ಬೆಂಗಳೂರು: ಆರ್‌ಎಸ್‌ಎಸ್ ವಿರುದ್ಧ ಅವಹೇಳನಕಾರಿ ಪೋಸ್ಟ್ ಮಾಡಿದ ಆರೋಪದಡಿ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಮೊಹಮ್ಮದ್ ಹ್ಯಾರಿಸ್ ನಲಪಾಡ್‌ಗೆ ಕೋರ್ಟ್ ಸಮನ್ಸ್ ನೀಡಿದೆ.
ಬೆಂಗಳೂರಿನ 42ನೇ ಎಸಿಜೆಎಂ ಕೋರ್ಟ್ ಜುಲೈ 21 ರಂದು ಖುದ್ದಾಗಿ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿ ಆದೇಶಿಸಿದೆ.
ಆದ್ರೆ ಸಚಿವ ಪ್ರಿಯಾಂಕ್ ಖರ್ಗೆ ಅವರ ವಿರುದ್ಧ ಕ್ರಿಮಿನಲ್ ಮಾನನಷ್ಟ ಕೇಸ್ ವಿಚಾರಣೆಗೆ ನ್ಯಾಯಾಲಯ ಅಂಗೀಕರಿಸಿಲ್ಲ. 2025 ಅ.14 ರಂದು ಆರ್‌ಎಸ್‌ಎಸ್ ಸದಸ್ಯರ ವಿರುದ್ಧ ಟ್ವೀಟ್ ಮಾಡಿದ್ದ ಪ್ರಿಯಾಂಕ್ ಖರ್ಗೆ ಅವರ ವಿರುದ್ದ ಆರ್‌ಎಸ್‌ಎಸ್ ಕಾರ್ಯಕರ್ತ ಎ. ತೇಜಸ್ ಖಾಸಗಿ ದೂರು ದಾಖಲಿಸಿದ್ದರು.
ಇನ್ನೂ ಯೂಟ್ಯೂಬ್ ಚಾನಲ್ ವೊಂದರಲ್ಲಿ ಮೊಹಮ್ಮದ್ ಹ್ಯಾರಿಸ್ ನಲಪಾಡ್ ಅವಹೇಳನಕಾರಿ ಹೇಳಿಕೆ ನೀಡಿದ್ದರು. ಅವಹೇಳನಕಾರಿ ಹೇಳಿಕೆಯಿಂದ ಸಂಘದ ಘನತೆಗೆ ಧಕ್ಕೆಯಾಗಿದೆ ಎಂದು ತೇಜಸ್ ದೂರಿನಲ್ಲಿ ಉಲ್ಲೇಖಿಸಿದ್ರು.



