LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ವಿಜಯಪುರದಲ್ಲಿ ಕೋಚ್ ಡಿಪೋ ಸ್ಥಾಪಿಸಿ: ವೈಷ್ಣವ್, ಸೋಮಣ್ಣಗೆ ಎಂ ಬಿ ಪಾಟೀಲ್ ಪತ್ರ

Advertisement

ಬೆಂಗಳೂರು:ವಿಜಯಪುರ ಜಿಲ್ಲಾ ಕೇಂದ್ರದಲ್ಲಿ ರೈಲ್ವೆ ಸಂಪರ್ಕ ಬಲವರ್ಧನೆಗಾಗಿ ಕೋಚ್ ಡಿಪೋ ಸ್ಥಾಪಿಸಬೇಕು ಮತ್ತು ರೈಲು ನಿಲ್ದಾಣದಲ್ಲಿ ಇನ್ನೊಂದು ಆಗಮನ ಮತ್ತು ನಿರ್ಗಮನ ದ್ವಾರವನ್ನು ಅಭಿವೃದ್ಧಿ ಪಡಿಸಬೇಕೆಂದು ಕೋರಿ ಕೇಂದ್ರ ರೈಲ್ವೆ ಸಹಾಯಕ ಸಚಿವ ವಿ.ಸೋಮಣ್ಣನವರ  ಜೊತೆ ಚರ್ಚಿಸಲಾಗಿದೆ. ಈ ಸಂಬಂಧವಾಗಿ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಅವರಿಗೂ ಪತ್ರ ಬರೆಯಲಾಗಿದೆ ಎಂದು ಮೂಲಸೌಕರ್ಯ ಅಭಿವೃದ್ಧಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎಂ ಬಿ ಪಾಟೀಲ್‌ ಹೇಳಿದ್ದಾರೆ.

 

ಈ ಬಗ್ಗೆ ಮಾತನಾಡಿರುವ ಅವರು, ಈ ವಿಚಾರ ಕುರಿತು ಸೋಮಣ್ಣನವರಿಗೂ ಪತ್ರ ಬರೆಯಲಾಗಿದೆ. ಹಿಂದೆ ವಿಜಯಪುರ ರೈಲು ನಿಲ್ದಾಣದಆವರಣದಲ್ಲೇ ಇದ್ದ ಗೂಡ್ಸ್ ಶೆಡ್ಡನ್ನು ಈಗ ಅಲಿಯಾಬಾದಿಗೆ ಸ್ಥಳಾಂತರಿಸಲಾಗಿದೆ. ಹೀಗಾಗಿ ಕೋಚ್ ಡಿಪೋ ಸ್ಥಾಪನೆಗೆ ಜಾಗದ ಕೊರತೆಯೇನೂ ಇಲ್ಲ. ಇಲ್ಲಿ ಕೋಚ್ ಡಿಪೋ ಬಂದರೆ ಇದನ್ನು ನಿರ್ವಹಣಾ ಹಬ್ ಆಗಿ ಬೆಳೆಸಬಹುದು. ಜತೆಗೆ ವಿಜಯಪುರ ಮತ್ತು ಉತ್ತರ ಕರ್ನಾಟಕದ (North Karnataka) ಪ್ರದೇಶಗಳಿಗೆ ಮತ್ತಷ್ಟು ಪರಿಣಾಮಕಾರಿಯಾಗಿ ರೈಲು ಸಂಪರ್ಕ ಒದಗಿಸಬಹುದು ಎಂದಿದ್ದಾರೆ. 

ವಿಜಯಪುರವು ಚಾರಿತ್ರಿಕ ಸ್ಥಳವಾಗಿದ್ದು, ವರ್ಷವಿಡೀ ಲಕ್ಷಾಂತರ ಪ್ರವಾಸಿಗರನ್ನು ಸೆಳೆಯುತ್ತಿರುವ ಪ್ರವಾಸೋದ್ಯಮ ತಾಣವಾಗಿದೆ. ಅದರಲ್ಲೂ ವಾರಾಂತ್ಯ, ಹಬ್ಬ ಹರಿದಿನಗಳು ಮತ್ತು ರಜೆ ದಿನಗಳಲ್ಲಿ ಜನದಟ್ಟಣೆ ಸೃಷ್ಟಿಯಾಗುತ್ತದೆ. ಆದ್ದರಿಂದ ವಿಜಯಪುರ ರೈಲು ನಿಲ್ದಾಣದಲ್ಲಿ ಹೆಚ್ಚುವರಿಯಾಗಿ ಇನ್ನೊಂದು ಆಗಮನ-ನಿರ್ಗಮನ ದ್ವಾರವನ್ನು ಸ್ಥಾಪಿಸಬೇಕು ಎಂದು ಪಾಟೀಲ ತಮ್ಮ ಪತ್ರದಲ್ಲಿ ಮನವಿ ಮಾಡಿದ್ದಾರೆ. 

ಕಳೆದ ಸೋಮವಾರ ನಡೆದ ರೈಲ್ವೆ ಇಲಾಖೆಯ ಕಾರ್ಯಕ್ರಮದ ಸಂದರ್ಭದಲ್ಲಿ ಈ ವಿಚಾರಗಳನ್ನು ಸೋಮಣ್ಣ ಅವರೊಂದಿಗೆ ಚರ್ಚಿಸಲಾಗಿದೆ. ಅವರಿಂದ ಸಕಾರಾತ್ಮಕ ಸ್ಪಂದನ ಸಿಕ್ಕಿದೆ. ಈ ಬೇಡಿಕೆಗಳು ಈಡೇರಿದರೆ, ಇನ್ನು ಕೆಲವೇ ತಿಂಗಳಲ್ಲಿ ಆರಂಭವಾಗಲಿರುವ ಬೆಂಗಳೂರು-ವಿಜಯಪುರ ವಂದೇ ಭಾರತ್ ಎಕ್ಸಪ್ರೆಸ್ ಸೇವೆಯ ನಿರ್ವಹಣೆ ಕೂಡ ಸುಲಭವಾಗಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಸವೇಶ್ವರ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಕನ್ನಡ ಪತ್ರಿಕಾ ದಿನಾಚರಣೆ ಆಚರಣೆಹಸು, ಕರುಗಳ ವಧೆ ನಿಷೇಧಿಸಿ ಹೈಕೋರ್ಟ್ ಆದೇಶ – ಸುಪ್ರೀಂಗೆ ಮೇಲ್ಮನವಿ ಸಲ್ಲಿಸಿದ ತ.ನಾಡು ಸರ್ಕಾರಆಟೋ ಚಾಲಕರಿಗೆ ಸಿಹಿ ಸುದ್ದಿ: ಎಲ್‌ಪಿಜಿ ದರ ಬರೋಬ್ಬರಿ 10 ರೂ. ಇಳಿಕೆಪ್ರಿಯತಮೆ ಹಿಂದೂ… ನಾನು ಮುಸ್ಲಿಂ ಆಗಿ ಹುಟ್ಟಿದ್ದೇ ತಪ್ಪಾ? – ಸಂಜೀತ್ ಆಲಿ ಡೆತ್ ನೋಟ್ಕಾರಹುಣ್ಣಿಮೆ ಮುಂಗಾರು ಹಬ್ಬ: ಭಾರದ ಕಲ್ಲು ಎಳೆದು ಎತ್ತುಗಳ ಶಕ್ತಿ ಪ್ರದರ್ಶನವಿಜಯಪುರದಲ್ಲಿ ಕೋಚ್ ಡಿಪೋ ಸ್ಥಾಪಿಸಿ: ವೈಷ್ಣವ್, ಸೋಮಣ್ಣಗೆ ಎಂ ಬಿ ಪಾಟೀಲ್ ಪತ್ರಡಿಕೆಶಿ ಕನಸಿನ ಹೇಮಾವತಿ ಎಕ್ಸ್‌ಪ್ರೆಸ್ ಕೆನಾಲ್‌ಗೆ ಕಾಂಗ್ರೆಸ್ ಶಾಸಕ ಎಸ್‌ಆರ್ ಶ್ರೀನಿವಾಸ್ ವಿರೋಧವೆನೆಜುವೆಲಾದಲ್ಲಿ ಮೃತಪಟ್ಟ ಭಾರತೀಯ ನಾವಿಕನ ದೇಹದಲ್ಲಿ ಮಿದುಳು, ಶ್ವಾಸಕೋಶಗಳು, ಹೃದಯವೇ ನಾಪತ್ತೆ!ಸ್ವಯಂಪ್ರೇರಿತವಾಗಿ ತೆರವುಗೊಳಿಸಿ, ಇಲ್ಲದಿದ್ದರೆ ಕಠಿಣ ಕ್ರಮ: ಫುಟ್‌ಪಾತ್ ಅತಿಕ್ರಮಣದಾರರಿಗೆ ಕೃಷ್ಣಬೈರೇಗೌಡ ಎಚ್ಚರಿಕೆಹೆಂಡತಿ ದಪ್ಪಗಿದ್ದಾಳೆಂದು ಕತ್ತು ಹಿಸುಕಿ ಕೊಲೆಗೈದ ಪತಿ – ವರದಕ್ಷಿಣೆ ಕಿರುಕುಳ ಆರೋಪ