LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮೈಸೂರು ದಸರೆಗೆ ದುಬಾರೆಯ 5 ಆನೆಗಳ ಪಯಣ

Advertisement
Advertisement
Advertisement

ಮಡಿಕೇರಿ: ವಿಶ್ವವಿಖ್ಯಾತ ಮೈಸೂರು ದಸರೆಗೆ  ದಿನಗಣನೆ ಆರಂಭವಾಗಿದ್ದು, ನಾಡಹಬ್ಬದ ಜಂಬೂಸವಾರಿಯಲ್ಲಿ ಪಾಲ್ಗೊಳ್ಳಲಿರುವ ಗಜಪಡೆ ಇದೀಗ ಮೈಸೂರಿನತ್ತ ಪ್ರಯಾಣ ಬೆಳೆಸಿದೆ.

ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ದುಬಾರೆ ಸಾಕಾನೆ ಶಿಬಿರದಿಂದ ಮೊದಲ ಹಂತದಲ್ಲಿ 5 ಆನೆಗಳು ವೀರನಹೊಸಹಳ್ಳಿಯತ್ತ ಪಯಣ ಬೆಳೆಸಿವೆ. ಗಣಪತಿ ಪೂಜೆ ನೆರವೇರಿಸುವ ಮೂಲಕ ಸಾಂಪ್ರದಾಯಿಕವಾಗಿ ಗಜಪಯಣಕ್ಕೆ ಚಾಲನೆ ನೀಡಲಾಯಿತು.

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಾಡಹಬ್ಬ ಮೈಸೂರು ದಸರೆಗೆ ಸಿದ್ಧತೆಗಳು ಭರದಿಂದ ಸಾಗುತ್ತಿವೆ. ಇದಕ್ಕಾಗಿ ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ದುಬಾರೆ ಸಾಕಾನೆ ಶಿಬಿರದಿಂದ ಮೊದಲ ಹಂತದಲ್ಲಿ ಐದು ಆನೆಗಳು ಮೈಸೂರಿನತ್ತ ಪ್ರಯಾಣ ಬೆಳೆಸಿವೆ. ಧನಂಜಯ, ಪ್ರಶಾಂತ, ಗೋಪಿ, ಶ್ರೀರಾಮ ಹಾಗೂ ಕಾವೇರಿ ಆನೆಗಳು ಗಜಪಯಣದಲ್ಲಿ ಭಾಗಿಯಾಗಲಿವೆ. 4 ಗಂಡಾನೆಗಳು ಹಾಗೂ ಒಂದು ಹೆಣ್ಣಾನೆ ಒಳಗೊಂಡ ಈ ಗಜಪಡೆಗೆ ದುಬಾರೆ ಸಾಕಾನೆ ಶಿಬಿರದಲ್ಲೇ ಸಾಂಪ್ರದಾಯಿಕವಾಗಿ ಗಣಪತಿ ಪೂಜೆ ನೆರವೇರಿಸಲಾಯಿತು.

ಸೋಮವಾರಪೇಟೆ ವಲಯದ ಎಸಿಎಫ್ ನವೀನ್ ಅವರ ನೇತೃತ್ವದಲ್ಲಿ ನಡೆದ ಪೂಜೆಯಲ್ಲಿ ಆನೆಗಳ ಮಾವುತರು ಹಾಗೂ ಕಾವಾಡಿಗಳು ಭಾಗವಹಿಸಿದರು. ಯಾವುದೇ ವಿಘ್ನಗಳು ಎದುರಾಗದಂತೆ ಗಣಪತಿಗೆ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥನೆ ಸಲ್ಲಿಸಲಾಯಿತು.

ಪೂಜೆ ಬಳಿಕ ಆನೆಗಳನ್ನು ಲಾರಿಗಳ ಮೂಲಕ ಮೈಸೂರು ಜಿಲ್ಲೆಯ ವೀರನಹೊಸಹಳ್ಳಿಗೆ ಕಳುಹಿಸಲಾಯಿತು. ಅಲ್ಲಿಂದ ದಸರಾ ಆನೆಗಳು ಮೈಸೂರಿನತ್ತ ಪ್ರಯಾಣ ಬೆಳೆಸಲಿವೆ. ನಾಡದೇವತೆಯ ದಸರಾ ಹಬ್ಬದಲ್ಲಿ ಆನೆಗಳೊಂದಿಗೆ ಭಾಗಿಯಾಗುವುದು ಹೆಮ್ಮೆಯ ಹಾಗೂ ಸಂತಸದ ವಿಚಾರ ಎಂದು ಮಾವುತರು ಮತ್ತು ಕಾವಾಡಿಗಳು ಹರ್ಷ ವ್ಯಕ್ತಪಡಿಸಿದ್ದಾರೆ. ಸಾಕಾನೆಗಳ ಮೂಲಕ ನಾಡದೇವಿಯ ಸೇವೆ ಮಾಡುವ ಅವಕಾಶ ಸಿಕ್ಕಿರುವುದು ನಮ್ಮ ಪುಣ್ಯ ಎಂದು ಅವರು ಹೇಳಿದ್ದಾರೆ.

ಮೈಸೂರಿನಲ್ಲಿ ಸುಮಾರು 1 ತಿಂಗಳ ಕಾಲ ದಸರಾ ಆನೆಗಳಿಗೆ ವಿಶೇಷ ಆಹಾರ ನೀಡುವುದರ ಜೊತೆಗೆ ಆರೋಗ್ಯ ತಪಾಸಣೆ ಹಾಗೂ ವಿವಿಧ ಹಂತದ ತರಬೇತಿ ನೀಡಲಾಗುತ್ತದೆ. ಜಂಬೂಸವಾರಿಯಲ್ಲಿ ಯಾವುದೇ ಸಮಸ್ಯೆಯಾಗದಂತೆ ಆನೆಗಳನ್ನ ಸಜ್ಜುಗೊಳಿಸಲಾಗುತ್ತದೆ. ಈಗಾಗಲೇ ಪಶುವೈದ್ಯಾಧಿಕಾರಿಗಳು ಸಾಕಾನೆಗಳ ಆರೋಗ್ಯ ತಪಾಸಣೆ ನಡೆಸಿದ್ದಾರೆ.

ದುಬಾರೆ ಸಾಕಾನೆ ಶಿಬಿರದಿಂದ ಮೊದಲ ಹಂತದಲ್ಲಿ 5 ಆನೆಗಳು ಮೈಸೂರಿನತ್ತ ಪಯಣ ಬೆಳೆಸಿವೆ. ಮುಂದಿನ ಹಂತದಲ್ಲಿ ದುಬಾರೆ ಶಿಬಿರದಿಂದ ಇನ್ನಷ್ಟು ಆನೆಗಳನ್ನ ಮೈಸೂರಿಗೆ ಕಳುಹಿಸುವ ಸಿದ್ಧತೆ ನಡೆದಿದೆ.

ನಾಡಹಬ್ಬ ಮೈಸೂರು ದಸರೆಯ ಜಂಬೂಸವಾರಿಯಲ್ಲಿ ಗಜಪಡೆ ಪ್ರಮುಖ ಆಕರ್ಷಣೆಯಾಗಿದ್ದು, ಕೊಡಗಿನ ದುಬಾರೆ ಸಾಕಾನೆ ಶಿಬಿರದ ಆನೆಗಳಿಗೂ ಪ್ರತಿವರ್ಷ ವಿಶೇಷ ಜವಾಬ್ದಾರಿ ನೀಡಲಾಗುತ್ತದೆ. ದುಬಾರೆಯಲ್ಲಿ ಗಣಪತಿ ಪೂಜೆ ಸಲ್ಲಿಸಿ ಲಾರಿ ಏರಿದ ಗಜಪಡೆ ಇದೀಗ ವೀರನಹೊಸಹಳ್ಳಿಯತ್ತ ಸಾಗಿದೆ. ಅಲ್ಲಿಂದ ಅರಮನೆ ನಗರಿ ಮೈಸೂರಿನತ್ತ ಪ್ರಯಾಣ ಬೆಳೆಸಿ, ನಾಡಹಬ್ಬದ ವೈಭವದ ಜಂಬೂಸವಾರಿಗೆ ಸಜ್ಜಾಗಲಿದೆ.

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜನರ ಸಮಸ್ಯೆಗಳಿಗೆ ಸ್ಪಂದಿಸಿದ ಲಕ್ಷ್ಮೀ ಹೆಬ್ಬಾಳಕರ್ಮೃತರ ಕುಟುಂಬಗಳಿಗೆ ಲಕ್ಷ್ಮೀ ಹೆಬ್ಬಾಳಕರ್ ಸಾಂತ್ವನಮೈಸೂರು ದಸರೆಗೆ ದುಬಾರೆಯ 5 ಆನೆಗಳ ಪಯಣಹಿಜಾಬ್ ಇಸ್ಲಾಂ ಧರ್ಮದ ಅತ್ಯಗತ್ಯ ಧಾರ್ಮಿಕ ಆಚರಣೆಯಲ್ಲ- UP ವಿದ್ಯಾರ್ಥಿನಿಯ ಅರ್ಜಿ ವಜಾಮಂತ್ರಾಲಯ ರಾಯರ ಮಠದ ಹುಂಡಿ ಎಣಿಕೆ – 19 ದಿನದಲ್ಲಿ 2.81 ಕೋಟಿ ಕಾಣಿಕೆ ಸಂಗ್ರಹಹನೂರು ಎನ್‌ಕೌಂಟರ್‌ ಪ್ರಕರಣ ಸಿಐಡಿಗೆ ಹಸ್ತಾಂತರಅಕ್ಕಿಯನ್ನು ಎಥೆನಾಲ್‌ ಉತ್ಪಾದಕರಿಗೆ ರಿಯಾಯಿತಿ ದರದಲ್ಲಿ ಮಾರಾಟ ಮಾಡುತ್ತಿರುವುದೇಕೆ?- ಪ್ರಿಯಾಂಕ್ ಖರ್ಗೆಮಲ್ಪೆಯಲ್ಲಿ ಚೂರಿ ಇರಿದು ಮೀನುಗಾರನ ಬರ್ಬರ ಹತ್ಯೆ“ಮನೆಗೆಲಸ ಮಾಡು, ವೃದ್ಧ ಪೋಷಕರನ್ನು ನೋಡಿಕೊಂಡಿರು”- ಪತ್ನಿಗೆ ಪತಿ ಆದೇಶಿಸುವಂತಿಲ್ಲಭ್ರಷ್ಟಾಚಾರ ಆರೋಪಿಗೆ ರಾಜಾತಿಥ್ಯ – ನ್ಯಾಯಾಧೀಶರ ದಿಢೀರ್ ರೇಡ್‌ನಲ್ಲಿ ಅಕ್ರಮ ಬಯಲು