LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಅನೈತಿಕ ಸಂಬಂಧಕ್ಕೆ ಅಡ್ಡಿ – ಟಾಯ್ಲೆಟ್ ಕ್ಲೀನರ್ ಇಂಜೆಕ್ಟ್ ಮಾಡಿ ಗಂಡನ ಕೊಂದ ನರ್ಸ್

Advertisement

ಹೈದರಾಬಾದ್: ಪ್ರಿಯಕರನೊಂದಿಗಿನ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನನ್ನು ಟಾಯ್ಲೆಟ್ ಕ್ಲೀನರ್  ಇಂಜೆಕ್ಟ್ ಮಾಡಿ ನರ್ಸ್ ಆಗಿರುವ ಪತ್ನಿಯೇ  ಕೊಲೆ ಮಾಡಿರುವ ಘಟನೆ ತೆಲಂಗಾಣದಲ್ಲಿ ಬೆಳಕಿಗೆ ಬಂದಿದೆ.

ನಿಜಾಮಾಬಾದ್  ಜಿಲ್ಲೆಯ ನ್ಯಾಲ್ಕಲ್ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಪ್ರಶಾಂತ್ (35) ಹತ್ಯೆಯಾದ ಪತಿ. ಪ್ರಶಾಂತ್ ಇತ್ತೀಚೆಗಷ್ಟೇ ಗಲ್ಫ್‌ನಿಂದ ಊರಿಗೆ ಮರಳಿದ್ದ. ಈ ವೇಳೆ ಪತ್ನಿ ಸಂಧ್ಯಾ ಮತ್ತು ಆಕೆಯ ಪ್ರಿಯಕರ ಅನಿಲ್ ನಡುವಿನ ಸಂಬಂಧಕ್ಕೆ ಆತ ಅಡ್ಡಿಯಾಗಿದ್ದ ಹಿನ್ನೆಲೆ ಕೊಲೆ ಮಾಡಲಾಗಿದೆ ಎಂದು ತನಿಖೆಯಲ್ಲಿ ತಿಳಿದುಬಂದಿದೆ. 

ಮೊದಲಿಗೆ ಗಂಡನನ್ನು ಟೆರೆಸ್‌ನಿಂದ ತಳ್ಳಿದರೂ ಆತ ಅದೃಷ್ಟವಶಾತ್ ಬದುಕುಳಿದಿದ್ದ. ಆದರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಕ್ಯಾನುಲಾ ಮೂಲಕ ಟಾಯ್ಲೆಟ್ ಕ್ಲೀನರ್ ಹಾಗೂ ಇನ್ನಿತರ ರಾಸಾಯನಿಕಗಳನ್ನು ದೇಹಕ್ಕೆ ಸೇರಿಸಿ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ಆರೋಪಿಸಿದ್ದಾರೆ. 

ಪೊಲೀಸರ ಪ್ರಕಾರ, ಸಂಧ್ಯಾ ತನ್ನ ಪರಿಚಯದ ವೆಂಕಟ ಸಾಯಿ ಅಲಿಯಾಸ್ ಬಂಟಿಗೆ ಪ್ರಶಾಂತ್ ಜೊತೆ ಸ್ನೇಹ ಬೆಳೆಸಿ ಮದ್ಯಪಾನ ಮಾಡಿಸುವಂತೆ ಹೇಳಿದ್ದಳು. ಜೂನ್ 29ರಂದು ಇಬ್ಬರೂ ಮದ್ಯ ಸೇವಿಸಿದ ಬಳಿಕ ಕಟ್ಟಡದ ಟೆರೆಸ್‌ಗೆ ತೆರಳಿದ್ದರು. ಅಲ್ಲಿ ಸಂಧ್ಯಾ ಹಾಗೂ ಬಂಟಿ ಸೇರಿ ಪ್ರಶಾಂತ್‌ನನ್ನು ಟೆರೆಸ್‌ನಿಂದ ಕೆಳಗೆ ತಳ್ಳಿದ್ದಾರೆ ಎಂದು ಆರೋಪಿಸಲಾಗಿದೆ. 

ಗಂಭೀರ ಗಾಯಗೊಂಡಿದ್ದ ಪ್ರಶಾಂತ್‌ನನ್ನು ಮೊದಲು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ, ನಂತರ ಹೆಚ್ಚಿನ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಆದರೆ ಮೊದಲ ಸಂಚು ವಿಫಲವಾದ ಬಳಿಕ ಈ ರೀತಿಯಾಗಿ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. 

ನರ್ಸ್ ಆಗಿರುವ ಸಂಧ್ಯಾ ತನ್ನ ವೈದ್ಯಕೀಯ ಜ್ಞಾನವನ್ನು ಬಳಸಿಕೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪ್ರಶಾಂತ್‌ನ ಕ್ಯಾನುಲಾ ಮೂಲಕ ಟಾಯ್ಲೆಟ್ ಕ್ಲೀನರ್ ಹಾಗೂ ಇನ್ನಿತರ ರಾಸಾಯನಿಕಗಳನ್ನು ಇಂಜೆಕ್ಷನ್ ಮೂಲಕ ದೇಹಕ್ಕೆ ಸೇರಿಸಿದ್ದಾಳೆ. ಇದರಿಂದ ಪ್ರಶಾಂತ್ ಮೃತಪಟ್ಟಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. 

ಪ್ರಶಾಂತ್ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಆತನ ತಾಯಿ ಜುಲೈ 1ರಂದು ಪೊಲೀಸರಿಗೆ ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ತನಿಖೆ ಆರಂಭಿಸಿದ ಪೊಲೀಸರು ಪ್ರಕರಣದ ಹಿಂದಿನ ಸಂಚನ್ನು ಬಯಲಿಗೆಳೆದಿದ್ದಾರೆ. 

ವಿಚಾರಣೆ ವೇಳೆ ವೆಂಕಟ ಸಾಯಿ ಅಲಿಯಾಸ್ ಬಂಟಿ ತನ್ನ ಪಾತ್ರವನ್ನು ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ನಮ್ಮಿಬ್ಬರ ನಡುವೆ ಜಗಳ ನಡೆಯಿತು. ನಂತರ ಅವನ ಪತ್ನಿ ಅಲ್ಲಿಗೆ ಬಂದಳು. ಇಬ್ಬರೂ ಸೇರಿ ಅವನನ್ನು ಟೆರೆಸ್‌ನಿಂದ ತಳ್ಳಿದ್ದೇವೆ ಎಂದು ಆತ ಹೇಳಿಕೆ ನೀಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಇದು ಸಂಧ್ಯಾಳ ಯೋಜನೆಯಾಗಿತ್ತು. ಆಕೆಯೇ ಹಣ ನೀಡಿದ್ದಳು ಎಂದು ಸಹ ಆತ ವಿಚಾರಣೆ ವೇಳೆ ಹೇಳಿರುವುದಾಗಿ ಪೊಲೀಸರು ತಿಳಿಸಿದ್ದಾರೆ. 

ಜುಲೈ 4ರಂದು ಪೊಲೀಸರು ಸಂಧ್ಯಾ, ಆಕೆಯ ಪ್ರಿಯಕರ ಅನಿಲ್ ಹಾಗೂ ವೆಂಕಟ ಸಾಯಿ ಅಲಿಯಾಸ್ ಬಂಟಿಯನ್ನು ಬಂಧಿಸಿದ್ದಾರೆ. ಮೂವರ ವಿರುದ್ಧ ಕೊಲೆ ಸೇರಿದಂತೆ ವಿವಿಧ ಆರೋಪಗಳಡಿ ಪ್ರಕರಣ ದಾಖಲಿಸಲಾಗಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಿದ ಬಳಿಕ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಪ್ರಕರಣದ ಕುರಿತು ಪೊಲೀಸರು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುಂಬೈನಲ್ಲಿ ಮಳೆಯ ರೌದ್ರನರ್ತನ; ಒಟ್ಟು 10 ಸಾವು; ಇಂದು ಕೂಡ 43 ರೈಲು ಸಂಚಾರ ರದ್ದುಹಿಟ್ & ರನ್‌ಗೆ 28 ವರ್ಷದ ಯುವಕ ಬಲಿ; ಬೈಕ್‌ಗೆ ಡಿಕ್ಕಿ ಹೊಡೆದು ಚಾಲಕ ಎಸ್ಕೇಪ್ಕೊಡಗಿನಲ್ಲಿ ಬಿರುಸು ಪಡೆದ ಮಳೆ – ಜಲಾವೃತ ಸೇತುವೆಯಿಂದ ಗ್ರಾಮಕ್ಕೆ ಸಂಪರ್ಕ ಕಡಿತಹುಡುಗಿಯರನ್ನ ಇಟ್ಕೊಂಡು ದಂಧೆ ನಡೆಸ್ತಿದ್ದ ನಟೋರಿಯಸ್ ಪಿಂಪ್ ಬಂಧನʻಜೀವನ ಸಾಕಾಗಿದೆʼ – ಗೆಳೆಯನಿಗೆ ಕೊನೇ ಮೆಸೇಜ್‌ ಮಾಡಿ ಸ್ಯಾಂಕಿ ಕೆರೆಗೆ ಬಿದ್ದು ವಿದ್ಯಾರ್ಥಿನಿ ಆತ್ಮಹತ್ಯೆಡಿಒ ಕಿರುಕುಳ ಆರೋಪ – ಡೆತ್ ನೋಟ್ ಬರೆದಿಟ್ಟು ಬಿಲ್ ಕಲೆಕ್ಟರ್ ಆತ್ಮಹತ್ಯೆ4 ದಿನಗಳ ಬಳಿಕ ಪತ್ರಿಕಾ ಪ್ರಕಟಣೆ – ಅನುಮಾನಕ್ಕೆ ಎಡೆ ಮಾಡಿಕೊಟ್ಟ ಅಂಜನಾದ್ರಿ ಹುಂಡಿ ಎಣಿಕೆವಯನಾಡಿನಲ್ಲಿ ಮೇಘಸ್ಫೋಟ – ಇಬ್ಬರು ಕಾರ್ಮಿಕರು ಜೀವಂತ ಸಮಾಧಿ; 30 ಮಂದಿ ಮಿಸ್ಸಿಂಗ್‌ಮಹಾರಾಷ್ಟ್ರದಲ್ಲಿ ಮಳೆ ಅಬ್ಬರ – ರಾಜ್ಯಕ್ಕೆ 1 ಲಕ್ಷ ಕ್ಯೂಸೆಕ್ ನೀರಿನ ಒಳಹರಿವು ದಾಖಲುಅನೈತಿಕ ಸಂಬಂಧಕ್ಕೆ ಅಡ್ಡಿ – ಟಾಯ್ಲೆಟ್ ಕ್ಲೀನರ್ ಇಂಜೆಕ್ಟ್ ಮಾಡಿ ಗಂಡನ ಕೊಂದ ನರ್ಸ್