LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

66 ರೌಡಿಗಳಿಗೆ ಮುಕ್ತಿ – ಮೇಲ್ಮನವಿ ಸಲ್ಲಿಸುತ್ತೇವೆ ಎಂದ ಕಮಿಷನರ್

Advertisement
Advertisement

ಬೆಂಗಳೂರು: ಪೊಲೀಸ್ ಇಲಾಖೆ ದಾಖಲೆ ನಿರ್ವಹಣೆಯ ಲೋಪದಿಂದ ರೌಡಿಪಟ್ಟಿಯಿಂದ 66 ರೌಡಿಶೀಟರ್‌ಗಳನ್ನು ಕೈಬಿಟ್ಟಿರುವ ವಿಚಾರ ಭಾರೀ ಚರ್ಚೆಗೆ ಗ್ರಾಸವಾಗಿದ್ದು, ಈ ಕುರಿತು ನಗರ ಪೊಲೀಸ್ ಆಯುಕ್ತ  ಸೀಮಂತ್ ಕುಮಾರ್ ಸಿಂಗ್  ಪ್ರತಿಕ್ರಿಯಿಸಿದ್ದಾರೆ.

7 ರೌಡಿಶೀಟರ್‌ಗಳನ್ನು ಯಾವ ಕಾರಣಕ್ಕೆ ಕೈಬಿಡಲಾಗಿದೆ ಎಂಬುದರ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ. ಈ ಪ್ರಕ್ರಿಯೆಯಲ್ಲಿ ಪೊಲೀಸ್ ಇಲಾಖೆಯಿಂದ ಯಾವುದೇ ಕರ್ತವ್ಯಲೋಪ ಆಗಿದೆಯೇ ಎಂಬುದನ್ನೂ ತನಿಖೆ ಮಾಡಲಾಗುತ್ತದೆ. ರೌಡಿಶೀಟರ್‌ಗಳ ಹೆಸರನ್ನು ಪಟ್ಟಿಯಿಂದ ಕೈಬಿಟ್ಟಿರುವ ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸುವ ಕುರಿತು ಚರ್ಚೆ ನಡೆಯುತ್ತಿದೆ. ಈ ಸಂಬಂಧ ಪೊಲೀಸ್ ಮಹಾನಿರ್ದೇಶಕರಿಗೆ (ಡಿಜಿಪಿ) ಮನವಿ ಸಲ್ಲಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಆಯುಕ್ತರು ತಿಳಿಸಿದ್ದಾರೆ.

ಈ ಹಿಂದೆ ಪೊಲೀಸ್ ದೂರು ಪ್ರಾಧಿಕಾರವು ಸೈಲೆಂಟ್ ಸುನಿಲ್, ಒಂಟೆ ರೋಹಿತ್ ಸೇರಿದಂತೆ ಒಟ್ಟು 66 ರೌಡಿಶೀಟರ್‌ಗಳನ್ನು ರೌಡಿಪಟ್ಟಿಯಿಂದ ಕೈಬಿಡುವಂತೆ ಆದೇಶಿಸಿತ್ತು. ಹೈಕೋರ್ಟ್ ನೀಡಿದ್ದ ಮಾರ್ಗಸೂಚಿಗಳ ಪ್ರಕಾರ ಅಗತ್ಯ ದಾಖಲೆಗಳು ಮತ್ತು ಸಮರ್ಪಕ ಕಾರಣಗಳನ್ನು ಪೊಲೀಸರು ಸಲ್ಲಿಸದಿರುವುದೇ ಈ ನಿರ್ಧಾರಕ್ಕೆ ಪ್ರಮುಖ ಕಾರಣ ಎನ್ನಲಾಗಿದೆ. 

 

2022ರಲ್ಲಿ ಹೈಕೋರ್ಟ್  ರೌಡಿಶೀಟ್ ತೆರೆಯುವ ಹಾಗೂ ಮುಂದುವರಿಸುವ ಪ್ರಕ್ರಿಯೆಗೆ ಸ್ಪಷ್ಟ ಮಾರ್ಗಸೂಚಿಗಳನ್ನು ನೀಡಿತ್ತು. ರೌಡಿಪಟ್ಟಿಗೆ ಹೆಸರು ಸೇರಿಸುವುದು, ಮುಂದುವರಿಸುವುದು ಅಥವಾ ಕೈಬಿಡುವ ಪ್ರತಿಯೊಂದು ಹಂತದಲ್ಲೂ ಸೂಕ್ತ ದಾಖಲೆ ಮತ್ತು ಕಾನೂನುಬದ್ಧ ಪ್ರಕ್ರಿಯೆ ಕಡ್ಡಾಯ ಎಂದು ಸೂಚಿಸಿತ್ತು. ಆದರೆ ಹಲವು ಪ್ರಕರಣಗಳಲ್ಲಿ ಈ ನಿಯಮಗಳನ್ನು ಸಮರ್ಪಕವಾಗಿ ಪಾಲಿಸಿಲ್ಲ ಎಂಬ ಆರೋಪ ಕೇಳಿಬಂದಿದೆ.

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುಂಗಾರು ಕೊರತೆ ಎಫೆಕ್ಟ್: ಹಾರಂಗಿ ಜಲಾಶಯ ಒಳಹರಿವು ತೀವ್ರ ಕುಸಿತಅಪ್ರಾಪ್ತ ಅಕ್ಕ-ತಂಗಿ ಮೇಲೆ ಅತ್ಯಾಚಾರ – ಪೋಕ್ಸೊ ಪ್ರಕರಣ ದಾಖಲು, ಕಿರಾತಕ ಅರೆಸ್ಟ್‌66 ರೌಡಿಗಳಿಗೆ ಮುಕ್ತಿ – ಮೇಲ್ಮನವಿ ಸಲ್ಲಿಸುತ್ತೇವೆ ಎಂದ ಕಮಿಷನರ್ಬಾಲಕಿ ವೆನ್ನಿಲಾ ಕೊಲೆ ಕೇಸ್‌ – ಪ್ರಿಯಾಂಕಾಳ ಸುಳ್ಳುಪತ್ತೆ ಪರೀಕ್ಷೆಗೆ ಸಿದ್ಧತೆಪ್ರಿಯಾಂಕ್ ಖರ್ಗೆ RSS ಬಗ್ಗೆ ತಿಳಿದುಕೊಳ್ಳಬೇಕಾದ್ರೆ ಶಾಖೆಗೆ ಬರಲಿ: ಸಿ.ಟಿ ರವಿಬಿಡದಿ ಟೌನ್ ಶಿಪ್‌ಗೆ ಪ್ರಧಾನಿ ಮೋದಿ ಗ್ರೀನ್ ಸಿಗ್ನಲ್ ಕೊಟ್ಟಿದ್ದರೆ ದಾಖಲಾತಿ ಬಹಿರಂಗ ಮಾಡಿ- ಛಲವಾದಿ ನಾರಾಯಣಸ್ವಾಮಿಜೂ.22 ರವರೆಗೆ ದೇಶದಲ್ಲಿ ಟೆಲಿಗ್ರಾಂ ನಿಷೇಧ – ನೀಟ್‌ ಮರು ಪರೀಕ್ಷೆಗೂ ಮುನ್ನ ಕೇಂದ್ರ ಆದೇಶನಮ್ಮ ದೇಶದಲ್ಲಿ ಶ್ರೀರಾಮನೇ ಲೆಕ್ಕ ಕೊಡಬೇಕು, ರಾಮನ ಹೆಸ್ರಲ್ಲಿ ರಾಜಕೀಯ ಮಾಡಿದವರು ಲೆಕ್ಕ ಕೊಡಬಾರದ?: ಪ್ರಿಯಾಂಕ್‌ ಖರ್ಗೆಧರ್ಮಸ್ಥಳ ಬುರುಡೆ ಕೇಸ್‌ – ತನಿಖಾ ತಂಡದ ಕಾರು ಚಾರ್ಮಾಡಿಯಲ್ಲಿ ಪಲ್ಟಿಟೈರ್ ಬ್ಲಾಸ್ಟ್ ಆಗಿ ಬಸ್ಸಿಗೆ ಟಿಪ್ಪರ್ ಡಿಕ್ಕಿ – ಮೂವರು ದುರ್ಮರಣ, 10 ಮಂದಿಗೆ ಗಾಯ