LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕಲಬುರಗಿಯಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ಸದ್ದು – ಪರಾರಿಯಾಗಿದ್ದ ಆರೋಪಿ ಅರೆಸ್ಟ್ ವೇಳೆ ಪೊಲೀಸರಿಂದ ಫೈರಿಂಗ್

Advertisement
Advertisement

ಕಲಬುರಗಿ: ಜಿಲ್ಲೆಯಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ಸದ್ದು ಕೇಳಿಬಂದಿದೆ. ನಿನ್ನೆಯಷ್ಟೇ ಪರಾರಿಯಾಗಿದ್ದ ಆರೋಪಿಯನ್ನು ಅರೆಸ್ಟ್ ಮಾಡುವಾಗ ಹಲ್ಲೆಗೆ ಯತ್ನಿಸಿದ್ದು, ಈ ವೇಳೆ ಪೊಲೀಸರು ಫೈರಿಂಗ್ ಮಾಡಿದ್ದಾರೆ.

ಕಲಬುರಗಿ ನಗರ ಪೊಲೀಸ್ ಆಯುಕ್ತ ಡಾ.ಶರಣಪ್ಪ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪರಾರಿಯಾಗಿದ್ದ ಮೂರು ಜನ ಆರೋಪಿಗಳ ಪತ್ತೆಗಾಗಿ ಕಲಬುರಗಿ ನಗರ, ಎಸ್‌ಪಿ ಹಾಗೂ ಬೀದರ್ ಪೊಲೀಸರ ನೇತೃತ್ವದಲ್ಲಿ ತಂಡ ರಚಿಸಲಾಗಿತ್ತು. ಅದರಂತೆ ಸಂತೋಷ್ ಎಂಬ ಕೈದಿ ಕಪನೂರ್ ಇಂಡಸ್ಡ್ರಿಯಲ್ ಏರಿಯಾದಲ್ಲಿ ಇರುವ ಖಚಿತ ಮಾಹಿತಿ ಸಿಕ್ಕಿದೆ. ಈ ವೇಳೆ ಆತನನ್ನು ಬಂಧಿಸಲು ಹೋದಾಗ ನಮ್ಮ ಸಿಬ್ಬಂದಿ ಮೇಲೆ ಹಲ್ಲೆಗೆ ಯತ್ನಿಸಿದ್ದಾನೆ. ಈ ವೇಳೆ ಆತ್ಮರಕ್ಷಣೆಗಾಗಿ ನಮ್ಮ ಸಿಬ್ಬಂದಿ ಗಾಳಿಯಲ್ಲಿ ಗುಂಡು ಹಾರಿಸಿದ್ದು, ಜೊತೆಗೆ ಆರೋಪಿಯ ಬಲಗಾಗಲಿಗೆ ಗುಂಡು ಹೊಡೆದಿದ್ದಾರೆ. ಪರಾರಿಯಾದ ಇನ್ನಿಬ್ಬರು ಕೈದಿಗಳಿಗಾಗಿ ಹುಡುಕಾಟ ಮುಂದುವರೆದಿದೆ ಎಂದು ತಿಳಿಸಿದ್ದಾರೆ. 

ಇದಕ್ಕೂ ಮುನ್ನ ಆಸ್ಪತ್ರೆಗೆ ಭೇಟಿ ನೀಡಿ, ಘಟನೆಯಲ್ಲಿ ಗಾಯಗೊಂಡ ಪೇದೆ ಹಾಗು ಆರೋಪಿಯ ಆರೋಗ್ಯ ವಿಚಾರಣೆ ಮಾಡಿದ್ದಾರೆ.

ಘಟನೆಯಲ್ಲಿ ಇಬ್ಬರು ಪೇದೆಗಳು ಗಾಯಗೊಂಡಿದ್ದಾರೆ. ಗಾಯಗೊಂಡ ಕೈದಿ ಸಂತೋಷ ಹಾಗೂ ಪೊಲೀಸರನ್ನ ಕಲಬುರಗಿ ಜಿಮ್ಸ್ ಆಸ್ಪತ್ರೆಯ ಟ್ರಾಮಾ ಸೆಂಟರ್‌ನಲ್ಲಿ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

ಪರಾರಿಯಾಗಿದ್ದು ಹೇಗೆ?
ಮಸ್ತಾನ್, ಸಂತೋಷ್ ಹಾಗೂ ಸಾಗರ್ ಪರಾರಿಯಾದ ಕೈದಿಗಳು. ಬೀದರ್‌ನಲ್ಲಿ ನಡೆದ ಕೊಲೆ ಪ್ರಕರಣದಲ್ಲಿ ಈ ಮೂವರು ಶಿಕ್ಷೆಗೆ ಒಳಪಟ್ಟಿದ್ದರು. ಮಂಗಳವಾರ (ಜು.14) ನಸುಕಿನ ಜಾವ 3 ಗಂಟೆಗೆ ಜೈಲಿನ ಕಂಪೌಡ್ ಹಾರಿ ಈ ಮೂವರು ಪರಾರಿಯಾಗಿದ್ದಾರೆ. ಕೈದಿಗಳು ಪರಾರಿಯಾಗಲು ಜೈಲು ಸಿಬ್ಬಂದಿಯೇ ಸಹಕಾರ ನೀಡಿದ್ದಾರೆ ಎಂಬ ಶಂಕೆ ಕೂಡ ವ್ಯಕ್ತವಾಗಿದೆ. ಮಧ್ಯರಾತ್ರಿ ಲಾಕಪ್‌ನಲ್ಲಿ ಇರಬೇಕಾದ ಕೈದಿಗಳನ್ನು ಜೈಲು ಸಿಬ್ಬಂದಿ ಯಾಕೆ ಹೊರಗೆ ಬಿಟ್ಟರು ಎಂಬ ಪ್ರಶ್ನೆ ಮೂಡಿದೆ. ಈ ಮೂಲಕ ಕೈದಿಗಳ ಪರಾರಿಗೆ ಜೈಲಿನ ಹಲವು ಸಿಬ್ಬಂದಿ ಹಾಗೂ ಅಧಿಕಾರಿಗಳು ಸಾಥ್ ನೀಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಕುರಿತು ಫರ್ತಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜು.3ರಂದು ಸಹ ಜಿಲ್ಲೆಯ ಅಫಜಲಪುರ್ ಪೊಲೀಸ್ ಠಾಣೆಯಿಂದ ಪೋಕ್ಸೊ ಪ್ರಕರಣದ ಆರೋಪಿ ಮಂಜಾನಾಥ್ ಪರಾರಿಯಾಗಿದ್ದ. ಕಳೆದ ಒಂದು ವಾರದ ಹಿಂದೆ ಪೋಕ್ಸೊ ಪ್ರಕರಣ ದಾಖಲಾದ ಹಿನ್ನೆಲೆ ಆರೋಪಿಯನ್ನು ಬಂಧಿಸಿ ಠಾಣೆಗೆ ಪೊಲೀಸರು ಕರೆತಂದಿದ್ದರು.

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಆಲಮಟ್ಟಿ ಡ್ಯಾಂನಿಂದ ಕೆರೆಗಳಿಗೆ ನೀರು ಹರಿಸಿ – ಸಿಎಂ ಡಿಕೆಶಿಗೆ ಮಾಜಿ ಸಚಿವ ಶಿವಾನಂದ ಪಾಟೀಲ್ ಮನವಿಬಿಡದಿ ಟೌನ್‌ಶಿಪ್‌ ಯೋಜನೆಗೆ 2 ತಿಂಗಳು ತಾತ್ಕಾಲಿಕ ಬ್ರೇಕ್‌ – ಸಮಿತಿ ರಚಿಸುತ್ತೇನೆ ಎಂದ ಸಿಎಂಬೆಳಗಾವಿಯಲ್ಲಿ 165 ಕೋಟಿ ವಂಚಿಸಿ ವಿದೇಶಕ್ಕೆ ಪರಾರಿತ್ರಿವಳಿ ಕೊಲೆ ಕೇಸ್ – ಬ್ರೈನ್ ಮ್ಯಾಪಿಂಗ್ ಮುನ್ನವೇ ಮೂವರನ್ನು ಕೊಂದಿದ್ದು ನಾನೇ: ತಪ್ಪೊಪ್ಪಿಕೊಂಡ ಆರೋಪಿಕಿಟಕಿ ರಾಡ್ ಮುರಿದು, ಬಟ್ಟೆಯನ್ನೇ ಹಗ್ಗ ಮಾಡಿ ಗೋಡೆ ಹಾರಿದ್ರು – ಕಲಬುರಗಿ ಜೈಲಿನಿಂದ ಸಿನಿಮಾ ಶೈಲಿ ಕೈದಿಗಳು ಎಸ್ಕೇಪ್ರಾಜ್ಯದಲ್ಲಿ ಮತ್ತೆ ಹೆಚ್ಚಿದ ಕೊರೋನಾ ಭೀತಿ – 32 ಜನರಲ್ಲಿ ಸೋಂಕು ದೃಢರಾಮಭಕ್ತರ ಮೇಲೆ ಗುಂಡು ಹಾರಿಸಿದವರಿಂದ ಇಂದು ಉಪದೇಶ- ಎಸ್‌ಪಿ ವಿರುದ್ಧ ಯೋಗಿ ಕಿಡಿNDA ಸೇರ್ಪಡೆಯಾಗದೇ ಮಹಿಳಾ ಮೀಸಲಾತಿ, ಡಿಲಿಮಿಟೇಷನ್‌ ಮಸೂದೆಗೆ ಪವಾರ್ ಬಣ ಬೆಂಬಲ!ಫಿಫಾ ವಿಶ್ವಕಪ್‌ 3ನೇ ಟ್ರೋಫಿ ಕನಸು ಭಗ್ನ – ಅಭಿಮಾನಿಗಳ ಆಕ್ರೋಶಕ್ಕೆ ಹೊತ್ತಿ ಉರಿದ ಫ್ರಾನ್ಸ್‌5 ನಿವೇಶನ, 4 ಫ್ಲಾಟ್‌, ಕಂತೆ ಕಂತೆ ನೋಟು, ಚಿನ್ನಾಭರಣ; 100 ಕೋಟಿ ಆಸ್ತಿ ಪತ್ತೆ – ಎಂಜಿನಿಯರ್‌ ಅರೆಸ್ಟ್‌