LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ತಹಶೀಲ್ದಾರ್ ಕಚೇರಿಯಲ್ಲಿ ಕರ್ತವ್ಯದಲ್ಲಿದ್ದಾಗಲೇ ಕುಸಿದುಬಿದ್ದ ಎಫ್‌ಡಿಎ – ಚಿಕಿತ್ಸೆ ಫಲಿಸದೇ ಸಾವು

Advertisement
Advertisement
Advertisement

ಕಾರವಾರ: ಕರ್ತವ್ಯದಲ್ಲಿದ್ದ ವೇಳೆ ಏಕಾಏಕಿ ಎದೆನೋವು ಕಾಣಿಸಿಕೊಂಡು ಕಚೇರಿಯಲ್ಲೇ ಕುಸಿದುಬಿದ್ದ ಕಾರವಾರ ತಹಶೀಲ್ದಾರ್ ಕಚೇರಿಯ ಪ್ರಥಮ ದರ್ಜೆ ಸಹಾಯಕ ಪಂಡರಿನಾಥ್ ವಿ. ನಾಯ್ಕ (51) ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಮಂಗಳವಾರ ಬೆಳಗ್ಗೆ ಎಂದಿನಂತೆ ಕಚೇರಿಗೆ ಆಗಮಿಸಿದ್ದ ಪಂಡರಿನಾಥ್ ನಾಯ್ಕ ಅವರು ತಮ್ಮ ಕರ್ತವ್ಯದಲ್ಲಿ ತೊಡಗಿಸಿಕೊಂಡಿದ್ದರು. ಈ ವೇಳೆ ದಿಢೀರ್ ಎದೆನೋವು ಕಾಣಿಸಿಕೊಂಡಿದ್ದು, ಕೆಲವೇ ಕ್ಷಣಗಳಲ್ಲಿ ಕಚೇರಿಯಲ್ಲೇ ಕುಸಿದುಬಿದ್ದಿದ್ದಾರೆ.

ಘಟನೆ ಗಮನಿಸಿದ ಕಚೇರಿ ಸಿಬ್ಬಂದಿ ತಕ್ಷಣ ನೆರವಿಗೆ ಧಾವಿಸಿ, ತಹಶೀಲ್ದಾರ್ ಅವರ ಜೀಪ್‌ನಲ್ಲಿ ಅವರನ್ನು ಕಾರವಾರದ ಕ್ರಿಮ್ಸ್ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ವೈದ್ಯರು ತುರ್ತು ಚಿಕಿತ್ಸೆ ನೀಡಿದರೂ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬರದೆ ಮೃತಪಟ್ಟಿದ್ದಾರೆ. ಹೃದಯಾಘಾತದಿಂದ ಪಂಡರಿನಾಥ್ ನಾಯ್ಕ ಮೃತಪಟ್ಟಿರುವುದಾಗಿ ವೈದ್ಯರು ಮಾಹಿತಿ ನೀಡಿದ್ದಾರೆ.

ಕರ್ತವ್ಯದಲ್ಲಿದ್ದ ಸಿಬ್ಬಂದಿಯೊಬ್ಬರು ದಿಢೀರ್ ಮೃತಪಟ್ಟ ಸುದ್ದಿ ತಹಶೀಲ್ದಾರ್ ಕಚೇರಿ ಸಿಬ್ಬಂದಿ ಹಾಗೂ ಸಹೋದ್ಯೋಗಿಗಳಲ್ಲಿ ಆಘಾತ ಮೂಡಿಸಿದೆ. ಪಂಡರಿನಾಥ್ ನಾಯ್ಕ ಅವರ ಅಕಾಲಿಕ ನಿಧನಕ್ಕೆ ಕಚೇರಿ ಸಿಬ್ಬಂದಿ ಹಾಗೂ ಸಹೋದ್ಯೋಗಿಗಳು ಸಂತಾಪ ಸೂಚಿಸಿದ್ದಾರೆ. 

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೈ ಬೈ ಪಪ್ಪಾ ಎಂದು ಚೆನಾಬ್ ನದಿಗೆ ಜಿಗಿದ ಯುವತಿ – ವಿಡಿಯೋ ವೈರಲ್‌ವೈದ್ಯನಿಂದ ಯುವತಿಗೆ ಪ್ರಜ್ಞೆ ತಪ್ಪಿಸಿ ಅತ್ಯಾಚಾರ; FIR ದಾಖಲುರೀಲ್ಸ್‌ಗಾಗಿ 30 ಅಡಿ ಎತ್ತರದಿಂದ ಡ್ಯಾಂಗೆ ಜಿಗಿದ ವ್ಯಕ್ತಿ – ಎರಡೂ ಕಾಲುಗಳ ಮೂಳೆ ಮುರಿತಅಂಗನವಾಡಿ ಕಾರ್ಯಕರ್ತೆಯರ ವೇತನ 4,000 ರೂ. ಹೆಚ್ಚಳ – 5 ಲಕ್ಷದವರೆಗೆ ಆರೋಗ್ಯ ಸೇವೆ; ಸಿಎಂ ಯೋಗಿ ಬಂಪರ್‌ ಗಿಫ್ಟ್‌!ರಾಹುಲ್‌ ಗಾಂಧಿ ಪ್ರಯಾಣಿಸುತ್ತಿದ್ದ ಏರ್‌ ಇಂಡಿಯಾ ವಿಮಾನ 10 ನಿಮಿಷ ಆಗಸದಲ್ಲೇ ಗಿರಕಿ – 2ನೇ ಪ್ರಯತ್ನದಲ್ಲಿ ಸೇಫ್‌ ಲ್ಯಾಂಡಿಂಗ್!ಸಚಿವ ಸತೀಶ್‌ ಜಾರಕಿಹೊಳಿ ಬೆಂಗಳೂರು ನಿವಾಸದ ಮೇಲೆ ಇ.ಡಿ ದಾಳಿಸಚಿವ ಸತೀಶ್‌ ಜಾರಕಿಹೊಳಿ ಬೆಂಗಳೂರು ನಿವಾಸದ ಮೇಲೆ ಇ.ಡಿ ದಾಳಿತಹಶೀಲ್ದಾರ್ ಕಚೇರಿಯಲ್ಲಿ ಕರ್ತವ್ಯದಲ್ಲಿದ್ದಾಗಲೇ ಕುಸಿದುಬಿದ್ದ ಎಫ್‌ಡಿಎ – ಚಿಕಿತ್ಸೆ ಫಲಿಸದೇ ಸಾವುಬೆಂಗಳೂರು ಡಿಆರ್‌ಐ ಅಧಿಕಾರಿಗಳ ಕಾರ್ಯಾಚರಣೆ – 180 ನಕ್ಷತ್ರ ಆಮೆಗಳು ವಶಕ್ಕೆಕಚೇರಿ ಅಲೆದಾಟಕ್ಕೆ ಇನ್ಮುಂದೆ ಬ್ರೇಕ್!