ಬೆಂಗಳೂರು: ಇಲ್ಲಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 5.87 ಕೋಟಿ ಮೌಲ್ಯದ ಮಾದಕ ವಸ್ತು ಜಪ್ತಿಯಾಗಿದೆ.
ಬೆಳ್ಳಂಬೆಳಿಗ್ಗೆ ವಿಮಾನ ನಿಲ್ದಾಣದ ಅಧಿಕಾರಿಗಳು ಭರ್ಜರಿ ದಾಳಿ ನಡೆಸಿದ್ದಾರೆ. ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ಬಂದ ಪ್ರಯಾಣಿಕರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಗಾಂಜಾ ಸಾಗಿಸುತ್ತಿರುವುದು ಬೆಳಕಿಗೆ ಬಂದಿದೆ. ಈ ವೇಳೆ ಒಟ್ಟು 5.87 ಕೋಟಿ ರೂ. ಮೌಲ್ಯದ 16 ಕೆಜಿ 880 ಗ್ರಾಂ ಮಾದಕ ವಸ್ತುವನ್ನು ಜಪ್ತಿ ಮಾಡಿದ್ದಾರೆ.
ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಕೋಟಿ ಮೌಲ್ಯದ ಹೈಡ್ರೋಫೋನಿಕ್ ಗಾಂಜಾ ವಶಪಡಿಸಿಕೊಂಡಿದ್ದು, ಇಬ್ಬರು ಪ್ರಯಾಣಿಕರ ವಿರುದ್ಧ NDPS ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.



