LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬರಗಾಲದ ಎಫೆಕ್ಟ್ – ಗಗನಕ್ಕೇರಿದ ‘ಸಕ್ಕರೆ ನಾಡಿನ’ ಬೆಲ್ಲದ ಬೆಲೆ

Advertisement
Advertisement
Advertisement

ಮಂಡ್ಯ: ಮಂಡ್ಯದ ಕಂಪು ಖ್ಯಾತಿಯ ಅಚ್ಚ ಬೆಲ್ಲ ಈಗ ಅಕ್ಷರಶಃ ಬಂಗಾರವಾಗಿದೆ. ರಾಜ್ಯದಲ್ಲಿ ತಾಂಡವವಾಡುತ್ತಿರುವ ಬರಗಾಲದ ಛಾಯೆ ಕಾವೇರಿ ನಾಡಿನ ರೈತರನ್ನು ಹೈರಾಣಾಗಿಸಿದ್ದು, ಇದರ ನೇರ ಬಿಸಿ ಈಗ ಮಾರುಕಟ್ಟೆಯಲ್ಲಿ ಬೆಲ್ಲದ ಬೆಲೆ ಮೇಲೆ ತಟ್ಟಿದೆ. ಇತಿಹಾಸದಲ್ಲೇ ಎಂದೂ ಕಾಣದ ರೀತಿಯಲ್ಲಿ ಮಂಡ್ಯದ ಬೆಲ್ಲದ ದರ ದಾಖಲೆಯ ಏರಿಕೆ ಕಂಡಿದೆ.

ಬೆಲೆ ಜಿಗಿತ:
ಈ ಹಿಂದೆ ಕ್ವಿಂಟಾಲ್‌ಗೆ 4,500 ರೂ. ಇದ್ದ ಬೆಲ್ಲದ ದರ, ಕಳೆದ ಎರಡಮೂರು ದಿನಗಳಲ್ಲಿ ಬರೋಬ್ಬರಿ 2,000 ರೂ. ಏರಿಕೆಯಾಗಿ ಈಗ 6,500 ರೂ.ನಿಂದ 7,000 ರೂ.ವರೆಗೆ ಹರಾಜಾಗುತ್ತಿದೆ. 

ನೀರಿನ ಕೊರತೆ:
ಕಳೆದ ಆರು ತಿಂಗಳಿಂದ ಮಳೆಯಿಲ್ಲದೆ ಹಾಗೂ ಕಬ್ಬಿಗೆ ನೀರಿನ ಪೂರೈಕೆಯಾಗದೆ ಗದ್ದೆಗಳು ಒಣಗಿ ನಿಂತಿವೆ. ಪರಿಣಾಮವಾಗಿ ಕಬ್ಬಿನ ಇಳುವರಿ ಅರ್ಧದಷ್ಟು ಕುಸಿದಿದೆ. ಗಾಣಗಳಿಗೆ ಕಬ್ಬು ಸಿಗದೆ ಉತ್ಪಾದನೆ ಸಂಪೂರ್ಣ ಕುಂಠಿತಗೊಂಡಿದೆ. ಹಿಂದೆ ಪ್ರತಿದಿನ 10 ರಿಂದ 12 ಲಾರಿಗಳಷ್ಟು ಮಾರುಕಟ್ಟೆಗೆ ಹೋಗುತ್ತಿದ್ದ ಬೆಲ್ಲದ ಪೂರೈಕೆ, ಈಗ ಅರ್ಧದಷ್ಟು ಇಳಿಕೆಯಾಗಿದೆ. 

ವ್ಯಾಪಾರಸ್ಥರ ಆಶ್ಚರ್ಯ:
ಬೆಲ್ಲದ ಮಾರುಕಟ್ಟೆ ಪ್ರಾರಂಭವಾದ ದಿನದಿಂದಲೂ ಈ ಮಟ್ಟಿಗೆ ದರ ಏರಿಕೆಯಾಗಿರಲಿಲ್ಲ. ಈ ಸೀಸನ್‌ನಲ್ಲಿ ಬೆಲೆ ತಗ್ಗಬೇಕಿತ್ತಾದರೂ, ಭಾರೀ ಏರಿಕೆ ಕಂಡಿರುವುದು ಇದೇ ಮೊದಲು ಎಂದು ವ್ಯಾಪಾರಸ್ಥರು ಆಶ್ಚರ್ಯ ವ್ಯಕ್ತಪಡಿಸಿದ್ದಾರೆ.

ಮಳೆಯಾಶ್ರಿತ ಹಾಗೂ ನೀರಾವರಿಯಿಲ್ಲದೆ ಒಣಗಿದ ಕಬ್ಬಿನ ಬೆಳೆ ರೈತರಿಗೆ ನಷ್ಟವನ್ನುಂಟು ಮಾಡಿದ್ದರೆ, ಕಚ್ಚಾ ವಸ್ತು ಸಿಗದೆ ಬೆಲ್ಲದ ದರ ಗಗನಕ್ಕೇರಿರುವುದು ಸಾಮಾನ್ಯ ಜನರಿಗೂ ಬಿಸಿ ತಟ್ಟುವಂತೆ ಮಾಡಿದೆ. 

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಂಗಳೂರು: 200 ರೂ. ಕೊಡ್ಲಿಲ್ಲ ಅಂತ ಮಂಗಳಮುಖಿ ಬರ್ಬರ ಹತ್ಯೆ – ಆರೋಪಿ ಅರೆಸ್ಟ್‌ಪತ್ನಿ ಕುಟುಂಬಸ್ಥರಿಂದ ಥಳಿತ; ಸಾಫ್ಟ್‌ವೇರ್‌ ಕಂಪನಿಯಲ್ಲಿ ವರ್ಷಕ್ಕೆ 60 ಲಕ್ಷ ಪ್ಯಾಕೇಜ್‌ ಹೊಂದಿದ್ದ ಟೆಕ್ಕಿ ಸಾವು105 ವರ್ಷದ ಕೊಲೆ ಅಪರಾಧಿಗೆ ಜೀವಾವಧಿ ಶಿಕ್ಷೆಯಿಂದ ಮುಕ್ತಿ ನೀಡಿದ ಸುಪ್ರೀಂಯುವ ಮತದಾರರತ್ತ ಬಿಜೆಪಿ ಚಿತ್ತ – ‘Gen Z’ ಸಂಪರ್ಕಕ್ಕೆ ವಿಶೇಷ ತಂಡಯುವತಿ ಮೇಲೆ ಅತ್ಯಾಚಾರ ಎಸಗಿ ಕೊಲೆ – ಪ್ರಮುಖ ಆರೋಪಿ ನ್ಯಾಯಾಂಗ ಬಂಧನಕ್ಕೆ, ನಾಲ್ವರು ಪೇದೆ ಅಮಾನತುವಾಲ್ಮೀಕಿ ನಿಗಮದಿಂದ ಹಿಡಿದು ರಸ್ತೆ ಗುಂಡಿ ಮುಚ್ಚೋಕೂ ಕೋಟ್ಯಂತರ ಹಣ ಲೂಟಿ – ಛಲವಾದಿಕೇಂದ್ರ ಸಚಿವರಾಗಿ ಟೋಲ್‌ ಕಟ್ಟಬೇಡಿ ಅಂತ ಪ್ರಚೋದನೆ ಕೊಡೋದು ಸರಿಯಲ್ಲ: ಪ್ರಿಯಾಂಕ್ ಖರ್ಗೆ ಕಿಡಿರಾಜ್ಯದಲ್ಲಿ ಬರ ಘೋಷಿಸಿ, 10 ಸಾವಿರ ಕೋಟಿ ಪ್ಯಾಕೇಜ್ ನೀಡಿ: ರವಿಕುಮಾರ್ ಆಗ್ರಹಇದು ದಲಿತರನ್ನು ರಕ್ಷಿಸದ ಸರ್ಕಾರ: ಛಲವಾದಿ ಕಿಡಿಬರಗಾಲದ ಎಫೆಕ್ಟ್ – ಗಗನಕ್ಕೇರಿದ ‘ಸಕ್ಕರೆ ನಾಡಿನ’ ಬೆಲ್ಲದ ಬೆಲೆ