LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮಾಜಿ ಎಂಎಲ್‌ಸಿ ಕಿಡ್ನ್ಯಾಪ್‌ ಕೇಸ್ – 3 ಕೋಟಿ ಹಣಕ್ಕೆ ಬೇಡಿಕೆಯಿಟ್ಟಿದ್ದ ನಾಲ್ವರು ಅರೆಸ್ಟ್

ಆನೇಕಲ್: ವಿಧಾನ ಪರಿಷತ್ ಮಾಜಿ ಸದಸ್ಯ ದಯಾನಂದ ರೆಡ್ಡಿ  ಅವರನ್ನು ಅಪಹರಿಸಿ 3 ಕೋಟಿ ಹಣಕ್ಕೆ ಬೇಡಿಕೆ ಇಟ್ಟಿದ್ದ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಕೇರಳ ಮೂಲದ ಪ್ರವೀಣ್, ರೋಮಿಯೋ ಮಾರ್ಟಿನ್, ಅಶಿಕ್ ಮತ್ತು ಆದರ್ಶ್ ಎಂಬ ನಾಲ್ವರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. 

ಈ ಸಂಬಂಧ ಅತ್ತಿಬೆಲೆ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು. ಬಳಿಕ ಪ್ರಕರಣವನ್ನು ಸೂರ್ಯನಗರ ಪೊಲೀಸ್ ಠಾಣೆಗೆ ವರ್ಗಾಯಿಸಲಾಗಿತ್ತು. ತನಿಖೆ ನಡೆಸಿದ ಪೊಲೀಸರಿಗೆ ಕಿಡ್ನಾಪ್ ಮಾಡಿ ಕರೆದೊಯ್ಯುತ್ತಿರುವ ಸಿಸಿಟಿವಿ ದೃಶ್ಯ ಲಭ್ಯವಾಗಿದೆ. ಸದ್ಯ ಪೊಲೀಸರು ನಾಲ್ವರನ್ನು ಆರೋಪಿಗಳನ್ನು ಬಂಧಿಸಿ, ಕಿಡ್ನಾಪ್‌ಗೆ ಬಳಸಿದ್ದ ಕಾರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಸದ್ಯ ಆರೋಪಿಗಳ ವಿಚಾರಣೆ ನಡೆಯುತ್ತಿದೆ.


ಮಂಗಳವಾರ ತಡರಾತ್ರಿ 12:15ರ ಸುಮಾರಿಗೆ ಗೋಲ್ಡ್ ಕಾಯಿನ್ ಕ್ಲಬ್‌ನಿಂದ ಹೊರಟಿದ್ದ ಮಾಜಿ ಎಂಎಲ್‌ಸಿ ದಯಾನಂದರೆಡ್ಡಿ ಅವರ ಕಾರನ್ನು ಹಿಲಲಿಗೆ ಗ್ರಾಮದ ಸಮೀಪ ಬೈಕ್‌ನಲ್ಲಿ ಬಂದ ಇಬ್ಬರು ಅಡ್ಡಗಟ್ಟಿದ್ದಾರೆ. ನಿಮಗೆ ಗಿಫ್ಟ್ ಬಂದಿದೆ ಎಂದು ಹೇಳಿ ಕಾಟನ್ ಬಾಕ್ಸ್ ತೋರಿಸಿದ್ದಾರೆ. ಕಾರಿನ ಡೋರ್ ಲಾಕ್ ತೆರೆದ ತಕ್ಷಣ ಓರ್ವ ವ್ಯಕ್ತಿ ಕಾರಿನೊಳಗೆ ನುಗ್ಗಿದ್ದಾನೆ. ಬಳಿಕ ಗನ್ ತೋರಿಸಿ ತಾನು ಹೇಳಿದ ಕಡೆಗೆ ಕಾರು ಚಲಾಯಿಸುವಂತೆ ಸೂಚಿಸಿದ್ದಾನೆ. 

 

ಈ ವೇಳೆ ಕೆಂಪು ಬಣ್ಣದ ಕಾರಿನಲ್ಲಿ ಮತ್ತಿಬ್ಬರು ಹಿಂಬಾಲಿಸಿದ್ದಾರೆ. ಬಳಿಕ ಅತ್ತಿಬೆಲೆ ಕೆಹೆಚ್‌ಬಿ ಬಡಾವಣೆ ಸಮೀಪ ಕರೆದೊಯ್ದು ಬೆದರಿಕೆ ಹಾಕಲಾಗಿದೆ. ನಿನ್ನನ್ನು ಕೊಲ್ಲಲು 10 ಕೋಟಿ ರೂ. ಸುಪಾರಿ ನೀಡಿದ್ದಾರೆ ಎಂದು ಹೇಳಿ ಕುತ್ತಿಗೆಗೆ ಗನ್ ಇಟ್ಟು ಜೀವ ಬೆದರಿಕೆ ಹಾಕಿದ್ದಾರೆ.

ಈ ವೇಳೆ ಹಣ ನಾನೇ ಕೊಡುತ್ತೇನೆ, ಕೊಲ್ಲಬೇಡಿ ಎಂದು ದಯಾನಂದ ರೆಡ್ಡಿ ಮನವಿ ಮಾಡಿಕೊಂಡಿದ್ದಾರೆ. ಮೊದಲು 3 ಕೋಟಿ ರೂ. ಬೇಡಿಕೆ ಇಟ್ಟಿದ್ದ ಅಪಹರಣಕಾರರು, ಬಳಿಕ 2 ಕೋಟಿ ರೂ.ಗೆ ಒಪ್ಪಿಕೊಂಡಿದ್ದಾರೆ. ಸದ್ಯ ಹಣ ಇಲ್ಲ, ಬೆಳಗ್ಗೆ ಬ್ಯಾಂಕ್ ತೆರೆದ ಬಳಿಕ ಹಣ ನೀಡುವುದಾಗಿ ದಯಾನಂದರೆಡ್ಡಿ ಮನವಿ ಮಾಡಿದ್ದಾರೆ. ಹಣ ಡ್ರಾ ಮಾಡಿದ ಬಳಿಕ ಕರೆ ಮಾಡುವಂತೆ ಸೂಚಿಸಿ ಆರೋಪಿಗಳು ಅವರನ್ನು ಬಿಟ್ಟು ಕಳುಹಿಸಿದ್ದಾರೆ. ಈ ಸಂಬಂಧ ದಯಾನಂದರೆಡ್ಡಿ ಅತ್ತಿಬೆಲೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

Advertisement

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪತಿ ಸಾವಿನಿಂದ ಖಿನ್ನತೆ – ಇಬ್ಬರು ಮಕ್ಕಳನ್ನು ಕತ್ತು ಹಿಸುಕಿ ಕೊಂದ ತಾಯಿನೆಹರು ದಾಖಲೆ ಮುರಿದು ಹೊಸ ಇತಿಹಾಸ ಸೃಷ್ಟಿಸಲು ಮುಂದಾದ ಮೋದಿದ್ವೇಷ ಭಾಷಣ ಆರೋಪ – ಬಿಜೆಪಿ ಮಾಜಿ ಶಾಸಕ ದತ್ತಾತ್ರೇಯ ಪಾಟೀಲ್ ರೆವೂರ್ ವಿರುದ್ಧ ಎಫ್‌ಐಆರ್ಭಾರೀ ಮಳೆಗೆ ನೆಲಕ್ಕೆ ಬಿದ್ದ ವಿದ್ಯುತ್‌ ತಂತಿಯಿಂದ ಶಾಕ್‌ – 8 ವರ್ಷದ ಬಾಲಕ ಸಾವುಮಾಜಿ ಎಂಎಲ್‌ಸಿ ಕಿಡ್ನ್ಯಾಪ್‌ ಕೇಸ್ – 3 ಕೋಟಿ ಹಣಕ್ಕೆ ಬೇಡಿಕೆಯಿಟ್ಟಿದ್ದ ನಾಲ್ವರು ಅರೆಸ್ಟ್ಪ್ರವಾಸಿಗರ ವಿರುದ್ಧವೇ ಎಫ್‌ಐಆರ್ – ಎಡವಟ್ಟು ಮಾಡಿಕೊಂಡ ಪೊಲೀಸರುಯೋಗಿ ಜೀ ನಮ್ಮನ್ನು ಕ್ಷಮಿಸಿ – ಎನ್‌ಕೌಂಟರ್ ಭಯಕ್ಕೆ ಠಾಣೆಯಲ್ಲಿ ಪ್ರಮಾಣ ಮಾಡಿದ 150 ರೌಡಿಗಳುನಟಿ ಶುಭಾ ಪೂಂಜಾ ವೈವಾಹಿಕ ಜೀವನದಲ್ಲಿ ಬಿರುಗಾಳಿ – ವಿಚ್ಛೇದನಕ್ಕೆ ಮೊರೆ ಹೋದ ದಂಪತಿಅಧಿಕಾರ ಬೇಕಾದವರು ಡಿಕೆಶಿ ಹಿಂದೆ ಹೋಗಿ, ಸಂಘಟನೆ ಮಾಡೋರು ನನ್ನ ಜೊತೆ ಬನ್ನಿ – ಬಿ.ಕೆ ಹರಿಪ್ರಸಾದ್ಟಿಸಿಎಸ್ ಬಳಿಕ ವಿಪ್ರೋದಲ್ಲಿ ಭುಗಿಲೆದ್ದ ಕಾರ್ಪೋರೆಟ್ ಜಿಹಾದ್ – ಕಂಪನಿ ವಿರುದ್ದ ಮಾಜಿ ಉದ್ಯೋಗಿ ಗಂಭೀರ ಆರೋಪ