LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ʻನೀಟ್ ಪರೀಕ್ಷೆಗೂ ಮುಲ್ಲಾಗಳಿಗೂ ಏನ್ ಸಂಬಂಧ?ʼ ಎಂದಿದ್ದ ಸಿ.ಟಿ.ರವಿ ವಿರುದ್ಧ FIR

Advertisement
Advertisement

ಚಿಕ್ಕಮಗಳೂರು: ನೀಟ್ ಪರೀಕ್ಷೆಗೂ ಮುಲ್ಲಾಗಳಿಗೂ ಏನ್ ಸಂಬಂಧ? ಎಂಬ ಹೇಳಿಕೆ ನೀಡಿದ್ದ ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ವಿರುದ್ಧ ಚಿಕ್ಕಮಗಳೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಿನ್ನೆಲೆ ದೆಹಲಿಯಲ್ಲಿ ನಡೆಯುತ್ತಿರುವ ಪ್ರತಿಭಟನೆ ವಿರುದ್ಧ ಬಿಜೆಪಿ ವತಿಯಿಂದ ಚಿಕ್ಕಮಗಳೂರಿನಲ್ಲಿ ನಡೆದ ಯೂತ್ ಫಾರ್ ನೇಷನ್ ಕಾರ್ಯಕ್ರಮದಲ್ಲಿ ಮುಸ್ಲಿಮ್‌ ಸಮುದಾಯದ ವಿರುದ್ಧ ನಿಂದನಾತ್ಮಕ ಹೇಳಿಕೆ ನೀಡಿದ್ದ ಆರೋಪದ ಮೇಲೆ ಪ್ರಕರಣ ದಾಖಲಾಗಿದೆ.

ಚಿಕ್ಕಮಗಳೂರಿನ ಆಜಾದ್ ಪಾರ್ಕ್ ವೃತ್ತದಲ್ಲಿ ಆಯೋಜಿಸಿದ್ದ ಪ್ರತಿಭಟನಾ ಸಭೆಯಲ್ಲಿ ಸಿ.ಟಿ.ರವಿ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಸಂಬಂಧ ಸಂಸತ್ ಭವನದ ಬಳಿ ನಡೆದ ಪ್ರತಿಭಟನೆಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸುವ ಸಂದರ್ಭದಲ್ಲಿ ಮುಸ್ಲಿಂ ಸಮುದಾಯದವನ್ನ ಉದ್ದೇಶಿಸಿ ನೀಟ್ ಪರೀಕ್ಷೆಗೂ ಮುಲ್ಲಾಗಳಿಗೂ ಏನು ಸಂಬಂಧ? ಅವರ ಎದೆ ಸೀಳಿದರೆ ಮೂರು ಅಕ್ಷರವೂ ಇಲ್ಲ. ಅಂತಹವರು ನೀಟ್ ವಿರುದ್ಧ ಹೋರಾಟ ಮಾಡುತ್ತಿದ್ದಾರೆ. ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಬೇಕಂತೆ, ಮೋದಿ ಹಠವೋ ಅಂತೆ. ಅವರಿಗೂ ನೀಟ್ ಪ್ರಶ್ನೆ ಪತ್ರಿಕೆ ಲೀಕ್ ಆಗಿದ್ದಕ್ಕೂ ಏನ್‌ ಸಂಬಂಧ? ಅಂತಹ ವಿರೋಧಿಗಳು, ತುಕ್ಡೆ ಗ್ಯಾಂಗ್ ಗಳು ಅಲ್ಲಿ ಬಂದು ಮಾತಾಡ್ತಾರೆ. ತುಕ್ಡೆ ಗ್ಯಾಂಗ್ ಅಂದ್ರೆ ಯಾರು ಅಂತಾ ಗೊತ್ತಲ್ಲಾ. ಭಾರತ್ ತೇರೇ ತುಕ್ಡೆ ಹೋಂಗೆ, ಇನ್ ಶಾ ಅಲ್ಲಾ ಘೋಷಣೆ ಕೂಗಿದಂತೆ ತುಕ್ಕೆ ಗ್ಯಾಂಗ್ ಗಳು ಹೋರಾಟದಲ್ಲಿ ಭಾಗವಹಿಸುತ್ತಾರೆ ಎಂದು ಭಾಷಣ ಮಾಡಿದ್ದರು.

ಸಿ.ಟಿ ರವಿ ಅವರ ಈ ಹೇಳಿಕೆಯಿಂದ ಮುಸ್ಲಿಂ ಸಮುದಾಯದ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲಾಗಿದೆ ಎಂದು ಮುಸ್ಲಿಂ ಸಮುದಾಯ ಸಿ.ಟಿ.ರವಿ ವಿರುದ್ಧ ಅಸಮಾಧಾನ ಹೊರಹಾಕಿದ್ದರು. ಸಮುದಾಯವನ್ನ ನಿಂದಿಸಿ ಸಮಾಜದಲ್ಲಿ ದ್ವೇಷ ಮತ್ತು ಅಶಾಂತಿ ಎಬ್ಬಿಸಲು ಯತ್ನಿಸಲಾಗಿದೆ ಎಂದು ಜಾಮೀಯ ಮಸೀದಿ ಅಧ್ಯಕ್ಷ ಮುದಾಸೀರ್ ಪಾಷಾ ಸಿ.ಟಿ. ರವಿ ವಿರುದ್ಧ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದ್ವೇಷಪೂರಿತ ಭಾಷಣ ಮಾಡಿದ ಸಿ.ಟಿ. ರವಿ ಅವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ – ಯುವಸಮೂಹಕ್ಕೆ ಅತಿದೊಡ್ಡ ಗೆಲುವು, ಮಂಡಿಯೂರಿದ ಕೇಂದ್ರ ನೀರಿಗಾಗಿ ಹಾಹಾಕಾರ ಕಾಂಗ್ರೆಸ್ ಜಿಲ್ಲಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ಪ್ರಾರಂಭಬರ ಸಂಕಷ್ಟದಲ್ಲಿ ರೈತರಿಗೆ ಸಾಲಮನ್ನಾ ಸೇರಿ ತುರ್ತು ಪರಿಹಾರ ಘೋಷಿಸಲಿ: ಡಾ. ವೀರಣ್ಣ ಚರಂತಿಮಠಉದ್ಯೋಗ ಖಾತ್ರಿಯಲ್ಲಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಫಲವೃಕ್ಷೋದ್ಯಾನ: ಈಶ್ವರ ಖಂಡ್ರೆ3 ಲಕ್ಷದವರೆಗೆ ಆದಾಯ ಮಿತಿ ಹೆಚ್ಚಳ – ಸಿಎಂ ಜೊತೆ ಚರ್ಚಿಸಿ ತೀರ್ಮಾನ ಎಂದ ಸಚಿವ ಮುನಿಯಪ್ಪʻನೀಟ್ ಪರೀಕ್ಷೆಗೂ ಮುಲ್ಲಾಗಳಿಗೂ ಏನ್ ಸಂಬಂಧ?ʼ ಎಂದಿದ್ದ ಸಿ.ಟಿ.ರವಿ ವಿರುದ್ಧ FIRಕಾಂಗ್ರೆಸ್ ದೇಶದಲ್ಲಿ ಅರಾಜಕತೆ ಸೃಷ್ಟಿಸಲು ಮುಂದಾಗಿದೆ: ಯದುವೀರ್ ಒಡೆಯರ್ಬೆಂಗಳೂರು ಸ್ವಚ್ಛತೆಗೆ ಹೊಸ ಹೆಜ್ಜೆ; 100 ಬ್ಲಾಕ್‌ ಸ್ಪಾಟ್‌ಗಳ ಸ್ವಚ್ಛತಾ ಅಭಿಯಾನ ಪೂರ್ಣಹಾರಂಗಿ ಡ್ಯಾಮ್‌ನಿಂದ 5,000 ಕ್ಯೂಸೆಕ್ ನೀರು ಬಿಡುಗಡೆ ಸಾಧ್ಯತೆ – ಕಾವೇರಿ ನದಿಗೆ ಇಳಿಯದಂತೆ ಎಚ್ಚರಿಕೆ