿ ಸಚಿವ ಬಿ. ನಾಗೇಂದ್ರಗೆ ಹೈಕೋರ್ಟ್‌ನಿಂದ ಬಿಗ್ ರಿಲೀಫ್ಬೇರುಸಹಿತ ಮಾದಕ ವಸ್ತು ಜಾಲ ಕಿತ್ತೊಗೆಯಲು ಪೊಲೀಸರ ಸಮರ – 55.8 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ, 39 ಮಂದಿ ಅರೆಸ್ಟ್ ದೇಶದಲ್ಲೇ ಫಸ್ಟ್ – ಬೆಂಗಳೂರು ಈಗ ಟಾಪ್-1 ಟ್ರಾಫಿಕ್ ಸಿಟಿಕರ್ನಾಟಕದಿಂದ 4.5 TMC ಕಾವೇರಿ ನೀರು ಬಿಡುಗಡೆಗೆ ಆಗ್ರಹ: ಗುರುವಾರ ಸುಪ್ರೀಂನಲ್ಲಿ ತಮಿಳುನಾಡು ಅರ್ಜಿ ವಿಚಾರಣೆರೈತರ ಜಮೀನು ಕಬಳಿಸಲು ಪೆನ್ನು, ಪೇಪರ್ ಬಳಸ್ತಿದ್ದೀರಾ?: ಸಿಎಂ ವಿರುದ್ಧ ನಿಖಿಲ್ ವಾಗ್ದಾಳಿಬಸ್ ಸೌಲಭ್ಯಕ್ಕೆ ಆಗ್ರಹ| ಹುಬ್ಬಳ್ಳಿ-ವಿಜಯಪುರ ಹೆದ್ದಾರಿ ತಡೆದು ಯಡಹಳ್ಳಿ ವಿದ್ಯಾರ್ಥಿಗಳ ಆಕ್ರೋಶ