LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಯುದ್ಧದ ನಡುವೆಯೇ ಇರಾನ್‌ನಲ್ಲಿ ಭೂಕಂಪ

Advertisement
ಟೆಹ್ರಾನ್‌: ಅಮೆರಿಕ-ಇಸ್ರೇಲ್‌ ಹಾಗೂ ಗಲ್ಫ್‌ ರಾಷ್ಟ್ರಗಳ ವಿರುದ್ಧ ಯುದ್ಧದ ನಡುವೆಯೇ ಇರಾನ್‌ನಲ್ಲಿ ಭೂಕಂಪ ಸಂಭವಿಸಿದೆ.

ಭೂಕಂಪದ ಕೇಂದ್ರ ಬಿಂದು ಇರಾನ್‌ನ ಗೆರಾಶ್‌ನಲ್ಲಿ 4.3 ತೀವ್ರತೆಯ ಭೂಕಂಪವಾಗಿದೆ. ಸುಮಾರು 10 ಕಿ.ಮೀ ಆಳದಲ್ಲಿ ಭೂಕಂಪ ಉಂಟಾಗಿದೆ. ಅಮೆರಿಕ ಮತ್ತು ಇಸ್ರೇಲ್ ಜಂಟಿಯಾಗಿ ಇರಾನ್ ಮೇಲೆ ಮಿಲಿಟರಿ ದಾಳಿಗಳನ್ನು ತೀವ್ರಗೊಳಿಸಿವೆ. ಈ ಪ್ರದೇಶದಲ್ಲಿ ತೀವ್ರ ಸಂಘರ್ಷದ ನಡುವೆ ಭೂಕಂಪ ಸಂಭವಿಸಿದೆ.

ಈಗಾಗಲೇ ಉದ್ವಿಗ್ನಗೊಂಡಿರುವ ಪ್ರಾದೇಶಿಕ ಯುದ್ಧಗಳಿಗೆ ಈ ಕಂಪನವು ಮತ್ತಷ್ಟು ಸಂಕಷ್ಟ ತಂದೊಡ್ಡಿದೆ. ಭೂಕಂಪದಿಂದ ಉಂಟಾದ ನಷ್ಟ, ಸಾವು-ನೋವುಗಳ ಬಗ್ಗೆ ಯಾವುದೇ ಮಾಹಿತಿ ಇಲ್ಲ.

ಯುಎಸ್‌-ಇಸ್ರೇಲ್‌ ಏರ್‌ಸ್ಟ್ರೈಕ್‌ಗೆ ಭಾನುವಾರ ಇರಾನಿನ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಹತ್ಯೆಯಾಯಿತು. ಇರಾನಿನ ಮಿಲಿಟರಿ ಮತ್ತು ಕಾರ್ಯತಂತ್ರದ ವ್ಯವಸ್ಥೆಗಳ ಮೇಲೆ ವಾಯು ಮತ್ತು ಕ್ಷಿಪಣಿ ದಾಳಿ ನಡೆಸಲಾಗಿದೆ. ಇದು ಮಧ್ಯಪ್ರಾಚ್ಯದಾದ್ಯಂತ ವ್ಯಾಪಕ ಪ್ರತೀಕಾರಕ್ಕೆ ಕಾರಣವಾಯಿತು.

ಮಧ್ಯಪ್ರಾಚ್ಯದಲ್ಲಿ ಹೋರಾಟ ಉಲ್ಬಣಗೊಳ್ಳುತ್ತಿದ್ದಂತೆ ಅಧ್ಯಕ್ಷ ಡೊನಾಲ್ಡ್ ಟ್ರಂಪ್, 4 ರಿಂದ 5 ವಾರಗಳಿಗೂ ಹೆಚ್ಚು ಅವಧಿವರೆಗೆ ಇರಾನ್ ವಿರುದ್ಧ ತನ್ನ ಮಿಲಿಟರಿ ಕಾರ್ಯಾಚರಣೆಯನ್ನು ಮುಂದುವರಿಸುವ ಸಾಮರ್ಥ್ಯವನ್ನು ಅಮೆರಿಕ ಹೊಂದಿದೆ ಎಂದು ಮಾತನಾಡಿದ್ದಾರೆ.

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಟ್ಟಡದ 43ನೇ ಮಹಡಿಯಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆಧಾರವಾಡ ಕೋರ್ಟ್‌ ಆವರಣದಲ್ಲಿ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ಪರಾರಿಯಾದ ರೌಡಿಶೀಟರ್‌ಟ್ರೆಕ್ಕಿಂಗ್ ವೇಳೆ ಈಜಲು ಹೋದ ಟೆಕ್ಕಿ ನಾಪತ್ತೆರಾಜ್ಯದಲ್ಲಿ ಬರ – 177 ತಾಲೂಕುಗಳಲ್ಲಿ 46,324 ಕೋಟಿ ಬೆಳೆ ನಷ್ಟ , 7,142 ಕೋಟಿ ನೆರವಿಗೆ ಮನವಿಮೈಸೂರು | ನಾಲ್ಕೇ ದಿನಕ್ಕೆ ಮುರಿದು ಬಿದ್ದ ದಸರಾ ದೀಪಾಲಂಕಾರ ಕಟೌಟ್ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಅಕ್ರಮಗಳಿದ್ದರೆ ಸಮಗ್ರ ತನಿಖೆ ನಡೆಸಿ: ಸಿ.ಟಿ ರವಿಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ – ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈಅನ್ಯಾಯದ ವಿರುದ್ಧ ಧ್ವನಿ ಎತ್ತಲು `ಸತ್ಯಾಗ್ರಹ’ ಡಿಜಿಟಲ್ ವೇದಿಕೆ ಆರಂಭಿಸಿದ ರಾಹುಲ್ ಗಾಂಧಿಆರ್ಕೆಸ್ಟ್ರಾ ನೋಡ್ತಿದ್ದ ವೇಳೆ ದುರಂತ – ಲೈಟ್ ಕಂಬ ಬಿದ್ದು ಓರ್ವ ಸಾವು, ಮತ್ತೋರ್ವ ಗಂಭೀರಬರ ಪರಿಸ್ಥಿತಿ ಸಮರ್ಪಕವಾಗಿ ನಿಭಾಯಿಸಲು ನೋಡಲ್ ಅಧಿಕಾರಗಳನ್ನು ನಿಯೋಜಿಸಿ – ಡಿಸಿಗೆ ಹೆಚ್.ಸಿ ಬಾಲಕೃಷ್ಣ ಸೂಚನೆ