LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಶ್ರೀರಾಮನ ಕುರಿತು ಅವಹೇಳನಕಾರಿ ಹೇಳಿಕೆ: ಪ್ರೊ. ಭಗವಾನ್ ವಿರುದ್ಧ ಶಿವಸೇನೆ ದೂರು

ಧಾರವಾಡ: ಶ್ರೀರಾಮ ಹಾಗೂ ಹಿಂದೂ ಧರ್ಮಗ್ರಂಥಗಳ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದಡಿ ಪ್ರೊ. ಕೆ.ಎಸ್. ಭಗವಾನ್ ವಿರುದ್ಧ ಧಾರವಾಡ  ಶಹರ ಪೊಲೀಸ್ ಠಾಣೆಗೆ ಶಿವಸೇನೆ (Shiv Sena) ಕಾರ್ಯಕರ್ತರು ದೂರು ನೀಡಿದ್ದಾರೆ.

ಪ್ರೊ. ಭಗವಾನ್ ವಿರುದ್ಧ ಪ್ರಕರಣ ದಾಖಲಿಸಿ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಶಿವಸೇನೆ ಮುಖಂಡರು ಆಗ್ರಹಿಸಿದ್ದಾರೆ.

ಇತ್ತೀಚೆಗೆ ದಾವಣಗೆರೆ ಜಿಲ್ಲೆಯ ಹರಿಹರದಲ್ಲಿರುವ ಬಿ. ಕೃಷ್ಣಪ್ಪ ಮೈತ್ರಿವನದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಆಯೋಜಿಸಿದ್ದ ಪ್ರೊ. ಬಿ. ಕೃಷ್ಣಪ್ಪ ಜಯಂತಿ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಪ್ರೊ. ಭಗವಾನ್ ಭಾಗವಹಿಸಿದ್ದರು.

ಈ ವೇಳೆ ಸಾರ್ವಜನಿಕ ವೇದಿಕೆಯಲ್ಲಿ ಹಿಂದೂ ಧರ್ಮ, ಪ್ರಭು ಶ್ರೀರಾಮಚಂದ್ರ ಹಾಗೂ ಹಿಂದೂ ಧರ್ಮಗ್ರಂಥಗಳ ಕುರಿತು ವಿವಾದಾತ್ಮಕ ಹೇಳಿಕೆಗಳನ್ನು ನೀಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಕೊಟ್ಯಂತರ ಹಿಂದೂಗಳ ಶ್ರದ್ಧಾಕೇಂದ್ರವಾಗಿರುವ ಶ್ರೀರಾಮನ ಕುರಿತು ಹಾಗೂ ಹಿಂದೂ ಧರ್ಮಗ್ರಂಥಗಳ ಬಗ್ಗೆ ನೀಡಿರುವ ಹೇಳಿಕೆಗಳು ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟುಮಾಡಿವೆ ಎಂದು ಶಿವಸೇನೆ ಆರೋಪಿಸಿದೆ. ಹೀಗಾಗಿ ಪ್ರೊ. ಕೆ.ಎಸ್. ಭಗವಾನ್ ವಿರುದ್ಧ ಪ್ರಕರಣ ದಾಖಲಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಶಿವಸೇನೆ ಕಾರ್ಯಕರ್ತರು ಧಾರವಾಡ ಶಹರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. 

Advertisement

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪೋಕ್ಸೊ ಕೇಸ್| ವಚನಾನಂದ ಸ್ವಾಮೀಜಿ ವಿರುದ್ಧ 410 ಪುಟಗಳ ಚಾರ್ಜ್‌ಶೀಟ್‌ ಸಲ್ಲಿಕೆಧರ್ಮಸ್ಥಳ ಕೇಸಲ್ಲಿ ಪ್ರಕಾಶ್‌ ರಾಜ್‌ ಹೆಸರು ತಳುಕು – ಹೆಸರು ಪ್ರಸ್ತಾಪ ಆದ ಕೂಡಲೇ ಕ್ರಿಮಿನಲ್ ಅಲ್ಲ: ಪ್ರಿಯಾಂಕ್‌ ಖರ್ಗೆಪರಿಹಾರ ನೀಡಲು KKRTC ಹಿಂದೇಟು: ಕೋರ್ಟ್‌ ಆದೇಶ ಉಲ್ಲಂಘಿಸಿದ್ದಕ್ಕೆ ಎರಡು ಸಾರಿಗೆ ಬಸ್‌ ಸೀಜ್‌ಪರಿಷ್ಕರಣೆ ಹೆಸರಲ್ಲಿ ಗ್ಯಾರಂಟಿ ಯೋಜನೆ ರದ್ದು ಮಾಡುವ ಹುನ್ನಾರ: ಸರ್ಕಾರದ ವಿರುದ್ಧ ಶ್ರೀರಾಮುಲು ಕಿಡಿಮಾವಿನ ಹಣ್ಣು ಸೇವಿಸಿ ಅಸ್ವಸ್ಥ: ಬೀದರ್ ಮೂಲದ ಇಬ್ಬರು ಸಹೋದರಿಯರು ಅನುಮಾನಾಸ್ಪದ ಸಾವುಶ್ರೀರಾಮನ ಕುರಿತು ಅವಹೇಳನಕಾರಿ ಹೇಳಿಕೆ: ಪ್ರೊ. ಭಗವಾನ್ ವಿರುದ್ಧ ಶಿವಸೇನೆ ದೂರುಕೂಲ್ ಡ್ರಿಂಕ್ಸ್ ಕುಡಿದು ಯುವಕ ಸಾವುಪ್ರಸಕ್ತ ಶೈಕ್ಷಣಿಕ ವರ್ಷದಿಂದ ವೈದ್ಯಕೀಯ ಕೋರ್ಸ್‌ಗಳ ಶುಲ್ಕ ಹೆಚ್ಚಳ ಇಲ್ಲ: ಶರಣಪ್ರಕಾಶ್‌ ಪಾಟೀಲ್‌ಪ್ರಸಕ್ತ ಶೈಕ್ಷಣಿಕ ವರ್ಷದಿಂದ ವೈದ್ಯಕೀಯ ಕೋರ್ಸ್‌ಗಳ ಶುಲ್ಕ ಹೆಚ್ಚಳ ಇಲ್ಲ: ಶರಣಪ್ರಕಾಶ್‌ ಪಾಟೀಲ್‌ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ಸಿಎಂ ವಿಜಯ್‌