LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಉದ್ಯೋಗ ಖಾತ್ರಿ ನಕಲಿ ಜಿಪಿಎಸ್ ಫೋಟೋ – ತನಿಖೆಗೆ ಈಶ್ವರ ಖಂಡ್ರೆ ಸೂಚನೆ

Advertisement

ಬೆಂಗಳೂರು: ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ  ಕೂಲಿ ಕಾರ್ಮಿಕರ ನಕಲಿ ಜಿಪಿಎಸ್ ಫೋಟೋ  ತೆಗೆದು ವಂಚಿಸಲಾಗುತ್ತಿದೆ ಎಂಬ ವರದಿ ಹಿನ್ನೆಲೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಖಂಡ್ರೆ  ತನಿಖೆಗೆ ಆದೇಶ ನೀಡಿದ್ದಾರೆ.

ಇಲಾಖೆಯ ಕಾರ್ಯದರ್ಶಿಗಳಿಗೆ ಈ ಸಂಬಂಧ ಲಿಖಿತ ಸೂಚನೆ ನೀಡಿರುವ ಅವರು, ಕೊಪ್ಪಳ ಜಿಲ್ಲೆಯಲ್ಲಿ ಮೇಟಿಗಳು ಕಾಮಗಾರಿ ನಡೆಯುತ್ತಿರುವ ಸ್ಥಳಕ್ಕೆ ಕೆಲಸಗಾರರು ಹೋಗದಿದ್ದರೂ ವೀಡಿಯೋ ಚಿತ್ರೀಕರಣ ಮಾಡಿಸಿ ಆ ವೀಡಿಯೋ ಪ್ಲೇ ಆಗುತ್ತಿರುವಾಗ ಮತ್ತೊಂದು ಮೊಬೈಲ್‌ನಲ್ಲಿ ಜಿಪಿಎಸ್ ಫೋಟೋ ತೆಗೆಸಿ ವಂಚಿಸುತ್ತಿದ್ದಾರೆ ಎಂದು ಮಾಧ್ಯಮದಲ್ಲಿ ವರದಿಯಾಗಿದ್ದು, ಈ ಬಗ್ಗೆ ಜಂಟಿ ನಿರ್ದೇಶಕರ ದರ್ಜೆಯ ಅಧಿಕಾರಿಯಿಂದ ತನಿಖೆ ನಡೆಸಿ 4 ದಿನಗಳ ಒಳಗಾಗಿ ವರದಿ ಸಲ್ಲಿಸಲು ಸೂಚಿಸಿದ್ದಾರೆ. 

ಈ ರೀತಿ ನಕಲಿ ಜಿಪಿಎಸ್ ಫೋಟೋ ತೆಗೆದು ಪ್ರತಿನಿತ್ಯ 20-30 ಸಾವಿರ ರೂ. ವಂಚನೆ ಮಾಡುತ್ತಿದ್ದಾರೆ, ಕೆಲಸ ಮಾಡದೆಯೇ ಹಾಜರಾತಿ ಹಾಕಿಸುತ್ತಿದ್ದಾರೆ ಎಂದು ಮಾಧ್ಯಮದಲ್ಲಿ ವರದಿಯಾಗಿತ್ತು. ಇದನ್ನು ಗಂಭೀರವಾಗಿ ಪರಿಗಣಿಸಿರುವ ಈಶ್ವರ ಖಂಡ್ರೆ, ವರದಿಯಲ್ಲಿ ಅಂಶ ಸತ್ಯವಾಗಿದ್ದಲ್ಲಿ, ತಪ್ಪಿತಸ್ಥರ ವಿರುದ್ಧ ಕೈಗೊಳ್ಳಬೇಕಾದ ಶಿಫಾರಸಿನೊಂದಿಗೆ ವಾಸ್ತವಾಂಶದ ವರದಿಯನ್ನು ಸಲ್ಲಿಸುವಂತೆ ಮತ್ತು ಈ ರೀತಿ ತಂತ್ರಜ್ಞಾನವನ್ನೇ ವಂಚಿಸಿ ಹಾಜರಾತಿ ಹಾಕದಂತೆ ತಡೆಯಲು ಏನು ಕ್ರಮ ಕೈಗೊಳ್ಳಬಹುದು ಎಂಬ ಬಗ್ಗೆ ತಜ್ಞರೊಂದಿಗೆ ಸಮಾಲೋಚಿಸಿ ಉಪಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಿದ್ದಾರೆ. 

ಯಂತ್ರಗಳ ಮೂಲಕ ಕಾಮಗಾರಿ ನಡೆಸಿ, ಕೂಲಿ ಕಾರ್ಮಿಕರ ಅಕ್ರಮ ಹಾಜರಾತಿ ಹಾಕಿಸುವುದನ್ನು ತಪ್ಪಿಸಲು ವಿಬಿಜಿ ರಾಮ್ ಜಿಯಡಿ ಕೂಲಿಗೆ ಬರುವವರು ಕಾಮಗಾರಿ ನಡೆಯುವ ಸ್ಥಳದಲ್ಲಿ ಕೆಲಸ ಮಾಡುತ್ತಿರುವ ಜಿಪಿಎಸ್ ಫೋಟೋ ತೆಗೆದು ಎನ್‌ಎಂಎಂಎಸ್ ಆ್ಯಪ್‌ನಲ್ಲಿ ಅಪ್ಲೋಡ್ ಮಾಡುವುದನ್ನು ಕಡ್ಡಾಯ ಮಾಡಲಾಗಿದೆ. ಆದರೆ ಕೆಲವರು ಈ ತಂತ್ರಜ್ಞಾನಕ್ಕೆ ಸವಾಲು ಹಾಕಿದ್ದು, ಸರ್ಕಾರ ಈ ಬಗ್ಗೆ ಕ್ರಮಕ್ಕೆ ಮುಂದಾಗಿದೆ. 

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಾಂಬ್ರಾ ವಿಮಾನ ನಿಲ್ದಾಣ ಮೇಲ್ದರ್ಜೆ ಸೇರಿಸಲು ಭೂ ಸ್ವಾದಿ ನಿನಗಾಗಿ  ಅಭಿವೃದ್ಧಿ ಅಧಿಕಾರಿ ಭೂಮಾಲೀಕರಗಳ ಜೊತೆ ಸಭೆಗಾಂಧಿ ಜಯಂತಿಯ ನಿಮಿತ್ತ ನಿಲಜಿ ಗ್ರಾಮ ಪಂಚಾಯತ್ ಸ್ವಚ್ಛ ಭಾರತ ಅಭಿಯಾನಕ್ಕೆ ಚಾಲನೆಚಾಕು ಅಲ್ಲ ಒಮಾನ್‌ ಪೈಲಟ್‌ ಮಚ್ಚರ್‌ಗೆ ಹೊಡೆದಿದ್ದು ಕೊಡಲಿಯಿಂದ!KSRTC ಬಸ್, ಲಾರಿ ಮಧ್ಯೆ ಭೀಕರ ಅಪಘಾತ – ಬಸ್ ಚಾಲಕ ದುರ್ಮರಣ, ಹಲವರಿಗೆ ಗಾಯಜನರಿಗೆ ಗುಡ್ ನ್ಯೂಸ್: ಸರ್ಕಾರದಿಂದ ಇ-ಕೆವೈಸಿ ಆ್ಯಪ್ ಬಿಡುಗಡೆ ಇಬ್ಬರನ್ನು ಬಲಿ ಪಡೆದಿದ್ದ ‘ಶೌರ್ಯ’ ಸೆರೆಹಿಡಿದ ಏಳೇ ತಿಂಗಳಲ್ಲಿ ಸಾವುಬಸ್ ನಿಲ್ದಾಣದಲ್ಲಿ ಹುಡುಗಿಯರ ಫೋಟೋ ತೆಗೆಯುತ್ತಿದ್ದ ವ್ಯಕ್ತಿಗೆ ಧರ್ಮದೇಟು – ಮೊಬೈಲ್‌ನಲ್ಲಿ ಅಶ್ಲೀಲ ಚಿತ್ರಗಳು ಪತ್ತೆಪರಪ್ಪನ ಅಗ್ರಹಾರದಲ್ಲಿ ಮತ್ತೆ ಮೊಬೈಲ್, ಸಿಮ್‌ ಪತ್ತೆ; ಆರೋಪಿಗಳ ವಿರುದ್ಧ FIRಕುರುಡುಮಲೆ ಗಣಪತಿಗೆ ಪೂಜೆ ಸಲ್ಲಿಸಿ ರಾಜ್ಯ ಪ್ರವಾಸಕ್ಕೆ ವಿಜಯೇಂದ್ರ ಚಾಲನೆರಾಜ್ಯದಲ್ಲಿ 1 ಕೋಟಿ ಮತದಾರರ ಹೆಸರು SIR ನೆಪದಲ್ಲಿ ಡಿಲೀಟ್ ಆಗಿದೆ: ಡಿಕೆಶಿ