LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಡಿಕೆಶಿ ಸ್ಪಷ್ಟನೆ

Advertisement
Advertisement

ಬೆಂಗಳೂರು: ಗ್ಯಾರಂಟಿ ಇದೆ, ಗ್ಯಾರಂಟಿ ಇರುತ್ತದೆ. ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ, ಆತಂಕಬೇಡ ಎಂದು ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಭರವಸೆ ನೀಡಿದ್ದಾರೆ.

 

ಸರ್ಕಾರ ಗ್ಯಾರಂಟಿ ಯೋಜನೆಯ ಪರಿಷ್ಕರಣೆಗೆ ಕೈ ಹಾಕಿದ ಬೆನ್ನಲ್ಲೇ ಸಾಮಾಜಿಕ ಜಾಲತಾಣದಲ್ಲಿ ಸಿಎಂ ಪೋಸ್ಟ್‌ ಪ್ರಕಟಿಸಿ ಸ್ಪಷ್ಟನೆ ನೀಡಿದ್ದಾರೆ.

ಕಾಂಗ್ರೆಸ್  ಸರ್ಕಾರದ ಜನಪರ ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿಯನ್ನು ಯಾವುದೇ ಕಾರಣಕ್ಕೂ ಸ್ಥಗಿತಗೊಳಿಸುವುದಿಲ್ಲ. ಈ ಯೋಜನೆಗಳನ್ನು ನಿಲ್ಲಿಸಲಾಗುತ್ತಿದೆ ಎಂಬ ವಿರೋಧ ಪಕ್ಷಗಳ ಸುಳ್ಳು ಪ್ರಚಾರ ಹಾಗೂ ವದಂತಿಗಳಿಗೆ ಸಾರ್ವಜನಿಕರು ಕಿವಿಗೊಡಬಾರದು ಎಂದು ಮನವಿ ಮಾಡಿದ್ದಾರೆ.  

ಕೆಲವರು ಮೃತಪಟ್ಟವರ ಹೆಸರಿನಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ಯೋಜನೆಗಳ ಲಾಭ ಪಡೆಯುತ್ತಿರುವುದು ಗಮನಕ್ಕೆ ಬಂದಿದೆ. ಹೀಗಾಗಿ ನಿಜವಾದ ಫಲಾನುಭವಿಗಳ ಹೆಸರು, ವಿಳಾಸ ಹಾಗೂ ಬ್ಯಾಂಕ್ ಖಾತೆ ವಿವರಗಳನ್ನು ದೃಢೀಕರಿಸಲು ಮರುಪರಿಶೀಲನೆ ಪ್ರಕ್ರಿಯೆ ಕೈಗೊಳ್ಳಲಾಗಿದೆ. ಇದು ಯೋಜನೆಗಳನ್ನು ನಿಲ್ಲಿಸುವ ಕ್ರಮವಲ್ಲ, ಬದಲಾಗಿ ಅರ್ಹ ಫಲಾನುಭವಿಗಳಿಗೆ ಯೋಜನೆಯ ಸೌಲಭ್ಯಗಳು ಸಮರ್ಪಕವಾಗಿ ತಲುಪುವಂತೆ ಮಾಡುವ ಕ್ರಮವಾಗಿದೆ ಎಂದಿದ್ದಾರೆ.

ಫಲಾನುಭವಿಗಳು ಯಾವುದೇ ಆತಂಕಪಡಬೇಕಾದ ಅಗತ್ಯವಿಲ್ಲ, ಎಲ್ಲಾ ಗ್ಯಾರಂಟಿ ಯೋಜನೆಗಳು ಎಂದಿನಂತೆ ಮುಂದುವರಿಯಲಿವೆ ಎಂದು ತಿಳಿಸಿದ್ದಾರೆ.

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀತಿ ನಿರಾಕರಿಸಿದ್ದಕ್ಕೆ ಚಾಕುವಿನಿಂದ ಇರಿದು ಪ್ರೇಯಸಿಯ ಕೊಲೆಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಡಿಕೆಶಿ ಸ್ಪಷ್ಟನೆಯಾವ ಆಣೆ ಪ್ರಮಾಣ, ಎಲ್ಲಿಗೆ ಕರೆದುಕೊಂಡು ಹೋಗ್ತಾರೆ – ಬಾಲಕೃಷ್ಣ ವಿರುದ್ಧ ಹರಿಹಾಯ್ದ ಹೆಚ್‌ಡಿಕೆಬೇಕಾಬಿಟ್ಟಿ ಗ್ಯಾರಂಟಿ ಕೊಡೋದ್ರಿಂದ ಆರ್ಥಿಕತೆ ಮೇಲೆ ಪರಿಣಾಮ ಬೀರುತ್ತೆ: ನಿರ್ಮಲಾ ಸೀತಾರಾಮನ್‌ಬೆಂಗಳೂರಲ್ಲಿ ಪ್ರಿಯತಮೆಯ ಕತ್ತು ಹಿಸುಕಿ ಕೊಲೆ – ವಿಷ ಸೇವಿಸಿ ತಾನೂ ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರಬೆಂಗಳೂರಿನ ಮೂವರು ಯುವಕರು ಹೇಮಾವತಿ ನದಿಯಲ್ಲಿ ಮುಳುಗಿ ಸಾವುಸಂಪ್‌ಗೆ ಬಿದ್ದು ಮಗು ಸಾವು – ಮುಗಿಲು ಮುಟ್ಟಿದ ಪೋಷಕರ ಆಕ್ರಂದನತೆರೆದ ಬಾವಿಗೆ ಬಿದ್ದ ಪಿಕ್ ಅಪ್ ವಾಹನ – ಮಹಿಳೆಯರು, ಮಕ್ಕಳು ಸೇರಿ 8 ಮಂದಿ ದುರ್ಮರಣಅಭಿವೃದ್ಧಿ ಕಾರ್ಯಗಳ ಕುರಿತು ಸಮಾಲೋಚನೆ ನಡೆಸಿದ ಲಕ್ಷ್ಮೀ ಹೆಬ್ಬಾಳಕರ್ತುಷ್ಪಥ ರಸ್ತೆ ಕಾಮಗಾರಿ ವೀಕ್ಷಿಸಿದ ಸಂಸದ ಶೆಟ್ಟರ್