LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ʻಅಭಿಮನ್ಯುʼ ದಸರೆಯಲ್ಲಿ ಪಾಲ್ಗೊಳ್ಳಲು ಸರ್ಕಾರದಿಂದ ಗ್ರೀನ್‌ ಸಿಗ್ನಲ್‌!

Advertisement
Advertisement
Advertisement

ಮೈಸೂರು: ಈ ಬಾರಿಯ ದಸರಾ ಮಹೋತ್ಸವದಲ್ಲಿ ಅಭಿಮನ್ಯು ಆನೆ ಭಾಗವಹಿಸಲು ಕೊನೆಗೂ ಸರ್ಕಾರದಿಂದ ಗ್ರೀನ್‌ ಸಿಗ್ನಲ್‌ ಸಿಕ್ಕಿದೆ. ಅರಣ್ಯ ಸಚಿವ ರಾಮಲಿಂಗಾ ರೆಡ್ಡಿ ಅವರು ಈ ಸಂಬಂಧ ಅಧಿಕೃತ ಪ್ರಕಟಣೆ ಹೊರಡಿಸಿದ್ದಾರೆ.

ಒಟ್ಟಿನಲ್ಲಿ ಕೋಟ್ಯಂತರ ಅಭಿಮಾನಿಗಳ ಆಸೆಯಂತೆ 6 ಬಾರಿ ಅಂಬಾರಿ ಹೊತ್ತ ಅಭಿಮನ್ಯು ಈ ಬಾರಿ ನಿಶಾನೆ ಆನೆಯಾಗಿ ಜಂಬೂ ಸವಾರಿಯಲ್ಲಿ ಪಾಲ್ಗೊಳ್ಳಲಿದ್ದಾನೆ. 

ಪ್ರಕಟಣೆಯಲ್ಲಿ ಏನಿದೆ?
ಮೈಸೂರು ದಸರಾ ಕರ್ನಾಟಕದ ನಾಡಹಬ್ಬವಾಗಿದ್ದು, ನಾಡಿನ ಕಲೆ, ಸಂಸ್ಕೃತಿ, ಪರಂಪರೆ ಹಾಗೂ ವೈಭವವನ್ನು ವಿಶ್ವದಾದ್ಯಂತ ಸಾರುವ ಐತಿಹಾಸಿಕ ಉತ್ಸವವಾಗಿದೆ. ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿ ಉತ್ಸವದಲ್ಲಿ ದಸರಾ ಗಜಪಡೆಯ ಆನೆಗಳು ವರ್ಷಗಳಿಂದಲೂ ಪ್ರಮುಖ ಪಾತ್ರ ವಹಿಸುತ್ತಾ ಬಂದಿವೆ. ಈ ಮಹತ್ವದ ದಸರಾ ಪರಂಪರೆಯಲ್ಲಿ ಅಭಿಮನ್ಯು ಆನೆಯ ಸೇವೆ ಅತ್ಯಂತ ವಿಶೇಷ ಹಾಗೂ ಸ್ಮರಣೀಯವಾಗಿದೆ.

ಹಲವು ವರ್ಷಗಳ ಕಾಲ ದಸರಾ ಮಹೋತ್ಸವದಲ್ಲಿ ಭಾಗವಹಿಸಿ, ಅಂಬಾರಿ ಹೊರುವ ಜವಾಬ್ದಾರಿಯನ್ನು ಅತ್ಯಂತ ಶಿಸ್ತು, ಧೈರ್ಯ ಹಾಗೂ ಯಶಸ್ವಿಯಾಗಿ ನಿರ್ವಹಿಸುವ ಮೂಲಕ ಅಭಿಮನ್ಯು ಆನೆ ನಾಡಿನ ಜನರ ಪ್ರೀತಿ ಮತ್ತು ಗೌರವಕ್ಕೆ ಪಾತ್ರವಾಗಿದೆ.

ಅಭಿಮನ್ಯುವಿನ ದೀರ್ಘಕಾಲದ ಅಮೂಲ್ಯ ಸೇವೆಯನ್ನು ಸ್ಮರಿಸುವ ಉದ್ದೇಶದಿಂದ ಇತ್ತೀಚೆಗೆ ಆಯೋಜಿಸಲಾದ ಅಭಿಮನ್ಯು ಆನೆಯ ಬೀಳ್ಕೊಡುಗೆ/ಗೌರವ ಸಮಾರಂಭವು ಅತ್ಯಂತ ಯಶಸ್ವಿಯಾಗಿ ಹಾಗೂ ಅಚ್ಚುಕಟ್ಟಾಗಿ ನೆರವೇರಿದ್ದು, ಸಾರ್ವಜನಿಕರು ಹಾಗೂ ದಸರಾ ಅಭಿಮಾನಿಗಳಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಈ ಕಾರ್ಯಕ್ರಮವು ಅಭಿಮನ್ಯುವಿನ ಸೇವೆಗೆ ಸಲ್ಲಿಸಿದ ಗೌರವದ ಪ್ರತೀಕವಾಗಿದೆ.

ಇದರ ಮುಂದುವರಿದ ಭಾಗವಾಗಿ, ಮೈಸೂರು ದಸರಾ-2028ರ ಜಂಬೂಸವಾರಿ ಉತ್ಸವದಲ್ಲಿಯೂ ಅಭಿಮನ್ಯುವನ್ನು ಹೆಮ್ಮೆಯಿಂದ ಹಾಗೂ ಗೌರವಪೂರ್ವಕವಾಗಿ ಗಜಪಡೆಯೊಂದಿಗೆ ನಿಶಾನೆ ಆನೆಯಾಗಿ ಈ ವರ್ಷದ ಉತ್ಸವದಲ್ಲಿ ಘನ ಉಪಸ್ಥಿತಿವಹಿಸಿ ವಿಶೇಷ ಸ್ಥಾನ ಕಲ್ಪಿಸುವುದು ಸೂಕ್ತವಾಗಿದೆ.

ಅಭಿಮನ್ಯುವಿನಂತಹ ದಸರಾ ಪರಂಪರೆಯ ಹೆಮ್ಮೆಯ ಆನೆಯ ಹಲವು ವರ್ಷಗಳ ಸೇವೆಯನ್ನು ಗೌರವಿಸುವ ನಿಟ್ಟಿನಲ್ಲಿ 2028ರ ಜಂಬೂಸವಾರಿಯಲ್ಲಿ ಗೌರವಪೂರ್ವಕವಾಗಿ ಉಪಸ್ಥಿತಿಗೊಳಿಸುವುದರಿಂದ ದಸರಾ ಮಹೋತ್ಸವದ ವೈಭವ ಹಾಗೂ ಪರಂಪರೆಗೆ ಮತ್ತಷ್ಟು ಮೆರುಗು ಬರಲಿದೆ. ಆದ್ದರಿಂದ, ಮೈಸೂರು ದಸರಾ-2026ರ ಜಂಬೂಸವಾರಿ ಉತ್ಸವದಲ್ಲಿ ಅಭಿಮನ್ಯು ಆನೆಯನ್ನ ನಿಶಾನೆ ಆನೆಯನ್ನಾಗಿಸಿ, ಇದರ ಸೇವೆಯನ್ನು ಸ್ಮರಿಸುವಂತೆ ಸೂಕ್ತ ವ್ಯವಸ್ಥೆ ಹಾಗೂ ಕ್ರಮ ಕೈಗೊಳ್ಳಲು ಕೋರಿದೆ ಎಂದು ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಾಲ ಮನ್ನಾಕ್ಕೆ ನೆರವು ಕೋರಿ ದೆಹಲಿಗೆ ಸರ್ವಪಕ್ಷ ನಿಯೋಗ: ಡಿಕೆಶಿನಾನೇಕೆ U-Turn ತಗೋಬೇಕು? ನಾಲಿಗೆ ಮೇಲೆ ಹಿಡಿತ ಇರಲಿ, ಬೆಂಗಳೂರಿಗೆ ಬಿಜೆಪಿಯದ್ದೇ ಶಾಪ: ಡಿಕೆಶಿ ಕಿಡಿನಿಂತಿದ್ದ ಲಾರಿಗೆ ಕಾರು ಡಿಕ್ಕಿ – ಎಂಟು ಮಂದಿ ಎಂಜಿನಿಯರಿಂಗ್ ವಿದ್ಯಾರ್ಥಿಗಳು ದುರ್ಮರಣಸವದತ್ತಿಯಲ್ಲಿ ಕೂಲಿ ಕಾರ್ಮಿಕರಿಗೆ ಸಿಕ್ತು ಚಿನ್ನದ ನಿಧಿ!ರಿಯಲ್ ಎಸ್ಟೇಟ್ ಗುಂಗಿನಿಂದ ಹೊರಬಂದು ಪ್ರಜಾಸೇವೆ ನೆನಪಿಸಿಕೊಂಡ ಸಿಎಂಗೆ ಧನ್ಯವಾದ – ನಿಖಿಲ್‌ ಲೇವಡಿಬೆಳಗಾವಿಯಲ್ಲಿ ಭೀಕರ ರಸ್ತೆ ಅಪಘಾತ: ಇಬ್ಬರು ಯುವಕರ ದುರ್ಮರಣಬೈಕ್ ಕಳ್ಳನನ್ನು ಬಂಧಿಸಿದ ಬೆಳಗಾವಿ ಪೊಲೀಸರುಜನರ ಸಮಸ್ಯೆಗಳಿಗೆ ಸ್ಪಂದಿಸಿದ ಎಂಎಲ್‌ಸಿ ಚನ್ನರಾಜ ಹಟ್ಟಿಹೊಳಿಜನರ ಸಮಸ್ಯೆಗಳಿಗೆ ಸ್ಪಂದಿಸಿದ ಎಂಎಲ್‌ಸಿ ಚನ್ನರಾಜ ಹಟ್ಟಿಹೊಳಿಬೃಹತ್ ರಕ್ತದಾನ ಶಿಬಿರ: ಜಿಲ್ಲೆಯಲ್ಲಿ ಮೂರನೇ ಅತಿ ಹೆಚ್ಚು ರಕ್ತ ಸಂಗ್ರಹಿಸಿದ ಕೀರ್ತಿ ಖಾನಾಪೂರಕ್ಕೆ