LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಆಹಾರ ಸಾಕು, ಬೇರೆ ಖಾತೆ ಬೇಕು – ರಾಮಲಿಂಗಾರೆಡ್ಡಿ ಆಯ್ತು, ಈಗ ಮುನಿಯಪ್ಪ ಸರದಿ

ಬೆಂಗಳೂರು: ಹಿರಿಯ ಸಚಿವ ರಾಮಲಿಂಗಾರೆಡ್ಡಿ ಅವರ ಹಠಾತ್ ರಾಜೀನಾಮೆ ಬೆನ್ನಲ್ಲೇ, ಮತ್ತೊಬ್ಬ ಹಿರಿಯ ನಾಯಕ ಹಾಗೂ ಆಹಾರ ಸಚಿವ ಕೆ.ಎಚ್. ಮುನಿಯಪ್ಪ  ಅವರು ಬಹಿರಂಗವಾಗಿಯೇ ಅಸಮಾಧಾನದ ಬಾಂಬ್ ಸಿಡಿಸಿದ್ದಾರೆ.

ದೇವನಹಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, “ಖಾತೆ ಹಂಚಿಕೆಯಲ್ಲಿ ಸೀನಿಯಾರಿಟಿ ಕಾಯ್ದುಕೊಂಡಿಲ್ಲ, ಈ ತಾರತಮ್ಯ ಹೀಗೆಯೇ ಮುಂದುವರಿದರೆ 2028ರ ಚುನಾವಣೆಯಲ್ಲಿ ಪಕ್ಷಕ್ಕೆ ಭಾರಿ ಕಷ್ಟವಾಗಲಿದೆ” ಎಂದು ಸ್ಫೋಟಕ ಎಚ್ಚರಿಕೆ ನೀಡಿದ್ದಾರೆ.

ಕಳೆದ ಮೂರು ವರ್ಷಗಳಿಂದ ಆಹಾರ ಇಲಾಖೆಯನ್ನು ನಿಭಾಯಿಸಿರುವ ತಮಗೆ ಮತ್ತೆ ಅದೇ ಖಾತೆ ನೀಡಿರುವುದಕ್ಕೆ ಕೆ.ಎಚ್. ಮುನಿಯಪ್ಪ ತೀವ್ರ ಬೇಸರ ಹೊರಹಾಕಿದ್ದಾರೆ. “ನಾನು ರಾಜಕೀಯದಲ್ಲಿ 8 ಬಾರಿ ಗೆದ್ದಿರುವ ಅತ್ಯಂತ ಹಿರಿಯ ನಾಯಕ. ಸಂಪುಟದಲ್ಲಿ ಪ್ರೊಟೊಕಾಲ್ ಪ್ರಕಾರ ಸೀನಿಯಾರಿಟಿ ನೋಡಿ ಖಾತೆ ಹಂಚಬೇಕಿತ್ತು. ಸಮಾಜ ಕಲ್ಯಾಣ ಅಥವಾ ಕೃಷಿ ಇಲಾಖೆಯಂತಹ ಜನಸೇವೆಗೆ ನೇರ ಅವಕಾಶವಿರುವ ದೊಡ್ಡ ಖಾತೆ ನೀಡುವಂತೆ ನಾನು ಮೊದಲೇ ಕೇಳಿದ್ದೆ. ಆದರೆ ಹಂಚಿಕೆಯಲ್ಲಿ ಯಾವುದೇ ಸಮಾತೋಲನ ಕಾಯ್ದುಕೊಂಡಿಲ್ಲ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಪಕ್ಷದ ನಾಯಕತ್ವದ ವಿರುದ್ಧ ಮಾರ್ಮಿಕವಾಗಿ ಅಸಮಾಧಾನ ವ್ಯಕ್ತಪಡಿಸಿದ ಸಚಿವರು, “ನಾನು ಪಕ್ಷದಲ್ಲಿ ತಾಯಿ ಸ್ಥಾನದಲ್ಲಿದ್ದೇನೆ. ತಾಯಿಯಾದವಳು ಎಲ್ಲಾ ಮಕ್ಕಳನ್ನೂ ಒಂದೇ ಕಣ್ಣಿನಿಂದ, ಸಮಾನವಾಗಿ ನೋಡಬೇಕು. ನಾನು ಈಗಾಗಲೇ ಈ ಕುರಿತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್ ಗಾಂಧಿ ಅವರನ್ನು ಖುದ್ದಾಗಿ ಭೇಟಿಯಾಗಿ ಮನವಿ ಮಾಡಿದ್ದೇನೆ. ಗೊಂದಲಗಳಿಗೆ ಆಸ್ಪದ ನೀಡದೆ ನನ್ನ ಖಾತೆಯನ್ನು ತಕ್ಷಣ ಬದಲಾಯಿಸುತ್ತಾರೆ ಎಂಬ ನಂಬಿಕೆ ನನಗಿದೆ” ಎಂದಿದ್ದಾರೆ.

ಸಮಾಜ ಕಲ್ಯಾಣ, ಕೃಷಿ ಅಥವಾ ನೀರಾವರಿಯಂತಹ ಇಲಾಖೆಗಳನ್ನು ನೀಡಿದರೆ ಜನಸೇವೆ ಮತ್ತು ರೈತರಿಗೆ ಉತ್ತಮ ಕೊಡುಗೆ ನೀಡಲು ಸಾಧ್ಯವಾಗುತ್ತದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

Advertisement

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕನಕಪುರದ ಕಂಚನಹಳ್ಳಿ ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ – ನಿಟ್ಟುಸಿರು ಬಿಟ್ಟ ಜನಬೆಂಗಳೂರು ನಗರವನ್ನು ಮತ್ತಷ್ಟು ಬಲಪಡಿಸುವ ಅಗತ್ಯವಿದೆ: ಪರೋಕ್ಷವಾಗಿ ಖಾತೆ ಬಿಟ್ಟುಕೊಡಲ್ಲ ಎಂದ ಕೃಷ್ಣಬೈರೇಗೌಡಡಿಕೆಶಿ ನೇತೃತ್ವದ ಸರ್ಕಾರ ಫಸ್ಟ್ ಬಾಲಿಗೆ ಸಿಕ್ಸ್ ಹೊಡೆದು ಹಿಟ್ ವಿಕೆಟ್ ಆಗಿದೆ: ಸಿ.ಟಿ ರವಿ ವ್ಯಂಗ್ಯರಾಮಲಿಂಗಾರೆಡ್ಡಿ ನನ್ನ ಆಪ್ತ ಸ್ನೇಹಿತರು, ಮಾತಾಡಿ ಸಮಸ್ಯೆ ಬಗೆಹರಿಸಿಕೊಳ್ಳುತ್ತೇವೆ: ಡಿಕೆಶಿಅಸಮಾಧಾನಗೊಂಡಿದ್ದೇನೆ, ಕೊಟ್ಟ ಮಾತು ತಪ್ಪಿದ್ದಕ್ಕೆ ಮಂತ್ರಿ ಸ್ಥಾನಕ್ಕೆ ರಾಜೀನಾಮೆ – ಡಿಕೆಶಿಗೆ ರಾಮಲಿಂಗಾರೆಡ್ಡಿ ಶಾಕ್‌ಖಾತೆ ಹಂಚಿಕೆಯಾದ ಒಂದೇ ಗಂಟೆಯಲ್ಲಿ ಖಾದರ್‌ ಸರ್ಪ್ರೈಸ್ ವಿಸಿಟ್ – ಆಸ್ಪತ್ರೆ ಸಿಬ್ಬಂದಿ ಮೇಲೆ ಗರಂವಿವಿ ಸಹಾಯಕ ಪ್ರಾಧ್ಯಾಪಕಿಯ ನಿಗೂಢ ಹತ್ಯೆಅಣ್ಣಾಮಲೈ ರಾಜೀನಾಮೆ ಅಂಗೀಕಾರ – 6 ವರ್ಷಗಳ ಬಿಜೆಪಿ ಸಂಬಂಧ ಕೊನೆಗೊಳಿಸಿದ ಮಾಜಿ ಐಪಿಎಸ್‌ಆಹಾರ ಸಾಕು, ಬೇರೆ ಖಾತೆ ಬೇಕು – ರಾಮಲಿಂಗಾರೆಡ್ಡಿ ಆಯ್ತು, ಈಗ ಮುನಿಯಪ್ಪ ಸರದಿಭಾರತಕ್ಕೆ Su-57 ಸ್ಟೆಲ್ತ್ ಫೈಟರ್ ಜೆಟ್ ಆಫರ್‌ ನೀಡಿದ ಪುಟಿನ್‌