ರಾಯಚೂರು: ಶಾಲೆಯಲ್ಲಿದ್ದಾಗಲೇ ಎದೆನೋವು ಕಾಣಿಸಿಕೊಂಡು ಯುವ ಅತಿಥಿ ಶಿಕ್ಷಕರೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಮಸ್ಕಿ ತಾಲೂಕಿನ ಮೆದಿಕಿನಾಳ ಗ್ರಾಮದಲ್ಲಿ ನಡೆದಿದೆ.
ನಾಗರಬೆಂಚಿ ಗ್ರಾಮದ 29 ವರ್ಷದ ವೀರನಗೌಡ ಪಾಟೀಲ್ ಮೃತಪಟ್ಟಿರುವ ಶಿಕ್ಷಕ. ಮೆದಿಕಿನಾಳ ಸರ್ಕಾರಿ ಪ್ರೌಢ ಶಾಲೆಯಲ್ಲಿ ಅತಿಥಿ ಶಿಕ್ಷಕರಾಗಿದ್ದ ವೀರನಗೌಡ ಪಾಟೀಲ್ ಊಟದ ನಂತರ ಮಕ್ಕಳೊಂದಿಗೆ ಆಟವಾಡುತ್ತಿದ್ದ ವೇಳೆ ಕುಸಿದು ಬಿದ್ದಿದ್ದಾರೆ. ಕೂಡಲೇ ಮಸ್ಕಿಯ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಆಸ್ಪತ್ರೆಗೆ ದಾಖಲಿಸುವಷ್ಟರಲ್ಲೇ ಮಾರ್ಗಮಧ್ಯೆ ಸಾವನ್ನಪ್ಪಿದ್ದಾರೆ.
ಚಿಕ್ಕವಯಸ್ಸಿನಲ್ಲೇ ಶಿಕ್ಷಕ ಏಕಾಏಕಿ ಸಾವನ್ನಪ್ಪಿದ್ದಕ್ಕೆ ವಿದ್ಯಾರ್ಥಿಗಳು, ಸಹ ಶಿಕ್ಷಕರು ಆತಂಕಕ್ಕೊಳಗಾಗಿದ್ದಾರೆ.



