LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

15 ಸಾವಿರ ಹೊಸ ಬಸ್ ಖರೀದಿಗೆ ಚಾಲನೆ: ಬೈರತಿ ಸುರೇಶ್

Advertisement
Advertisement
Advertisement

ಬೆಂಗಳೂರು: ರಾಜ್ಯದ ಗ್ರಾಮಾಂತರ ಪ್ರದೇಶಗಳೂ ಸೇರಿ ಸಾರಿಗೆ ವ್ಯವಸ್ಥೆ ವಂಚಿತ ಪ್ರದೇಶಗಳಿಗೆ ಸಾರಿಗೆ ವ್ಯವಸ್ಥೆಯನ್ನು ಕಲ್ಪಿಸುವ ಉದ್ದೇಶದಿಂದ ಸರ್ಕಾರಿ ಸ್ವಾಮ್ಯದ ನಾಲ್ಕು ಸಾರಿಗೆ ನಿಗಮಗಳ ಮೂಲಕ ಸುಮಾರು 15 ಸಾವಿರ ಹೊಸ ಬಸ್‌ಗಳ ಖರೀದಿ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ ಎಂದು ಸಾರಿಗೆ ಸಚಿವರೂ ಆಗಿರುವ ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ತಿಳಿಸಿದರು.

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಚಿಕ್ಕಬಳ್ಳಾಪುರ ಜಿಲ್ಲಾ ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿದ್ದ ಕಾರ್ಯಕ್ರಮದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು. ಈ ದಿನ ನಾವು ಬ್ರಿಟಿಷರ ದಾಸ್ಯದಿಂದ ಮುಕ್ತಗೊಂಡ ದಿನ. ನಮ್ಮದೇ ಸಂವಿಧಾನ, ನಮ್ಮದೇ ಆಶೋತ್ತರಕ್ಕೆ ರೆಕ್ಕೆಯನ್ನ ನೀಡಿದ ದಿನ. ಈ ಸ್ವಾತಂತ್ರ್ಯಕ್ಕೆ ತಮ್ಮ ಬದುಕನ್ನೇ ತ್ಯಾಗ ಮಾಡಿದ ಅಸಂಖ್ಯಾತ ಸ್ವಾತಂತ್ರ್ಯ ಹೋರಾಟಗಾರರ ಬಲಿದಾನವನ್ನು ಸ್ಮರಿಸುವ ದಿನವಾಗಿದೆ ಎಂದರು.

10 ಲಕ್ಷ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್:
ನಾನು ಸಾರಿಗೆ ಸಚಿವನಾದ ಕೂಡಲೇ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಮಹಾತ್ವಾಕಾಂಕ್ಷೆಯ ವಿದ್ಯಾರ್ಥಿಗಳ ಉಚಿತ ಬಸ್‌ ಪಾಸ್‌ ನೀಡುವ ಯೋಜನೆಯನ್ನು 286 ಕೋಟಿ ರೂ. ವೆಚ್ಚದಲ್ಲಿ ಸುಮಾರು 10 ಲಕ್ಷ ವಿದ್ಯಾರ್ಥಿಗಳಿಗೆ ಉಚಿತ ಬಸ್‌ ಪಾಸ್‌ ನೀಡಲಾಗಿದೆ. ಇದಲ್ಲದೇ, ನಾಲ್ಕು ಸಾರಿಗೆ ನಿಗಮಗಳ ವ್ಯಾಪ್ತಿಯ ಸಾರಿಗೆ ವಂಚಿತ ಪ್ರದೇಶಗಳಿಗೆ ಸಾರಿಗೆ ವ್ಯವಸ್ಥೆ ಕಲ್ಪಿಸಲು ಹಾಗೂ ಸಾರಿಗೆ ವ್ಯವಸ್ಥೆಯನ್ನು ಇನ್ನಷ್ಟು ಉತ್ತಮಗೊಳಿಸುವ ನಿಟ್ಟಿನಲ್ಲಿ 15,000ಕ್ಕೂ ಹೆಚ್ಚು ಹೊಸ ಬಸ್‌ಗಳ ಖರೀದಿ ಪ್ರಕ್ರಿಯೆಯನ್ನು ಆರಂಭಿಸಲಾಗಿದೆ. ಹಂತ ಹಂತವಾಗಿ ಹಣಕಾಸಿನ ಲಭ್ಯತೆಗೆ ಅನುಗುಣವಾಗಿ ಬಸ್‌ಗಳನ್ನು ಖರೀದಿಸಿ ಸರ್ಕಾರಿ ಸಾರಿಗೆ ವ್ಯವಸ್ಥೆಯನ್ನು ಬಲಗೊಳಿಸಲಾಗುತ್ತದೆ ಎಂದು ತಿಳಿಸಿದರು.

ಈ ಹಿಂದೆ ನಾನು ನಗರಾಭಿವೃದ್ಧಿ ಇಲಾಖೆ ಸಚಿವನಾಗಿದ್ದಾಗ ಸರ್ಕಾರದ 6ನೇ ಗ್ಯಾರಂಟಿಯಾದ ಭೂ-ಗ್ಯಾರಂಟಿ ಯೋಜನೆ ಅನುಷ್ಠಾನಕ್ಕಾಗಿ KTCP- 1961 ಕಾಯ್ದೆಯಲ್ಲಿ ಹಲವು ತಿದ್ದುಪಡಿಗಳನ್ನು ಮಾಡಿದ್ದೇನೆ. ಇ-ಖಾತೆಯು ಎಲ್ಲರಿಗೂ ಸುಲಭವಾಗಿ ಸಿಗುವಂತೆ ಇ-ಖಾತೆ ರೋಲ್‌-ಔಟ್‌ ಅಭಿಯಾನವನ್ನು ಆರಂಭಿಸಿದ್ದೇನೆ. ಅದರಂತೆ, ಬಿ-ಖಾತದಿಂದ ಎ-ಖಾತೆ ಪರಿವರ್ತನೆ ಮಾಡಲು ನಿಯಮವಾಳಿಗಳನ್ನು ರೂಪಿಸಲಾಗಿದೆ ಎಂದು ಹೇಳಿದರು.

ಸರ್ವತೋಮುಖ ಅಭಿವೃದ್ಧಿಗೆ ಒತ್ತು:
ಸ್ವಾತಂತ್ರ್ಯವೆಂದರೆ ಕೇವಲ ರಾಜಕೀಯ ಸ್ವಾತಂತ್ರ್ಯವಲ್ಲ. ಅದು ಬಡತನದಿಂದ, ಅನಕ್ಷರತೆಯಿಂದ, ಭ್ರಷ್ಟಾಚಾರದಿಂದ ಮತ್ತು ಅಸಮಾನತೆಯಿಂದ ಮುಕ್ತಿಪಡೆಯುವುದು. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಎಲ್ಲಾ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಪಣತೊಟ್ಟಿದೆ. ಜನರ ಜೀವನಮಟ್ಟ ಸುಧಾರಿಸಲು ಪಂಚ ಗ್ಯಾರೆಂಟಿ ಯೋಜನೆಯನ್ನು ನೀಡಿದೆ ಎಂದು ತಿಳಿಸಿದರು.

ಸಂಕಷ್ಟದ ಈ ಬರ ಪರಿಸ್ಥಿತಿಯಲ್ಲಿಯೂ ರೈತರಿಗೆ ಬೆಂಗಾವಲಾಗಿ ನಿಂತು ಕುಡಿಯುವ ನೀರಿನ ಬವಣೆ, ಜಾನುವಾರುಗಳಿಗೆ ಮೇವು, ಬರಪರಿಹಾರದ ಕಾರ್ಯಗಳನ್ನು ಸಮರೋಪಾದಿಯಲ್ಲಿ ಕೈಗೊಳ್ಳುತ್ತಿದೆ. ಶಿಕ್ಷಣದಲ್ಲಿ ಒಂದು ಹೆಜ್ಜೆ ಮುಂದೆ ಹೋಗಿ 16 ವರ್ಷದ ಒಳಗಿನ ಮಕ್ಕಳಲ್ಲಿ SCREEN TIME ಕಡಿಮೆ ಮಾಡುವುದು ಹಾಗೂ ಸಾಮಾಜಿಕ ಜಾಲತಾಣ ಬಳಕೆಯನ್ನು ಕಡಿಮೆ ಮಾಡಲು ಯೋಜನೆಯನ್ನು ರೂಪಿಸಲಾಗುತ್ತಿದೆ. ಈಗಿನ ಯುವ ಪೀಳಿಗೆಗಾಗಿ ನಿರುದ್ಯೋಗದ ಸಮಸ್ಯೆಯನ್ನು ಬಗೆಹರಿಸಲು ಎಲ್ಲಾ ಇಲಾಖೆಗಳಲ್ಲಿ ಖಾಲಿ ಇರುವ ಸಾವಿರಾರು ಹುದ್ದೆಗಳನ್ನು ಭರ್ತಿ ಮಾಡುವ ಕಾರ್ಯ ಹಾಗೂ ಯುವಕರಲ್ಲಿ ಕ್ರೀಡಾ ಮನೋಭಾವ ಮತ್ತು ನಾಯಕತ್ವದ ಗುಣ ಹೆಚ್ಚಿಸಲು ಯುವಕರ ಭಾರತ್‌ ಜೋಡೋ ಯೋಜನೆಯನ್ನು ರೂಪಿಸಿದ್ದೇವೆ ಎಂದು ತಿಳಿಸಿದರು.

ಮಾಜಿ ಸಿಎಂ ಸಿದ್ದರಾಮಯ್ಯ ಅವರ ಅಧಿಕಾರಾವಧಿಯಲ್ಲಿ ನಮ್ಮ ಸರ್ಕಾರ ಹಲವಾರು ಜನಪರ ಯೋಜನೆಗಳನ್ನು ರಾಜ್ಯದ ಜನರಿಗೆ ನೀಡಿದೆ. ಇದರಿಂದ ಕೋಟ್ಯಂತರ ಜನರು ಆರ್ಥಿಕ ಸ್ವಾವಲಂಬಿಗಳಾಗಿದ್ದಾರೆ. ಸಿಎಂ ಡಿ.ಕೆ ಶಿವಕುಮಾರ್ ನೇತೃತ್ವದ ಸರ್ಕಾರದ ನೂರು ದಿನಗಳ ಆಡಳಿತದಲ್ಲಿ ಹಲವಾರು ಹೊಸ ಕಾರ್ಯಕ್ರಮಗಳನ್ನು ನೀಡಲಾಗಿದೆ ಹೇಳಿದರು.

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸರ್ದಾರ್ ಪ್ರೌಢಶಾಲೆ ಆವರಣದಲ್ಲಿ ನೂತನ ‘ಚೆಸ್ ಪಾರ್ಕ್’ ಉದ್ಘಾಟಿಸಿದ ಸಚಿವ ಸತೀಶ್ ಜಾರಕಿಹೊಳಿಮಲಪ್ರಭಾ ಸಕ್ಕರೆ ಕಾರ್ಖಾನೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆಜನರ ಆರೋಗ್ಯ ಕಾಪಾಡುವ ಸರಕಾರದ ಸಂಕಲ್ಪಕ್ಕೆ ಕೈಜೋಡಿಸಿ: ಲಕ್ಷ್ಮೀ ಹೆಬ್ಬಾಳಕರ್ಬೆಳಗಾವಿಯಲ್ಲಿ 80ನೇ ಸ್ವಾತಂತ್ರ್ಯೋತ್ಸವದ ಸಂಭ್ರಮವಂದೇ ಮಾತರಂ ಹಾಡುವುದನ್ನು ತಡೆಯಲು ಸೋನಿಯಾ ಗಾಂಧಿ ಯತ್ನ: ಬಿಜೆಪಿ ಆರೋಪಕರ್ನಾಟಕದ ವಾಹನಗಳ ಮಾಲಿನ್ಯ ಪರೀಕ್ಷಾ ಶುಲ್ಕ ಹೆಚ್ಚಳ – ದ್ವಿಚಕ್ರ ವಾಹನಗಳಿಗೆ 80 ರೂ. ದರಹರ್ ಘರ್ ತಿರಂಗಾ – ಹರ್ ಮನ್ ತಿರಂಗಾಕ್ಕೆ ಪ್ರೇರಣೆಯಾದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಧಾರವಾಡ | ಫಸಲ್ ಬಿಮಾ ಯೋಜನೆಯಲ್ಲಿ ಭಾರೀ ಗೋಲ್ಮಾಲ್‌ – 9 ಕೋಟಿಗೂ ಹೆಚ್ಚು ಹಣ ವಂಚನೆದೇವರಮನೆ ಬೆಟ್ಟದಲ್ಲಿ ಬೆಂಗಳೂರಿನ ಪ್ರವಾಸಿಗ ಹೃದಯಾಘಾತಕ್ಕೆ ಬಲಿ15 ಸಾವಿರ ಹೊಸ ಬಸ್ ಖರೀದಿಗೆ ಚಾಲನೆ: ಬೈರತಿ ಸುರೇಶ್