LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬಿಡದಿ ಟೌನ್‌ಶಿಪ್ ಹೋರಾಟಗಾರರ ಮೇಲಿನ FIR ವಾಪಸ್ ಪಡೆಯಬೇಕು: ನಿಖಿಲ್ ಆಗ್ರಹ

Advertisement
Advertisement

ಬೆಂಗಳೂರು: ಬಿಡದಿ ಟೌನ್‌ಶಿಪ್  ಹೋರಾಟಗಾರರ ಮೇಲೆ ಸರ್ಕಾರ ಹಾಕಿರೋ FIR ಕೂಡಲೇ ರದ್ದು ಮಾಡಬೇಕು ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ  ಆಗ್ರಹ ಮಾಡಿದ್ದಾರೆ.

ಎಕ್ಸ್‌ ಖಾತೆಯಲ್ಲಿ ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅವರು ಸರ್ಕಾರದ ಕ್ರಮವನ್ನು ಖಂಡಿಸಿದ್ದಾರೆ. ಬಿಡದಿ ಟೌನ್‌ಶಿಪ್ ನೆಪದಲ್ಲಿ ಅಮಾಯಕ ರೈತರ ಮೇಲೆ FIR ದಾಖಲಿಸಿರುವ ಕಾಂಗ್ರೆಸ್ ಸರ್ಕಾರದ ದೌರ್ಜನ್ಯವನ್ನು ತೀವ್ರವಾಗಿ ಖಂಡಿಸುತ್ತೇನೆ. ಯಾವುದೇ ಮಾಹಿತಿ ಇಲ್ಲದೆ ರೈತರ ಭೂಮಿಗೆ ನುಗ್ಗಿ ಜಂಟಿ ಮಾಪನ (JMC) ಮಾಡಲು ಮುಂದಾಗಿದ್ದರು. ಅದನ್ನು ಪ್ರಶ್ನಿಸಿದ ರೈತರ ಹೋರಾಟವನ್ನು ಹತ್ತಿಕ್ಕಲು ಈ ಜನವಿರೋಧಿ ಸರ್ಕಾರ FIR ಅಸ್ತ್ರ ಬಳಸಿ ಬೆದರಿಸುತ್ತಿದೆ ಎಂದು ಕಿಡಿಕಾರಿದ್ದಾರೆ. 

ಕಾಂಗ್ರೆಸ್ (Congress) ಸರ್ಕಾರದ ಈ ದಬ್ಬಾಳಿಕೆಗೆ ನಮ್ಮ ರೈತ ಬಂಧುಗಳು ಹೆದರುವ ಅಗತ್ಯವಿಲ್ಲ. ನಿಮ್ಮ ನ್ಯಾಯಯುತ ಹೋರಾಟಕ್ಕೆ ಅಗತ್ಯವಿರುವ ಸಂಪೂರ್ಣ ಕಾನೂನು ನೆರವು ಹಾಗೂ ಬೆಂಬಲ ನೀಡಲು ನಾವೆಲ್ಲರೂ ನಿಮ್ಮೊಂದಿಗೆ ಸದಾ ಸಿದ್ಧರಿದ್ದೇವೆ. ಇನ್ನು 48 ಗಂಟೆಗಳ ಒಳಗೆ ರೈತರ ಮೇಲಿನ ಸುಳ್ಳು FIR ರದ್ದುಗೊಳಿಸಿ, ವಶಕ್ಕೆ ಪಡೆದಿರುವ ಅಮಾಯಕರನ್ನು ತಕ್ಷಣ ಬಿಡುಗಡೆ ಮಾಡಬೇಕು. ಇಲ್ಲದಿದ್ದರೆ ಈ ಜನವಿರೋಧಿ ಸರ್ಕಾರದ ವಿರುದ್ಧ ಹೋರಾಟ ಹಮ್ಮಿಕೊಳ್ಳುವುದು ನಿಶ್ಚಿತ ಎಂದು ಎಚ್ಚರಿಕೆ ನೀಡಿದ್ದಾರೆ.

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಒಂದು ತಿಂಗಳೊಳಗೆ ಭಾರತ್‌ ಜೋಡೋ ಯುವ ಸಂಘಗಳು ಅಸ್ತಿತ್ವಕ್ಕೆ: ಪರಮೇಶ್ವರ್‌ರಾಜಕೀಯ ಬೇರೆ, ಕೆಲಸ ಬೇರೆ – ಕೃಷ್ಣ ಬೈರೇಗೌಡ ಕಾರ್ಯವೈಖರಿಗೆ ಹೆಚ್‌ಡಿಡಿ ಶ್ಲಾಘನೆಉತ್ತರ ಕರ್ನಾಟಕದಲ್ಲಿ ಮಣ್ಣೆತ್ತಿನ ಅಮವಾಸ್ಯೆ ಸಂಭ್ರಮ – ಮಳೆಗಾಗಿ ವಿಶೇಷ ಪೂಜೆ, ಪ್ರಾರ್ಥನೆಬಿಡದಿ ಟೌನ್‌ಶಿಪ್ ಹೋರಾಟಗಾರರ ಮೇಲಿನ FIR ವಾಪಸ್ ಪಡೆಯಬೇಕು: ನಿಖಿಲ್ ಆಗ್ರಹಬೆಂಗಳೂರಿನಲ್ಲಿ ಭಾರತದ ಮೊದಲ ಸರ್ಕಾರಿ ಪ್ರಾಯೋಜಿತ AI ವಿವಿ ಸ್ಥಾಪನೆ: ಡಿಕೆಶಿಸುಪ್ರೀಂನಲ್ಲಿ ಲಾಲೂಗೆ ಬಿಗ್‌ ರಿಲೀಫ್‌ – ಸಿಬಿಐ ಅರ್ಜಿ ವಜಾ50 ಲಕ್ಷಕ್ಕಾಗಿ ಪತ್ನಿ, ಮಾವನ ಮೇಲೆ ಹಲ್ಲೆಗೆ ಯತ್ನ – PSIಗೆ ಪರಸ್ತ್ರೀ ವ್ಯಾಮೋಹ, ಕಾಮಪುರಾಣ ಬಯಲುಸಿದ್ದರಾಮಯ್ಯ ಇಳಿಸಲು ಹೈಕಮಾಂಡ್‌ಗೆ ಕೊಟ್ಟ ಭರವಸೆಯಂತೆ ಟೌನ್‌ಶಿಪ್‌ – ಡಿಕೆಶಿ ವಿರುದ್ಧ ಹೆಚ್‌ಡಿಡಿ ಸ್ಫೋಟಕ ಆರೋಪಕಲಾದಗಿಗೆ ಮೋಹನ್ ಭಾಗವತ್ ಭೇಟಿ- ಯುವ ಕಾರ್ಯಕರ್ತನ ಮನೆಯಲ್ಲಿ ಚಹಾ ಸೇವನೆCWMA ಸಭೆ ಬಳಿಕ ನಾಲೆಗಳಿಗೆ ನೀರು; ಈ ವಿಚಾರದಲ್ಲಿ ರಾಜಕೀಯ ಬೇಡ: ಚಲುವರಾಯಸ್ವಾಮಿ