LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕರ್ನಾಟಕದಲ್ಲಿ 1 ವರ್ಷ ಗುಟ್ಕಾ, ಪಾನ್ ಮಸಾಲಾ ನಿಷೇಧ

Advertisement
Advertisement

ಬೆಂಗಳೂರು: ಕರ್ನಾಟಕ ಸರ್ಕಾರವು  ತಂಬಾಕು ಮತ್ತು ನಿಕೋಟಿನ್ ಹೊಂದಿರುವ ಗುಟ್ಕಾ ಹಾಗೂ ಪಾನ್ ಮಸಾಲಾಗಳ  ಉತ್ಪಾದನೆ, ಶೇಖರಣೆ, ವಿತರಣೆ, ಸಾಗಣೆ ಮತ್ತು ಮಾರಾಟವನ್ನು ರಾಜ್ಯಾದ್ಯಂತ ಒಂದು ವರ್ಷದ ಅವಧಿಗೆ ಸಂಪೂರ್ಣವಾಗಿ ನಿಷೇಧಿಸಿದೆ.

ಆಹಾರ ಭದ್ರತೆ ಮತ್ತು ಗುಣಮಟ್ಟ ಕಾಯ್ದೆ-2006 ರ ಸೆಕ್ಷನ್ 30(2)(a) ಹಾಗೂ ಆಹಾರ ಭದ್ರತೆ ಮತ್ತು ಗುಣಮಟ್ಟ (ಮಾರಾಟ ನಿಷೇಧ ಮತ್ತು ನಿರ್ಬಂಧಗಳು) ನಿಯಮಾವಳಿಗಳು-2011 ರ ನಿಯಮ 2.3.4 ರ ಅಡಿಯಲ್ಲಿ ರಾಜ್ಯ ಆಹಾರ ಸುರಕ್ಷತಾ ಆಯುಕ್ತರು ಈ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದ್ದಾರೆ. 

ಸಾರ್ವಜನಿಕ ಆರೋಗ್ಯ ಮತ್ತು ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ಕೈಗೊಳ್ಳಲಾಗಿದ್ದು, ಅಧಿಸೂಚನೆ ಹೊರಡಿಸಿದ ದಿನಾಂಕದಿಂದಲೇ ಈ ನಿಷೇಧ ಜಾರಿಗೆ ಬಂದಿದೆ.

ತಂಬಾಕು ಅಥವಾ ನಿಕೋಟಿನ್ ಅಂಶವನ್ನು ಪ್ರತ್ಯೇಕವಾಗಿ ಪ್ಯಾಕ್ ಮಾಡಿ, ನಂತರ ಗ್ರಾಹಕರು ಸುಲಭವಾಗಿ ಮಿಶ್ರಣ ಮಾಡಿ ಬಳಸುವಂತೆ ಮಾರಾಟ ಮಾಡುವ ಯಾವುದೇ ಉತ್ಪನ್ನಗಳಿಗೂ ಈ ನಿಷೇಧ ಅನ್ವಯವಾಗಲಿದೆ.

ಪ್ಯಾಕೆಟ್, ಸ್ಯಾಚೆಟ್ ಅಥವಾ ಯಾವುದೇ ಹೆಸರಿನಲ್ಲಿ ತಂಬಾಕು ಮತ್ತು ನಿಕೋಟಿನ್ ಮಿಶ್ರಿತ ಗುಟ್ಕಾ ಹಾಗೂ ಪಾನ್ ಮಸಾಲಾಗಳನ್ನು ರಾಜ್ಯದಾದ್ಯಂತ ಮಾರಾಟ ಮಾಡುವುದು ಸಂಪೂರ್ಣವಾಗಿ ಶಿಕ್ಷಾರ್ಹ ಅಪರಾಧವಾಗಿದೆ.

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವೇತನ ಹೆಚ್ಚಳಕ್ಕೆ ಆಗ್ರಹಿಸಿ ಚಾಲಕರ ಸ್ಟ್ರೈಕ್‌ – ಬಿಎಂಟಿಸಿ ಎಲೆಕ್ಟ್ರಿಕ್ ಬಸ್ ಸಂಚಾರ ಸ್ಥಗಿತ?ಪ್ರಜ್ವಲ್ ರೇವಣ್ಣ ಸೆಲ್‌ನಲ್ಲಿ ಮೊಬೈಲ್ ಪತ್ತೆ – ಜೈಲಾಧಿಕಾರಿ ಸಸ್ಪೆಂಡ್, SPಗೆ ಶೋಕಾಸ್ ನೋಟಿಸ್ಶಿವಗಂಗೆ ಟೆಕ್ಕಿ ಮಿಸ್ಸಿಂಗ್ ಕೇಸ್‌: ಪ್ಲ್ಯಾನ್ ಮಾಡಿಯೇ ಅದ್ವೈತ್ ನಾಪತ್ತೆ ?ತಮಿಳುನಾಡಿಗೆ ನೀರು ಬಿಟ್ರೆ ನಾನೇ ಹೋರಾಟ ಮಾಡ್ತೀನಿ: ಗಣಿಗ ರವಿಕುಮಾರ್ಜೈಲಲ್ಲಿ ಮೊಬೈಲ್ ಪತ್ತೆ | ಪ್ರಜ್ವಲ್ ರೇವಣ್ಣ ವಿರುದ್ಧ FIR – ಸಿಸಿಬಿ ಇನ್ಸ್‌ಪೆಕ್ಟರ್‌ ನೀಡಿದ ದೂರಿನಲ್ಲೇನಿದೆ?ಶಿವಂ ಅಸೋಸಿಯೇಟ್ಸ್, ಅಂಗ ಸಂಸ್ಥೆಗಳಿಂದ ಸುಮಾರು 2110 ಕೋಟಿ ವಂಚನೆ: ಇಡಿಡಿಕೆಶಿ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ – ಯಾರಿಗೆ ಯಾವ ಖಾತೆ?ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್. ಚಂದ್ರಶೇಖರನ್ ದಿಢೀರ್‌ ರಾಜೀನಾಮೆಯತೀಂದ್ರಗೆ ಆರೋಗ್ಯ ಇಲಾಖೆ? – ವಕ್ಫ್ ಖಾತೆಗೆ ಖಾದರ್‌ ಬೇಡಿಕೆವಾಟಾಳ್ ಕರೆ ನೀಡಿದ ‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ