ಬೆಂಗಳೂರು: ವೈದ್ಯಕೀಯ, ದಂತ ವೈದ್ಯಕೀಯ ಮತ್ತು ಆಯುಷ್ ಕೋರ್ಸ್‌ಗಳ ಪ್ರವೇಶಕ್ಕೆ ಹೊಸದಾಗಿ ಅರ್ಜಿ ಸಲ್ಲಿಸಿದವರು ಹಾಗೂ ಇದುವರೆಗೂ ದಾಖಲೆ ಪರಿಶೀಲನೆ (Document Verification) ಮಾಡಿಕೊಳ್ಳದವರ ದಾಖಲೆ ಪರಿಶೀಲನೆ ಆಗಸ್ಟ್ 4ರಿಂದ 8ರವರೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (KEA) ಕಚೇರಿಯಲ್ಲಿ ನಡೆಯಲಿದೆ.
ಆಗಸ್ಟ್ 2ರಂದು ಬಿಡುಗಡೆ ಮಾಡುವ ಲಿಂಕ್ ಮೂಲಕ ಸ್ಲಾಟ್ ಬುಕ್ ಮಾಡಿಕೊಂಡೇ ಅಭ್ಯರ್ಥಿಗಳು ದಾಖಲೆ ಪರಿಶೀಲನೆಗೆ ಹಾಜರಾಗಬೇಕು ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ.
ಯಾರೆಲ್ಲ ದಾಖಲೆ ಪರಿಶೀಲನೆಗೆ ಬರಬೇಕು?
ಎನ್‌ಆರ್‌ಐ ವಾರ್ಡ್, ಎನ್‌ಆರ್‌ಐ ಮತ್ತು ಫಾರಿನ್ ನ್ಯಾಷನಲ್ಸ್ – ಈ ವರ್ಗಗಳನ್ನು ಕ್ಲೇಮ್ ಮಾಡಿರುವ ಅಭ್ಯರ್ಥಿಗಳು ದಾಖಲೆ ಪರಿಶೀಲನೆಗೆ ಹಾಜರಾಗಬೇಕು.
ಸಿಇಟಿ-2026ಕ್ಕೆ ನೋಂದಣಿ ಮಾಡಿ ಪರಿಶೀಲನಾ ಸ್ಲಿಪ್ ಡೌನ್‌ಲೋಡ್ ಮಾಡಿಕೊಳ್ಳದಿರುವ ಅಭ್ಯರ್ಥಿಗಳು (ಕನ್ನಡ, ಗ್ರಾಮೀಣ, ಭಾಷಾ/ಧಾರ್ಮಿಕ ಅಲ್ಪಸಂಖ್ಯಾತ ಕ್ಲೇಮ್ ಮಾಡಿರುವ) ದಾಖಲೆ ಪರಿಶೀಲನೆಗೆ ಬರಬೇಕು.
ಹೊಸದಾಗಿ ನೋಂದಣಿ ಮಾಡಿ ಕನ್ನಡ, ಗ್ರಾಮೀಣ, ಭಾಷಾ/ಧಾರ್ಮಿಕ ಅಲ್ಪಸಂಖ್ಯಾತ ಕ್ಲೇಮ್ ಮಾಡಿರುವ ಅಭ್ಯರ್ಥಿಗಳು ಕೂಡ ಪರಿಶೀಲನೆಗೆ ಬರಬೇಕು.
ಸೇಂಟ್ ಜಾನ್ಸ್ ಮೆಡಿಕಲ್ ಕಾಲೇಜು (ಕ್ಯಾಟಗರಿ – 2ರಿಂದ ಕ್ಯಾಟಗರಿ-8ರವರೆಗೆ) ಕ್ಲೇಮ್ ಮಾಡಿರುವ ಎಲ್ಲ ಅಭ್ಯರ್ಥಿಗಳು, ಕೋರಮಂಗಲದ ಅದೇ ಕಾಲೇಜಿನಲ್ಲಿ ಆ.4ರಿಂದ 8ರವರೆಗೆ ನಡೆಯುವ ದಾಖಲೆ ಪರಿಶೀಲನೆಗೆ ಹಾಜರಾಗಬೇಕು. ಕ್ಯಾಟಗರಿ – RC-1 ಮತ್ತು ಕ್ಯಾಟಗರಿ- RC- 9 ಅಭ್ಯರ್ಥಿಗಳು ದಾಖಲೆ ಪರಿಶೀಲನೆಗೆ ಬರುವ ಅಗತ್ಯ ಇಲ್ಲ ಎಂದು ಅವರು ವಿವರಿಸಿದ್ದಾರೆ.
ಅಭ್ಯರ್ಥಿಗಳು ತಮ್ಮ ಕ್ಲೇಮ್ ಪ್ರಕಾರ ಮೂಲ ದಾಖಲೆಗಳ ಸಮೇತ ಪರಿಶೀಲನೆಗೆ ಹಾಜರಾಗಬೇಕು. ವಿವರಗಳಿಗೆ ಕೆಇಎ ವೆಬ್ ಸೈಟ್ ನೋಡಬೇಕು ಎಂದು ಅವರು ವಿವರಿಸಿದ್ದಾರೆ

