LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬೈಕ್ ಪಾರ್ಕಿಂಗ್ ವಿಚಾರಕ್ಕೆ ಜಗಳ – ಚಾಕು ಇರಿದು ಮಹಿಳೆ ಹತ್ಯೆ, ಪತಿಗೆ ಗಂಭೀರ ಗಾಯ

Advertisement

ನವದೆಹಲಿ: ಬೈಕ್ ಪಾರ್ಕಿಂಗ್  ವಿಚಾರಕ್ಕೆ ಆರಂಭವಾದ ಜಗಳ ಭೀಕರ ಹತ್ಯೆಯಲ್ಲಿ ಅಂತ್ಯಗೊಂಡಿರುವ ಘಟನೆ ದೆಹಲಿಯ ನೈಋತ್ಯ ಭಾಗದ ಬಿಂದಾಪುರದಲ್ಲಿ  ನಡೆದಿದೆ.

ನೆರೆಹೊರೆಯವರೊಂದಿಗೆ ಉಂಟಾದ ವಾಗ್ವಾದದ ವೇಳೆ ಮಹಿಳೆಯೊಬ್ಬರನ್ನು ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದ್ದು, ಅವರ ಪತಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಆರ್ತಿ (32) ಮೃತ ಮಹಿಳೆ. ಆರ್ತಿ ಪತಿ ವಿಕ್ಕಿ ಕೂಡ ಗಂಭೀರ ಗಾಯಗೊಂಡಿದ್ದು, ಸಫ್ದರ್‌ಜಂಗ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. 

ಶನಿವಾರ ಮಧ್ಯಾಹ್ನ ಸುಮಾರು 2:50ರ ವೇಳೆಗೆ ಬಿಂದಾಪುರ ಪೊಲೀಸ್ ಠಾಣೆಗೆ ಕರೆ ಬಂದಿದ್ದು, ಎರಡು-ಮೂರು ಯುವಕರು ನನ್ನ ಮಗಳು ಮತ್ತು ಅಳಿಯನ ಹೊಟ್ಟೆಗೆ ಚಾಕುವಿನಿಂದ ಇರಿದಿದ್ದಾರೆ ಎಂದು ಆರ್ತಿ ಪೋಷಕರು ಮಾಹಿತಿ ನೀಡಿದ್ದರು. ತಕ್ಷಣವೇ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ. ಅಷ್ಟು ಹೊತ್ತಿಗಾಗಲೇ ಗಾಯಾಳುಗಳನ್ನು ದೀನದಯಾಳ ಉಪಾಧ್ಯಾಯ (ಡಿಡಿಯು) ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆಸ್ಪತ್ರೆಯಲ್ಲಿ ವೈದ್ಯರು ಆರ್ತಿಯನ್ನು ಪರೀಕ್ಷಿಸಿ ಮೃತಪಟ್ಟಿರುವುದಾಗಿ ಘೋಷಿಸಿದರು. 

ಗಂಭೀರವಾಗಿ ಗಾಯಗೊಂಡಿದ್ದ ವಿಕ್ಕಿಯನ್ನು ಹೆಚ್ಚಿನ ಚಿಕಿತ್ಸೆಗೆ ಸಫ್ದರ್‌ಜಂಗ್ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ರಸ್ತೆಯಲ್ಲಿ ಬೈಕ್ ಪಾರ್ಕಿಂಗ್ ವಿಚಾರವಾಗಿ ದಂಪತಿ ಮತ್ತು ನೆರೆಹೊರೆಯವರ ನಡುವೆ ವಾಗ್ವಾದ ನಡೆದಿರುವುದು ಬೆಳಕಿಗೆ ಬಂದಿದೆ. ಈ ವಾಗ್ವಾದ ತೀವ್ರ ಸ್ವರೂಪ ಪಡೆದು, ಆರೋಪಿಗಳು ಚಾಕುವಿನಿಂದ ದಾಳಿ ನಡೆಸಿದ್ದಾರೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ. 

ಪ್ರಕರಣದ ಸಂಬಂಧ 40 ವರ್ಷದ ಪಪ್ಪುವನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಮತ್ತೋರ್ವ ಆರೋಪಿ ಅಪ್ರಾಪ್ತ ಎಸ್ಕೇಪ್ ಆಗಿದ್ದಾನೆ. ಸದ್ಯ ಅಪ್ರಾಪ್ತನ ಪತ್ತೆಗೆ ಶೋಧ ಕಾರ್ಯ ಮುಂದುವರಿದಿದೆ. ಈ ಸಂಬಂಧ ಬಿಂದಾಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಚಿಕ್ಕೋಡಿಯ ಸಿಟಿಇ ಸಂಸ್ಥೆಯ ಡಿ.ಕೆ.ಶಹಾ ಪ್ರಾಥಮಿಕ ಶಾಲಾ ಮಕ್ಕಳಿಗೆ ಶುದ್ಧ ಕುಡಿಯುವ ನೀರಿನ ಯಂತ್ರ ಕೊಡುಗೆ; ಗಣ್ಯರಿಂದ ಸತ್ಕಾರಗ್ಯಾರಂಟಿ ಪರಿಷ್ಕರಣೆ ಅನಿವಾರ್ಯ, ಆದರೆ ನಿಲ್ಲಿಸಲ್ಲ: ಸಚಿವ ಸತೀಶ್ ಜಾರಕಿಹೊಳಿಧರ್ಮಸ್ಥಳದಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ: ಶಾಸಕರಿಂದ ಆಣೆ-ಪ್ರಮಾಣಕ್ಕೆ ನಿರ್ಧಾರಬೈಕ್ ಪಾರ್ಕಿಂಗ್ ವಿಚಾರಕ್ಕೆ ಜಗಳ – ಚಾಕು ಇರಿದು ಮಹಿಳೆ ಹತ್ಯೆ, ಪತಿಗೆ ಗಂಭೀರ ಗಾಯಬೆಂಗಳೂರಿನಲ್ಲಿ ಕಳಪೆ ರಸ್ತೆ ಕಾಮಗಾರಿ – ಕೃಷ್ಣ ಬೈರೇಗೌಡ ಕ್ಲಾಸ್‌ ಬೆನ್ನಲ್ಲೇ ಅಧಿಕಾರಿ ಅಮಾನತು, ಗುತ್ತಿಗೆದಾರನಿಗೆ ದಂಡ!ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಯೋಗ ಅಗತ್ಯ: ಯು.ಟಿ ಖಾದರ್ರಾಜ್ಯ ಬಿಜೆಪಿಯಲ್ಲಿ ಬದಲಾವಣೆ ತರಬೇಕು, ಯತ್ನಾಳ್‌ರನ್ನ ವಿಪಕ್ಷ ನಾಯಕನನ್ನಾಗಿ ಮಾಡಬೇಕು: ಕುಮಾರ್‌ ಬಂಗಾರಪ್ಪನಾನು ಅಡ್ಡ ಮತದಾನ ಮಾಡಿಲ್ಲ, ಮುಜುಗರ ಉಂಟು ಮಾಡಬೇಡಿ: ಚಂದ್ರು ಲಮಾಣಿ2 ಕೋಟಿ ವಿಮೆಗಾಗಿ ಗಂಡನನ್ನು ಕೊಂದ ಮಗಳು ಅರೆಸ್ಟ್ – ಊರಲ್ಲಿ ತಲೆ ಎತ್ತಲಾಗದೆ ತಾಯಿ ಆತ್ಮಹತ್ಯೆಸಂತೋಷದ ಬದುಕಿಗೆ ಯೋಗ ದಾರಿ : ವೀರಣ್ಣ ಚರಂತಿಮಠ