LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಡಿಒ ಕಿರುಕುಳ ಆರೋಪ – ಡೆತ್ ನೋಟ್ ಬರೆದಿಟ್ಟು ಬಿಲ್ ಕಲೆಕ್ಟರ್ ಆತ್ಮಹತ್ಯೆ

Advertisement

ದಾವಣಗೆರೆ: ಪಿಡಿಒ  ಕಿರುಕುಳದಿಂದ ಮನನೊಂದು ಡೆತ್ ನೋಟ್ ಬರೆದಿಟ್ಟು ಬಿಲ್ ಕಲೆಕ್ಟರ್  ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಬಿಳಚೋಡು ಗ್ರಾಮದಲ್ಲಿ ನಡೆದಿದೆ.

 

ತಾಲೂಕಿನ ಬಿಳಚೋಡು ಗ್ರಾಮ ಪಂಚಾಯತಿ ಬಿಲ್ ಕಲೆಕ್ಟರ್ ಶಿವಪ್ಪ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೂ ಮುನ್ನ ಡೆತ್ ನೋಟ್ ಬರೆದಿರುವ ಶಿವಪ್ಪ, ಬಿಳಚೋಡು ಪಿಡಿಒ ನಂದಲಿಂಗೇಶ್ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಕಳೆದ ಎರಡು ವರ್ಷಗಳಿಂದ ನಿರಂತರವಾಗಿ ಕಿರುಕುಳ ನೀಡುತ್ತಿದ್ದು, ಹೆಚ್ಚುವರಿ ಕಂದಾಯ ವಸೂಲಿ ಮಾಡುವಂತೆ ಟಾರ್ಗೆಟ್ ನೀಡಿ ಉದ್ರಿ ಕಂದಾಯ ವಸೂಲಿ ಮಾಡುವಂತೆ ಮಾನಸಿಕ ಹಿಂಸೆ ನೀಡುತ್ತಿದ್ದರು ಎಂದು ಡೆತ್ ನೋಟ್‌ನಲ್ಲಿ ಉಲ್ಲೇಖಿಸಿದ್ದಾರೆ. 

ಮೃತ ಶಿವಪ್ಪ ಪುತ್ರ ಅಶೋಕ್ ಬಿಳಚೋಡು ಪೊಲೀಸ್ ಠಾಣೆಯಲ್ಲಿ ಪಿಡಿಒ ನಂದಲಿಂಗೇಶ್ ವಿರುದ್ಧ ದೂರು ದಾಖಲಿಸಿದ್ದಾರೆ. ಬಿಳಚೋಡು ಗ್ರಾಮ ಪಂಚಾಯತಿಯಲ್ಲಿ 23 ವರ್ಷ ನೀರಗಂಟಿಯಾಗಿದ್ದ ಶಿವಪ್ಪ ಕಳೆದ 2-3 ವರ್ಷಗಳಿಂದ ಬಿಲ್ ಕಲೆಕ್ಟರ್ ಆಗಿದ್ದರು. ಕಂಪ್ಯೂಟರ್ ಜ್ಞಾನ ಇಲ್ಲದ ಹಿನ್ನೆಲೆ ಪಿಡಿಒ ನಂದಲಿಂಗೇಶ್ ಮಾನಸಿಕವಾಗಿ ಕಿರುಕುಳ ನೀಡುತ್ತಿದ್ದರು ಎಂದು ಆರೋಪಿಸಲಾಗಿದೆ. ಅಲ್ಲದೇ ಜಾತಿ ನಿಂದನೆ ಮಾಡುತ್ತಿದ್ದರು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಇನ್ನು, ಬಿಲ್ ಕಲೆಕ್ಟರ್ ಕುಟುಂಬಸ್ಥರು ಪಿಡಿಒ ನಂದಲಿಂಗೇಶ್ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ.

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುಂಬೈನಲ್ಲಿ ಮಳೆಯ ರೌದ್ರನರ್ತನ; ಒಟ್ಟು 10 ಸಾವು; ಇಂದು ಕೂಡ 43 ರೈಲು ಸಂಚಾರ ರದ್ದುಹಿಟ್ & ರನ್‌ಗೆ 28 ವರ್ಷದ ಯುವಕ ಬಲಿ; ಬೈಕ್‌ಗೆ ಡಿಕ್ಕಿ ಹೊಡೆದು ಚಾಲಕ ಎಸ್ಕೇಪ್ಕೊಡಗಿನಲ್ಲಿ ಬಿರುಸು ಪಡೆದ ಮಳೆ – ಜಲಾವೃತ ಸೇತುವೆಯಿಂದ ಗ್ರಾಮಕ್ಕೆ ಸಂಪರ್ಕ ಕಡಿತಹುಡುಗಿಯರನ್ನ ಇಟ್ಕೊಂಡು ದಂಧೆ ನಡೆಸ್ತಿದ್ದ ನಟೋರಿಯಸ್ ಪಿಂಪ್ ಬಂಧನʻಜೀವನ ಸಾಕಾಗಿದೆʼ – ಗೆಳೆಯನಿಗೆ ಕೊನೇ ಮೆಸೇಜ್‌ ಮಾಡಿ ಸ್ಯಾಂಕಿ ಕೆರೆಗೆ ಬಿದ್ದು ವಿದ್ಯಾರ್ಥಿನಿ ಆತ್ಮಹತ್ಯೆಡಿಒ ಕಿರುಕುಳ ಆರೋಪ – ಡೆತ್ ನೋಟ್ ಬರೆದಿಟ್ಟು ಬಿಲ್ ಕಲೆಕ್ಟರ್ ಆತ್ಮಹತ್ಯೆ4 ದಿನಗಳ ಬಳಿಕ ಪತ್ರಿಕಾ ಪ್ರಕಟಣೆ – ಅನುಮಾನಕ್ಕೆ ಎಡೆ ಮಾಡಿಕೊಟ್ಟ ಅಂಜನಾದ್ರಿ ಹುಂಡಿ ಎಣಿಕೆವಯನಾಡಿನಲ್ಲಿ ಮೇಘಸ್ಫೋಟ – ಇಬ್ಬರು ಕಾರ್ಮಿಕರು ಜೀವಂತ ಸಮಾಧಿ; 30 ಮಂದಿ ಮಿಸ್ಸಿಂಗ್‌ಮಹಾರಾಷ್ಟ್ರದಲ್ಲಿ ಮಳೆ ಅಬ್ಬರ – ರಾಜ್ಯಕ್ಕೆ 1 ಲಕ್ಷ ಕ್ಯೂಸೆಕ್ ನೀರಿನ ಒಳಹರಿವು ದಾಖಲುಅನೈತಿಕ ಸಂಬಂಧಕ್ಕೆ ಅಡ್ಡಿ – ಟಾಯ್ಲೆಟ್ ಕ್ಲೀನರ್ ಇಂಜೆಕ್ಟ್ ಮಾಡಿ ಗಂಡನ ಕೊಂದ ನರ್ಸ್